ಬೆಂಗಳೂರಿನ ಕಲಾಸಿಪಾಳ್ಯದಲ್ಲಿ ಸ್ಫೋಟಕ ತುಂಬಿದ್ದ ಬ್ಯಾಗ್ ಪತ್ತೆ
ಇಲ್ಲಿನ ಖಾಸಗಿ ಬಸ್ ನಿಲ್ದಾಣದ ಶೌಚಾಲಯದಲ್ಲಿ ಬುಧವಾರ ಮಧ್ಯಾಹ್ನ ಸ್ಫೋಟಕ ವಸ್ತುಗಳು ತುಂಬಿದ್ದ ಬ್ಯಾಗ್‌ನಲ್ಲಿ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿವೆ.;
ಬೆಂಗಳೂರಿನ ಕಲಾಸಿಪಾಳ್ಯದ ಬಿಎಂಟಿಸಿ ಬಸ್ ನಿಲ್ದಾಣದ ಬಳಿ ಸ್ಫೋಟಕಗಳು ತುಂಬಿದ್ದ ಬ್ಯಾಗ್ ಕಂಡು ಬಂದಿರುವುದು ಆತಂಕ ಸೃಷ್ಟಿಸಿದೆ.
ಇಲ್ಲಿನ ಬಸ್ ನಿಲ್ದಾಣದ ಶೌಚಾಲಯದಲ್ಲಿ ಬುಧವಾರ ಮಧ್ಯಾಹ್ನ ಸ್ಫೋಟಕ ವಸ್ತುಗಳು ತುಂಬಿದ್ದ ಬ್ಯಾಗ್‌ನಲ್ಲಿ ಆರು ಜಿಲೆಟಿನ್ ಕಡ್ಡಿಗಳು, ಡೆಟೋನೇಟರ್‌ಗಳು ಪತ್ತೆಯಾಗಿವೆ.
ಶೌಚಾಲಯದ ಹೊರಗೆ ಇಟ್ಟಿದ್ದ ಚೀಲವಿರುವ ಬಗ್ಗೆ ಭದ್ರತಾ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದರು. ಪೊಲೀಸರು ಮತ್ತು ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ತ್ವರಿತವಾಗಿ ಸ್ಥಳಕ್ಕೆ ಧಾವಿಸಿ, ಇಡೀ ಪ್ರದೇಶವನ್ನು ಸುತ್ತುವರೆದರು. ಕೂಡಲೇ ಪ್ರಯಾಣಿಕರನ್ನು ಬಸ್ ನಿಲ್ದಾಣದಿಂದ ತೆರವುಗೊಳಿಸಲಾಯಿತು.
ಪೊಲೀಸರು ಸುತ್ತಮುತ್ತಲಿನ ಸಿಸಿಟಿವಿ ಕ್ಯಾಮೆರಾ ದೃಶ್ಯಗಳನ್ನು ಪರಿಶೀಲಿಸುತ್ತಿದ್ದು, ಬ್ಯಾಗ್ ತಂದಿಟ್ಟ ವ್ಯಕ್ತಿಯ ಪತ್ತೆಗೆ ಮುಂದಾಗಿದ್ದಾರೆ. ಬಸ್ ನಿಲ್ದಾಣದ ಮೂಲೆ ಮೂಲೆಯಲ್ಲೂ ಪೊಲೀಸರು ತಪಾಸಣೆ ನಡೆಸಿದ್ದಾರೆ. ಕ್ರಶರ್, ಕ್ವಾರಿಗಳಲ್ಲಿ ಬಳಸುವ ಜಿಲೆಟಿನ್ ಕಡ್ಡಿಗಳನ್ನು ಯಾರೋ ತಂದು ಶೌಚಾಲಯದಲ್ಲಿ ಇರಿಸಿರುವುದು ಆತಂಕಕ್ಕೆ ಕಾರಣವಾಗಿದೆ.