ಅಂತೂ ಇಂತೂ ಬೆಂಗಳೂರಿಗೆ ಎಂಟ್ರಿ ಕೊಟ್ಟ ವರುಣ
ಬೆಂಗಳೂರಿನ ಯಲಹಂಕ ಭಾಗದಲ್ಲಿ ಮಳೆ ಶುರುವಾಗಿದ್ದು ದಟ್ಟವಾದ ಮೋಡ ಆವರಿಸುತ್ತಿದೆ.;
By : The Federal
Update: 2024-04-19 13:54 GMT
ಬಿರು ಬೇಸಿಗೆಯಿಂದ ಕಂಗಾಲಾಗಿದ್ದ ಬೆಂಗಳೂರು ಜನ ಮಳೆ ಯಾವಾಗ ಎಂದು ಕಾಯುತ್ತಿದ್ದರು. ಇದೀಗ ಬೆಂಗಳೂರಿಗೆ ಮಳೆ ಎಂಟ್ರಿ ಕೊಟ್ಟಿದೆ.
ಇಂದು (ಏಪ್ರಿಲ್ 19) ನಗರದ ಯಲಹಂಕ, ಕೆಂಗೇರಿ ಸೇರಿದಂತೆ ಕೆಲವು ಭಾಗಗಳಲ್ಲಿ ತುಂತುರು ಮಳೆಯಾಗಿದೆ ಎಂದು ವರದಿಯಾಗಿದೆ. ಈ ಮೂಲಕ ಬಿಸಿಲಿನಿಂದ ಕಂಗೆಟ್ಟಿದ್ದ ಬೆಂಗಳೂರಿಗೆ ಮಳೆ ಕೊಂಚ ತಂಪೆರೆದಿದೆ. ಇನ್ನು ಉಳಿದ ಕಡೆಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ಮಳೆಯಾಗಬಹುದೆಂಬ ನಿರೀಕ್ಷೆಯಿದೆ.
ಶುಕ್ರವಾರ ಬೆಂಗಳೂರು ನಗರ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿತ್ತು. ಗುರುವಾರ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್‌ನಲ್ಲಿ ಮಳೆಯಾಗಿತ್ತು, ಮೈಸೂರು, ಮಂಡ್ಯ ಜಿಲ್ಲೆಗಳಲ್ಲಿ ಕೂಡ ಉತ್ತಮ ಮಳೆಯಾಗಿತ್ತು.