ಬರ ಪರಿಹಾರ | ರಾಜ್ಯಕ್ಕಾದ ಅನ್ಯಾಯ ಒಪ್ಪಿಕೊಂಡ ನಿರ್ಮಲಾ ಸೀತಾರಾಮನ್‌ರಿಗೆ ಧನ್ಯವಾದಗಳು: ಡಿಕೆಶಿ

Update: 2024-04-07 15:11 GMT

ʻʻಬರ ಪರಿಹಾರ ವಿಚಾರದಲ್ಲಿ ರಾಜ್ಯಕ್ಕೆ ಆಗಿರುವ ಅನ್ಯಾಯವನ್ನು ಒಪ್ಪಿಕೊಂಡಿರುವ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಧನ್ಯವಾದಗಳುʼʼ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ.

ಬರ ಪರಿಹಾರ ವಿಳಂಬಕ್ಕೆ ಚುನಾವಣಾ ಆಯೋಗ ಕಾರಣ ಎಂಬ ಸಚಿವೆ ನಿರ್ಮಾಲಾ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಡಿಕೆಶಿ, ʻʻಬರ ಪರಿಹಾರಕ್ಕೂ ಚುನಾವಣೆಗೂ ಏನು ಸಂಬಂಧ? ಈ ಹೇಳಿಕೆ ಮೂಲಕ ರಾಜ್ಯಕ್ಕೆ ಬರ ಪರಿಹಾರ ಬರುವುದು ವಿಳಂಬವಾಗಿದ್ದು, ರಾಜ್ಯಕ್ಕೆ ಅನ್ಯಾಯ ಆಗಿದೆ ಎಂದು ಒಪ್ಪಿಕೊಂಡಿದ್ದಾರೆʼʼ ಎಂದು ಹೇಳಿದರು.

ʻʻಇಷ್ಟು ದಿನಗಳ ಕಾಲ ರಾಜ್ಯ ಸರ್ಕಾರದ ಮೇಲೆ ಆರೋಪ ಮಾಡುತ್ತಿದ್ದರು. ನಾವು ಬರ ಪರಿಹಾರ ನೀಡುವಂತೆ ಮನವಿ ನೀಡಿ ಎಷ್ಟು ತಿಂಗಳುಗಳಾಗಿವೆ? ನಾವು ಬರ ಪರಿಹಾರ ಮನವಿ ಕೊಟ್ಟ ಬಳಿಕ ನಾಲ್ಕು ತಿಂಗಳವರೆಗೂ ಯಾವುದೇ ಚುನಾವಣೆ ನೀತಿ ಸಂಹಿತೆ ಹಾಗೂ ಚುನಾವಣಾ ಆಯೋಗದ ನಿರ್ಬಂಧ ಇರಲಿಲ್ಲ. ಈಗ ಚುನಾವಣಾ ಆಯೋಗದ ನೆಪ ಹೇಳುತ್ತಿದ್ದಾರೆʼʼ ಎಂದು ತಿಳಿಸಿದರು.

ʻʻಕೇಂದ್ರ ಸರ್ಕಾರದ ಅಕ್ಷಮ್ಯ ಅಪರಾಧದ ಬಗ್ಗೆ ಜನರಿಗೂ ಅರಿವಾಗಿದೆ. ಈ ಮೂಲಕ ಡಿ.ಕೆ. ಸುರೇಶ್ ಅವರ ನಮ್ಮ ತೆರಿಗೆ ನಮ್ಮ ಹಕ್ಕು, ನಮ್ಮ ಪಾಲಿನ ಹೋರಾಟ ಒಪ್ಪಿಕೊಂಡಿದ್ದಾರೆ. ಹಾಗಾಗಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಧನ್ಯವಾದಗಳುʼʼ ಎಂದು ಹೇಳಿದ್ದಾರೆ.

Tags:    

Similar News