Mangalore Robbery | ಇಡಿ ಅಧಿಕಾರಿಗಳ ಸೋಗಿನಲ್ಲಿ 30 ಲಕ್ಷ ರೂ. ದೋಚಿ ಪರಾರಿ

ಸತತ ಎರಡು ಗಂಟೆಗಳ ಕಾಲ ಮನೆಯಲ್ಲಿ ಪರಿಶೀಲನೆ ನಡೆಸಿ, ಕೊನೆಗೆ ಮನೆಯಲ್ಲಿದ್ದ ಸುಮಾರು 30 ಲಕ್ಷ ರೂ. ದೋಚಿ ಪರಾರಿಯಾಗಿದ್ದಾರೆ.;

Update: 2025-01-04 08:20 GMT
ಖದೀಮರು ಹಣವನ್ನು ದೋಚಿದ ಮನೆ
Click the Play button to listen to article

ಜಾರಿ ನಿರ್ದೇಶನಾಲಯ(ಇಡಿ) ಅಧಿಕಾರಿಗಳ ಸೋಗಿನಲ್ಲಿ ಬಂದ ಖದೀಮರು ಬೀಡಿ ಉದ್ಯಮಿಯೊಬ್ಬರ ಮನೆ ಮೇಲೆ ದಾಳಿ ಮಾಡಿ ಸುಮಾರು 30 ಲಕ್ಷ ರೂ. ದರೋಡೆ ಮಾಡಿ ಪರಾರಿಯಾಗಿರಿವ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬೋಳಂತೂರು ಸಮೀಪದ ನಾರ್ಶ ಎಂಬಲ್ಲಿ ಘಟನೆ ನಡೆದಿದೆ.

ಸುಲೈಮಾನ್ ಹಾಜಿ ಎಂಬುವರು ಸಿಂಗಾರಿ ಬೀಡಿ ಎಂಬ ಹೆಸರಿನ ಸಂಸ್ಥೆಯನ್ನು ಅನೇಕ ವರ್ಷಗಳಿಂದ ನಡೆಸುತ್ತಿದ್ದಾರೆ. ಶುಕ್ರವಾರ ತಡರಾತ್ರಿ ತಮಿಳುನಾಡು ಮೂಲದ ಖದೀಮರ ತಂಡ ಸುಲೈಮಾನ್ ಹಾಜಿ ಅವರ ಮನೆಗೆ ಕಾರಿನಲ್ಲಿ ಬಂದು ನಾವು ಇಡಿ ಅಧಿಕಾರಿಗಳು ಎಂದು ನಕಲಿ ದಾಳಿ ಮಾಡಿದ್ದಾರೆ. ಸತತ ಎರಡು ಗಂಟೆಗಳ ಕಾಲ ಮನೆಯಲ್ಲಿ ಪರಿಶೀಲನೆ ನಡೆಸಿ, ಮನೆಯಲ್ಲಿದ್ದ ಸುಮಾರು 30 ಲಕ್ಷ ರೂ. ನಗದು ದೋಚಿ ಪರಾರಿಯಾಗಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಟ್ಲ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ದಕ್ಷಿಣಕನ್ನಡ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಯತೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. 

Tags:    

Similar News