Malnad Earthquake | ಉತ್ತರಕನ್ನಡ ಜಿಲ್ಲೆಯ ಹಲವೆಡೆ ಭೂಕಂಪನ

ಜಿಲ್ಲೆಯ ಶಿರಸಿ, ಸಿದ್ದಾಪುರ, ಕುಮಟಾ, ಯಲ್ಲಾಪುರ ತಾಲೂಕಿನ ಕೆಲವೆಡೆ ಲಘು ಭೂಕಂಪನದ ಅನುಭವವಾಗಿದೆ. ಭಾನುವಾರ ಮಧ್ಯಾಹ್ನ 12 ಗಂಟೆ ಸುಮಾರಿಗೆ ಭೂಮಿ ಕಂಪಿಸಿದ ಅನುಭವವಾಗಿದೆ.

Update: 2024-12-02 06:24 GMT
ಉತ್ತರ ಕನ್ನಡದ ಹಲವು ಜಿಲ್ಲೆಗಳಲ್ಲಿ ಭೂಕಂಪದ ಅನುಭವವಾಗಿದೆ.
Click the Play button to listen to article

ಕಾರವಾರ ಜಿಲ್ಲೆಯಲ್ಲಿ  ಶಿರಸಿ, ಸಿದ್ದಾಪುರ, ಕುಮಟಾ, ಯಲ್ಲಾಪುರ ತಾಲೂಕಿನ ಕೆಲವೆಡೆ ಲಘು ಭೂಕಂಪನದ ಅನುಭವವಾಗಿದೆ.

ಭಾನುವಾರ ಮಧ್ಯಾಹ್ನ 12 ಗಂಟೆ ಸುಮಾರಿಗೆ ಭೂಕಂಪಿಸಿದ ಅನುಭವವಾಗಿದೆ. ಸಿದ್ದಾಪುರ ತಾಲೂಕಿನ ಹೆಗ್ಗರಣಿ, ಹೇರೂರು, ಶಿರಸಿ ತಾಲೂಕಿನ ಸಂಪಖಂಡ, ಗೋಳಿಮಕ್ಕಿ, ಮತ್ತಿಘಟ್ಟ ಸೇರಿದಂತೆ ಕೆಲ ಗ್ರಾಮಗಳಲ್ಲಿ 3 ಸೆಕೆಂಡ್​ ಭೂಮಿ ಕಂಪಿಸಿದ್ದು, ಜನ ಆತಂಕಕ್ಕೀಡಾಗಿದ್ದರು.

ಭಾನುವಾರ ಮಧ್ಯಾಹ್ನ ಸುಮಾರು 12 ಗಂಟೆ ವೇಳೆಗೆ ಮನೆಯಲ್ಲಿದ್ದವರಿಗೆ ಏಕಾಏಕಿ ಮನೆಯ ವಸ್ತುಗಳು ಕಂಪಿಸಿದ ಅನುಭವವಾಗಿದೆ. ಹಲವರಿಗೆ ಕುಳಿತ ಕುರ್ಚಿ, ಸೋಫಾ ಅಲುಗಾಡಿದಂತಾಗಿದ್ದು, ಭೂಕಂಪ ಉಂಟಾಗಿರಬಹುದೆಂದು ಮನೆಯಿಂದ ಹೊರಗೆ ಬಂದಿದ್ದಾರೆ. ಅಲ್ಲದೇ ಅಕ್ಕಪಕ್ಕದವರೂ ಸಹ ತಮಗೂ ಅದೇ ರೀತಿ ಅನುಭವ ಆಗಿದ್ದನ್ನು ಹೇಳಿಕೊಂಡಿದ್ದರಿಂದ ಜನರು ಕೆಲಕಾಲ ಭಯಭೀತರಾಗಿದ್ದರು. ಆದರೆ ಅದರ ಬೆನ್ನಲ್ಲೇ ಜಿಲ್ಲಾಡಳಿತ ಸ್ಪಷ್ಟನೆ ನೀಡಿ, ರಿಕ್ಟರ್ ಮಾಪಕದಲ್ಲಿ ಯಾವುದೇ ರೀತಿಯ ಭೂಕಂಪನ ದಾಖಲಾಗಿಲ್ಲ ಎಂದು ತಿಳಿಸಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಉತ್ತರಕನ್ನಡದ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ 'ನಾವು ನೈಸರ್ಗಿಕ ಪ್ರಕೃತಿ ವಿಕೋಪ ಕೇಂದ್ರದಲ್ಲಿ ವಿಚಾರಿಸಿದ್ದೇವೆ. ಯಾವುದೇ ರೀತಿಯ ಭೂಕಂಪನವಾಗಿಲ್ಲ. ರಿಕ್ಟರ್ ಮಾಪನದಲ್ಲೂ ದಾಖಲಾಗಿಲ್ಲ, ಹೀಗಾಗಿ ಜನ ಭಯಪಡುವ ಅವಶ್ಯಕತೆ ಇಲ್ಲ. ಇನ್ನು ಈ ಭಾಗದಲ್ಲಿ ಹೆದ್ದಾರಿ ಕಾಮಗಾರಿಗಾಗಿ ಯಾವುದೇ ಸ್ಫೋಟ ನಡೆಸಿಲ್ಲ. ಅಂತಹ ಚಟುವಟಿಕೆಯ ಬಗ್ಗೆ ಮಾಹಿತಿ ಪಡೆಯುತ್ತೇವೆ' ಎಂದು ಹೇಳಿದ್ದಾರೆ. ಯಾವುದೇ ಕಂಪನದ ಅನುಭವವಾದ್ರೆ ಸಾರ್ವಜನಿಕರು ಜಿಲ್ಲಾ ವಿಪತ್ತು ನಿರ್ವಹಣಾ ಕೇಂದ್ರ 1077 ಮತ್ತು 08382229857 ಸಂಖ್ಯೆಗೆ ಸಂಪರ್ಕಿಸಿ ಮಾಹಿತಿ ನೀಡಬಹುದಾಗಿದೆ ಎಂದು ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.

Tags:    

Similar News