ವಿಧಾನ ಪರಿಷತ್ ಘೋಷಣೆ | 6 ಸ್ಥಾನಗಳಿಗೆ ಜೂ.3ರಂದು ಮತದಾನ

ಚುನಾವಣಾ ಆಯೋಗ ಕರ್ನಾಟಕ ವಿಧಾನ ಪರಿಷತ್ತಿನ ಆರು ಸ್ಥಾನಗಳಿಗೆ ಗುರುವಾರ ಚುನಾವಣಾ ದಿನಾಂಕ ಘೋಷಿಸಿದೆ.;

Update: 2024-05-03 07:55 GMT
ಕರ್ನಾಟಕ ವಿಧಾನಪರಿಷತ್ನ ಆರು ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದೆ.
Click the Play button to listen to article

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ತಿನ ಆರು ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದೆ.

ಲೋಕಸಭೆ ಚುನಾವಣೆಯ ಗದ್ದಲದ ನಡುವೆಯೇ ಕೇಂದ್ರ ಚುನಾವಣಾ ಆಯೋಗ ಕರ್ನಾಟಕ ವಿಧಾನ ಪರಿಷತ್ತಿನ ಆರು ಸ್ಥಾನಗಳಿಗೆ ಗುರುವಾರ( ಮೇ 2) ಚುನಾವಣಾ ದಿನಾಂಕ ಘೋಷಿಸಿದೆ. ರಾಜ್ಯದ ಮೂರು ಶಿಕ್ಷಕರ ಕ್ಷೇತ್ರ ಮತ್ತು ಮೂರು ಪದವೀಧರ ಕ್ಷೇತ್ರಗಳ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ಜೂನ್ 3ರಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆವರೆಗೆ ಮತದಾನ ನಡೆಯಲಿದೆ ಮತ್ತು ಜೂನ್ 6ರಂದು ಫಲಿತಾಂಶ ಪ್ರಕಟವಾಗಲಿದೆ.

ಆರು ಸದಸ್ಯರ ಅಧಿಕಾರವಧಿ ಅಂತ್ಯ

ಪದವೀಧರ ಕ್ಷೇತ್ರದಿಂದ ಡಾ. ಚಂದ್ರಶೇಖರ್ ಪಾಟೀಲ್, ಆಯನೂರು ಮಂಜುನಾಥ್, ಎ ದೇವೇಗೌಡ ಹಾಗೂ ಶಿಕ್ಷಕರ ಕ್ಷೇತ್ರದಿಂದ ವೈ ಎ ನಾರಾಯಣ ಸ್ವಾಮಿ, ಎಸ್ ಎಲ್ ಬೋಜೇಗೌಡ ಹಾಗೂ ಮರಿತಿಬ್ಬೇಗೌಡ ಅವರ ಅವಧಿ ಜೂನ್ 21 ಕ್ಕೆ ಮುಕ್ತಾಯಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಚುನಾವಣೆ ಘೋಷಣೆ ಆಗಿದೆ.

ಮೇ ೧೬ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ

ಈಶಾನ್ಯ ಪದವೀಧರ, ನೈಋತ್ಯ ಪದವೀಧರ, ಬೆಂಗಳೂರು ಪದವೀಧರ ಕ್ಷೇತ್ರ, ಆಗ್ನೇಯ ಶಿಕ್ಷಕರ ಕ್ಷೇತ್ರ, ನೈಋತ್ಯ ಶಿಕ್ಷಕರ ಕ್ಷೇತ್ರ, ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಚುನಾವಣೆ ನಡೆಯಲಿದ್ದು, ನಾಮಪತ್ರ ಸಲ್ಲಿಕೆಗೆ ಮೇ 16 ಕೊನೆಯ ದಿನಾಂಕವಾಗಿದ್ದು, ನಾಮಪತ್ರ ಹಿಂಪಡೆಯಲು ಮೇ 20 ಕೊನೆಯ ದಿನವಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಪ್ರಮುಖ ದಿನಾಂಕಗಳಿವು

• ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ - ಮೇ 16

• ನಾಮಪತ್ರ ಪರಿಶೀಲನೆ - ಮೇ 17

• ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನ - ಮೇ 20

• ಮತದಾನ ದಿನಾಂಕ - ಜೂನ್ 3

• ಮತದಾನ ಸಮಯ - ಬೆಳಗ್ಗೆ 8 ರಿಂದ ಸಂಜೆ 4

• ಮತ ಎಣಿಕೆ - ಜೂನ್ 6

ಪರಿಷತ್ ಸ್ಥಾನಕ್ಕೆ ಲಾಬಿ

ವಿಧಾನ ಪರಿಷತ್ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಗಳ ಚುನಾವಣೆ ಹಿನ್ನೆಲೆಯಲ್ಲಿ ಈಗಾಗಲೇ ಸಾಕಷ್ಟು ಆಕಾಂಕ್ಷಿಗಳು ಲಾಬಿ ನಡೆಸುತ್ತಿದ್ದಾರೆ. ಬಿಜೆಪಿ ತೊರೆದ ತೇಜಸ್ವಿನಿ ಗೌಡ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಇನ್ನು ಜೆಡಿಎಸ್ ತೊರೆದ ಮರಿತಿಬ್ಬೇಗೌಡ ಕೂಡಾ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಇನ್ನು ಲೋಕಸಭೆ ಮತ್ತು ವಿಧಾನಸಭೆ ಚುನಾವಣೆ ಟಿಕೆಟ್ ಕೈತಪ್ಪಿರುವ ನಾಯಕರು ಸಹ ಇದೀಗ ಪರಿಷತ್‌ ಟಿಕೆಟ್‌ಗಾಗಿ ಪೈಪೋಟಿ ನಡೆಸಿದ್ದಾರೆ.

Tags:    

Similar News