Drug Shortage | ಸರ್ಕಾರಿ ಆಸ್ಪತ್ರೆಗಳಲ್ಲಿ 250ಕ್ಕೂ ಹೆಚ್ಚು ಔಷಧ ಔಟ್ ಆಫ್ ಸ್ಟಾಕ್

ಟೆಂಡರ್‌ ವಿಳಂಬದಿಂದಾಗಿ ಔಷಧ ಪೂರೈಕೆ ಸ್ಥಗಿತಗೊಂಡಿದೆ. ಹೀಗಾಗಿ ಬಡ ರೋಗಿಗಳು ದುಬಾರಿ ಬೆಲೆ ಕೊಟ್ಟು ಖಾಸಗಿ ಆಸ್ಪತ್ರೆ ಹಾಗೂ ಮೆಡಿಕಲ್​ಗೆ ತೆರಳಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ.;

Update: 2024-11-19 08:41 GMT
ಸರ್ಕಾರಿ ಆಸ್ಪತ್ರೆಗಳಲ್ಲಿ 250 ರೀತಿಯ ಔಷಧಗಳ ಪೂರೈಕೆ ಸ್ಥಗಿತ

ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಗಳ ಕೊರತೆ ಉಂಟಾಗಿದ್ದು, ಒಟ್ಟು 250 ರೀತಿಯ ಔಷಧಗಳ ಕೊರತೆ ಉಂಟಾಗಿದೆ ಎಂಬ ಸಂಗತಿ ಬೆಳಕಿಗೆ ಬಂದಿದೆ. 

ಶ್ವಾಸಕೋಶ, ಕರುಳು, ರಕ್ತಹೀನತೆ, ನ್ಯಮೋನಿಯಾ, ಅಸ್ತಮಾ, ಮಧುಮೇಹ, ಬಿಪಿ, ಹೃದಯಾಘಾತ, ಕಣ್ಣಿನ ಸೋಂಕು ಸೇರಿದಂತೆ ಹಲವು ಗಂಭೀರ ಖಾಯಿಲೆಗಳಿಗೆ ನೀಡುವ ಔಷಧಗಳ ಕೊರತೆ ಉಂಟಾಗಿದ್ದು, ಅಲ್ಬುಮಿನಿ, ಆ್ಯಂಪ್ಸಿಲಿನ್, ಲೆವೊಥೈರಾಕ್ಸಿನ್, ವಿಲ್ಡಗ್ಲೀಪ್ಟನ್, ಪ್ಯಾರಸಿಟಮಲ್, ನ್ಯುಸ್ಟೊಜಿಮೈನ್, ಸಬ್ಲೋಟೊಮಲ್, ಅಸ್ಟೊಪೈನ್ ಸೇರಿದಂತೆ ವಿವಿಧ ಮಾತ್ರೆಗಳ ಸರಬರಾಜು ಸ್ಥಗಿತಗೊಂಡಿದೆ.

ಟೆಂಡರ್‌ ವಿಳಂಬದಿಂದ ಕೊರತೆ

ಟೆಂಡರ್‌ ವಿಳಂಬದಿಂದಾಗಿ ಔಷಧ ಪೂರೈಕೆ ಸ್ಥಗಿತಗೊಂಡಿದೆ. ಪೂರೈಕೆಯೂ ಸ್ಥಗಿತವಾಗಿದೆ. ಹೀಗಾಗಿ ಬಡ ರೋಗಿಗಳು ದುಬಾರಿ ಬೆಲೆ ಕೊಟ್ಟು ಖಾಸಗಿ ಆಸ್ಪತ್ರೆ ಹಾಗೂ ಮೆಡಿಕಲ್​ಗೆ ತೆರಳಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ. 

ಆದರೆ, ಆರೋಗ್ಯ ಇಲಾಖೆ ಅಧಿಕಾರಿಗಳು ಇದನ್ನು ನಿರಾಕರಿಸಿದ್ದು, ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮದಿಂದ ಔಷಧ ಖರೀದಿಗೆ ಟೆಂಡರ್‌ ಕರೆಯಲು ವಿಳಂಬವಾಗಿದೆ. ಆದರೆ 44 ರೀತಿಯ ಅಗತ್ಯ ಔಷಧ ಸೇರಿ ಹಲವು ಔಷಧಗಳನ್ನು ಸ್ಥಳೀಯವಾಗಿಯೇ ಖರೀದಿ ಮಾಡಲು ಅನುಮತಿ ನೀಡಲಾಗಿದೆ. ಹೀಗಾಗಿ ಜಿಲ್ಲಾ ಮಟ್ಟದ ಸಮಿತಿಗಳಿಂದಲೇ ಖರೀದಿ ಮಾಡಲಾಗುತ್ತಿದೆ. ಉಳಿದಂತೆ ತುರ್ತು ಔಷಧಗಳ ದಾಸ್ತಾನು ಕೂಡ ಲಭ್ಯವಿದ್ದು, ಶೇ.70ರಷ್ಟು ಔಷಧಗಳು ಲಭ್ಯವಿವೆ ಎಂದು ಹೇಳಿದ್ದಾರೆ.

ಔಷಧ ಕೊರತೆ ಇಲ್ಲ

ಈ ಬಗ್ಗೆ ಪ್ರತಿಕ್ರಿಯಿಸಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್‌, ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಮತ್ತು ಆರೋಗ್ಯ ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ. ಕೆಲವು ತಾಂತ್ರಿಕ ಕಾರಣದಿಂದಾಗಿ ಟೆಂಡರ್ ವಿಳಂಬವಾಗಿದೆ. ಈ ವರ್ಷವೂ ಇಂಡೆಂಟ್ ಪ್ರಕಾರವೇ ಔಷಧ ಖರೀದಿಗೆ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಆಸ್ಪತ್ರೆಗಳಲ್ಲಿ, ಆರೋಗ್ಯ ಕೇಂದ್ರಗಳಲ್ಲಿ ಯಾವ ಔಷಧ ಇಲ್ಲ ಅದನ್ನು ಸ್ಥಳೀಯವಾಗಿ ಖರೀದಿಸಲು ಸೂಚನೆ ನೀಡಲಾಗಿದೆ. ಈ ಮೂಲಕ, ಔಷಧ ಕೊರತೆಯಾಗದಂತೆ ನೋಡಿಕೊಳ್ಳಲು ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ. 

Tags:    

Similar News