Save Bandipur: ಪರಿಸರವಾದಿಗಳಿಂದ ಮಾನವ ಸರಪಳಿ ನಿರ್ಮಿಸಿ ಬಂಡೀಪುರ ಉಳಿಸಿ ಅಭಿಯಾನ

ಹುಲಿಗಳು, ಚಿರತೆಗಳು ಮತ್ತು ಆನೆಗಳು ಸೇರಿದಂತೆ ಹಲವು ಅಳಿವಿನಂಚಿನಲ್ಲಿರುವ ಪ್ರಭೇದಗಳಿಗೆ ನೆಲೆಯಾಗಿರುವ ಬಂಡೀಪುರ ಅರಣ್ಯದಲ್ಲಿ ರಾತ್ರಿ ಸಂಚಾರ ನಿಷೇಧವನ್ನು ಮುಂದುವರಿಸಬೇಕೆಂದು ಅವರು ಒತ್ತಾಯಿಸಿದರು.;

Update: 2025-04-08 10:03 GMT

ಬಂಡೀಪುರ ಉಳಿಸಿ

ಬಂಡೀಪುರ ರಾಷ್ಟ್ರೀಯ ಉದ್ಯಾನವನದ ಮೂಲಕ ಹಾದು ಹೋಗುವ  ಹೆದ್ದಾರಿಯಲ್ಲಿ ರಾತ್ರಿ ಸಂಚಾರ ನಿಷೇಧ ತೆಗೆದುಹಾಕುವುದನ್ನು ವಿರೋಧಿಸಿ ಹಲವಾರು ಪರಿಸರವಾದಿಗಳು ಮಂಗಳವಾರ ಬೆಳಿಗ್ಗೆ ಮಾನವ ಸರಪಳಿ ರಚಿಸಿ ಪ್ರತಿಭಟನೆ ನಡೆಸಿದರು. 

ಬಂಡೀಪುರ ಉಳಿಸಿ' ಅಭಿಯಾನ ಪ್ರಾರಂಭಿಸಿರುವ ಪ್ರತಿಭಟನಾಕಾರರು, ಚಾಮರಾಜನಗರ ಜಿಲ್ಲಾ ಕೇಂದ್ರ ಪಟ್ಟಣದ ಭುವನೇಶ್ವರಿ ವೃತ್ತದಲ್ಲಿ ಮಾನವ ಸರಪಳಿ ರಚಿಸಿದರು. ಹುಲಿಗಳು, ಚಿರತೆಗಳು ಮತ್ತು ಆನೆಗಳು ಸೇರಿದಂತೆ ಹಲವು ಅಳಿವಿನಂಚಿನಲ್ಲಿರುವ ಪ್ರಭೇದಗಳಿಗೆ ನೆಲೆಯಾಗಿರುವ ಬಂಡೀಪುರ ಅರಣ್ಯದಲ್ಲಿ ರಾತ್ರಿ ಸಂಚಾರ ನಿಷೇಧ ಮುಂದುವರಿಸಬೇಕೆಂದು ಅವರು ಒತ್ತಾಯಿಸಿದರು.

ಈ ಪರಿಸರ ಸೂಕ್ಷ್ಮ ವಲಯದಲ್ಲಿ ರಾತ್ರಿ ಸಂಚಾರ ನಿಷೇಧ ತೆಗೆದುಹಾಕುವಂತೆ ಕೇರಳ ಸರ್ಕಾರ ಮಾಡಿದ ಮನವಿ ವಿಚಾರದಲ್ಲಿ ಕರ್ನಾಟಕ ಸರ್ಕಾರವು ಮೃದು ಧೋರಣೆ ವ್ಯಕ್ತಪಡಿಸುತ್ತಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿರುವ ಪ್ರತಿಭಟನಾಕಾರರು, ಕೇರಳದ ಯಾವುದೇ ಒತ್ತಡಕ್ಕೆ ಮಣಿಯಬಾರದು ಎಂದು ಒತ್ತಾಯಿಸಿದರು. 

ಬಂಡೀಪುರ ಹುಲಿ ಸಂರಕ್ಷಿತಾರಣ್ಯದಲ್ಲಿ ರಾತ್ರಿ ವಾಹನ ಸಂಚಾರ ನಿಷೇಧ ತೆಗೆದುಹಾಕುವ ಪ್ರಸ್ತಾಪದ ವಿರುದ್ಧ ಇತ್ತೀಚೆಗೆ ಹಲವಾರು ಪರಿಸರವಾದಿಗಳು, ರೈತರು ಮತ್ತು ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಕೇರಳ ವಯನಾಡು ಕ್ಷೇತ್ರದ ಸಂಸದೆ ಪ್ರಿಯಾಂಕ ಗಾಂಧಿ ಅವರ  ರಾಜಕೀಯ ಒತ್ತಡಕ್ಕೆ ಮಣಿದು ಈ ನಿಷೇಧ ತೆಗೆದುಹಾಕುವ ಚರ್ಚೆಗಳು ನಡೆಯುತ್ತಿವೆ ಎಂದು ಆರೋಪಿಸಲಾಗಿದೆ. 

Tags:    

Similar News