DRUNK AND DRIVE | ಡಿಎಲ್ ರದ್ದು ಮಾಡಲು ಸಿದ್ದರಾಮಯ್ಯ ಸೂಚನೆ

Update: 2024-09-23 12:03 GMT

ಕುಡಿದು ವಾಹನ ಚಲಾಯಿಸುವವರ ಚಾಲನಾ ಪರವಾನಗಿಯನ್ನು ರದ್ದುಪಡಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್ ಸೂಚನೆ ನೀಡಿದ್ದಾರೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರ ʼಮುಖ್ಯಮಂತ್ರಿಗಳ ಆಪತ್ಕಾಲ ಯಾನ ಸೇವೆʼ ಯೋಜನೆಯಡಿ ಆಧುನಿಕ ಜೀವ ರಕ್ಷಕ ಸವಲತ್ತು ಒಳಗೊಂಡ ನೂತನ 65 ಆ್ಯಂಬುಲನ್ಸ್ ಗಳನ್ಮು ಲೋಕಾರ್ಪಣೆ ಮಾಡಿ ಅವರು ಮಾತನಾಡಿದರು.

ಸಂಚಾರಿ ನಿಯಮ ಪಾಲಿಸದೆ ವಾಹನ ಓಡಿಸುವವರ, ಕುಡಿದು ವಾಹನ ಚಲಾಯಿಸುವರ ಚಾಲನಾ ಪರವಾನಗಿಯನ್ನು ರದ್ದು ಮಾಡಿ ಎಂದು ಅವರು, ಕಾರ್ಯಕ್ರಮದಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಸೂಚನೆ ನೀಡಿದರು.

ಸಂಚಾರ ನಿಯಮಗಳನ್ನು ಶಿಸ್ತಿನಿಂದ ಪಾಲಿಸಿದರೆ ಬಹುತೇಕ ಅಪಘಾತಗಳು ಸಂಭವಿಸುವುದೇ ಇಲ್ಲ. ಕುಡಿದು ವಾಹನ ಓಡಿಸುವುದನ್ನು ನೂರಕ್ಕೆ ನೂರರಷ್ಟು ನಿಲ್ಲಿಸಿ. ನಿಮ್ಮ ಕುಟುಂಬಗಳನ್ನು ಅನಾಥ ಮಾಡಬೇಡಿ. ಮೊಬೈಲ್ನಲ್ಲಿ ಮಾತಾಡಿಕೊಂಡು ವಾಹನ ಓಡಿಸಿದರೆ ಅಪಘಾತಗಳಾಗದೆ ಇರುತ್ತದಾ ಎಂದು ಪ್ರಶ್ನಿಸಿದ ಸಿಎಂ, ನಿಮ್ಮ ಜೀವಕ್ಕೆ ನೀವೇ ಜವಾಬ್ದಾರಿ. ನಿಮ್ಮ ಕುಟುಂಬಕ್ಕೆ ನೀವೇ ಜವಾಬ್ದಾರಿ. ಆದ್ದರಿಂದ ಸಂಚಾರ ನಿಯಮಗಳನ್ನು ಕಟ್ಟು ನಿಟ್ಟಾಗಿ ಪಾಲಿಸಿ. ಸಂಚಾರ ನಿಯಮ ಪಾಲಿಸದೆ ವಾಹನ ಓಡಿಸುವವರ, ಕುಡಿದು ವಾಹನ ಚಲಾಯಿಸುವರ ಚಾಲನಾ ಪರವಾನಗಿಯನ್ನು ರದ್ದು ಮಾಡಿ ಎಂದು ಸಾರಿಗೆ ಸಚಿವರಿಗೆ ಸೂಚನೆ ನೀಡಿದರು.

ರಾಜ್ಯಾದ್ಯಂತ ಹೈಟೆಕ್ ಆ್ಯಂಬುಲೆನ್ಸ್

ಅಪಘಾತದ ಸಂದರ್ಭದಲ್ಲಿ ಗೋಲ್ಡರ್ ಹವರ್ ಬಹಳ ಮುಖ್ಯ. ಈ ಒಂದು ಗಂಟೆಯಲ್ಲಿ ಅಗತ್ಯ ತುರ್ತು ಚಿಕಿತ್ಸೆ ಸಿಕ್ಕರೆ ನೂರಾರು ಪ್ರಾಣಗಳನ್ನು ಉಳಿಸಲು ಸಾಧ್ಯವಿದೆ. ಈ ಪ್ರಾಣ ಉಳಿಸುವ ಕಾರ್ಯಕ್ಕೆ ಈ ಆ್ಯಂಬುಲೆನ್ಸ್ ಗಳು ನೆರವಾಗುತ್ತವೆ. ಸದ್ಯ 65 ಆಧುನಿಕ ಮತ್ತು ಪ್ರಾಥಮಿಕ ಆ್ಯಂಬುಲೆನ್ಸ್ ಗಳನ್ನು ಲೋಕಾರ್ಪಣೆ ಮಾಡಿದ್ದೇವೆ. ಮುಂದಿನ ದಿನಗಳಲ್ಲಿ ಇಡೀ ರಾಜ್ಯಕ್ಕೆ ಆಧುನಿಕ ಸವಲತ್ತುಗಳಿರುವ ಆ್ಯಂಬುಲೆನ್ಸ್ ಗಳನ್ನು ವಿಸ್ತರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

Tags:    

Similar News