ರಾಜ್ಯಾದ್ಯಂತ ಎರಡು ದಿನ ಎಸ್ಕಾಂ ಆನ್‌ಲೈನ್‌ ಸೇವೆ ಸ್ಥಗಿತ

ಗುರುವಾರ ರಾತ್ರಿ 8.30 ರಿಂದ ಜುಲೈ 27, ಶನಿವಾರ ರಾತ್ರಿ 10 ಗಂಟೆಯವರೆಗೆ ವಿದ್ಯುತ್ ಬಿಲ್ ಪಾವತಿ, ಹೆಸರು ಬದಲಾವಣೆ, ಹೊಸ ಸಂಪರ್ಕಕ್ಕೆ ಅರ್ಜಿ ಸಲ್ಲಿಕೆಯಂತಹ ಯಾವುದೇ ಆನ್‌ಲೈನ್ ಸೇವೆಗಳು ಲಭ್ಯವಿರುವುದಿಲ್ಲ.

Update: 2025-07-22 13:31 GMT

ಹಿತಿ ತಂತ್ರಜ್ಞಾನ (ಐಟಿ) ವ್ಯವಸ್ಥೆಯನ್ನು ಉನ್ನತೀಕರಿಸುವ ಹಿನ್ನೆಲೆಯಲ್ಲಿ, ರಾಜ್ಯದ ಐದು ವಿದ್ಯುತ್ ಸರಬರಾಜು ಕಂಪನಿಗಳ (ಎಸ್ಕಾಂ) ಆನ್‌ಲೈನ್ ಸೇವೆಗಳು ಜುಲೈ 25ರ ರಾತ್ರಿಯಿಂದ ಜುಲೈ 27ರ ರಾತ್ರಿಯವರೆಗೆ ಲಭ್ಯವಿರುವುದಿಲ್ಲ. ಈ ಸಮಯದಲ್ಲಿ ವಿದ್ಯುತ್ ಬಿಲ್ ಪಾವತಿ ಸೇರಿದಂತೆ ಎಲ್ಲಾ ಆನ್‌ಲೈನ್ ಸೇವೆಗಳು ಸ್ಥಗಿತಗೊಳ್ಳಲಿವೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಸ್ಕಾಂ, ಸೆಸ್ಕ್, ಮೆಸ್ಕಾಂ, ಜೆಸ್ಕಾಂ ಮತ್ತು ಹೆಸ್ಕಾಂ ವ್ಯಾಪ್ತಿಯ ಗ್ರಾಹಕರಿಗೆ ಈ ಅಡಚಣೆ ಉಂಟಾಗಲಿದೆ. ಜುಲೈ 25, ಗುರುವಾರ ರಾತ್ರಿ 8.30 ರಿಂದ ಜುಲೈ 27, ಶನಿವಾರ ರಾತ್ರಿ 10 ಗಂಟೆಯವರೆಗೆ ವಿದ್ಯುತ್ ಬಿಲ್ ಪಾವತಿ, ಹೆಸರು ಬದಲಾವಣೆ, ಹೊಸ ಸಂಪರ್ಕಕ್ಕೆ ಅರ್ಜಿ ಸಲ್ಲಿಕೆಯಂತಹ ಯಾವುದೇ ಆನ್‌ಲೈನ್ ಸೇವೆಗಳು ಲಭ್ಯವಿರುವುದಿಲ್ಲ.

ಈ ಎರಡು ದಿನಗಳ ಅವಧಿಯಲ್ಲಿ, ಎಲ್ಲಾ ಎಸ್ಕಾಂಗಳ ಅಧಿಕೃತ ಜಾಲತಾಣಗಳು, ಬೆಸ್ಕಾಂ ಮಿತ್ರ ಮೊಬೈಲ್ ಆಪ್, ಹಾಗೂ ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಕೇಂದ್ರಗಳಲ್ಲಿನ ಆನ್‌ಲೈನ್ ಪಾವತಿ ಸೇವೆಗಳು ಕೂಡ ಕಾರ್ಯನಿರ್ವಹಿಸುವುದಿಲ್ಲ.

ಬೆಂಗಳೂರು, ಮೈಸೂರು, ಮಂಗಳೂರು, ಹುಬ್ಬಳ್ಳಿ-ಧಾರವಾಡ, ಕಲಬುರಗಿ, ಬೆಳಗಾವಿ ಸೇರಿದಂತೆ ರಾಜ್ಯದ ಬಹುತೇಕ ಎಲ್ಲಾ ಪ್ರಮುಖ ನಗರ ಮತ್ತು ಪಟ್ಟಣಗಳ ವ್ಯಾಪ್ತಿಯಲ್ಲಿ ಈ ಅಡಚಣೆ ಉಂಟಾಗಲಿದೆ. ಐಟಿ ವ್ಯವಸ್ಥೆಯ ಉನ್ನತೀಕರಣದ ಕಾರಣದಿಂದ ಉಂಟಾಗುವ ಈ ತಾತ್ಕಾಲಿಕ ಅಡಚಣೆಗೆ ಗ್ರಾಹಕರು ಸಹಕರಿಸಬೇಕು ಎಂದು ಬೆಸ್ಕಾಂ ಮನವಿ ಮಾಡಿದೆ.

Tags:    

Similar News