ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 4ನೇ ಬಾರಿಯೂ ಫೇಲ್‌: ಮನನೊಂದ ಯುವತಿ ಸಾವಿಗೆ ಶರಣು

ಮೃತ ಯುವತಿಯನ್ನು ತನುಶ್ರೀ (17) ಎಂದು ಗುರುತಿಸಲಾಗಿದ್ದು, ಆಕೆ ರವಿ ಮತ್ತು ಶ್ವೇತಾ ದಂಪತಿಗಳ ಪುತ್ರಿ ಆಗಿದ್ದಾಳೆ.;

Update: 2025-07-25 09:04 GMT

17 ವರ್ಷದ ಬಾಲಕಿ ತನುಶ್ರೀ ಆತ್ಮಹತ್ಯೆ ಮಾಡಿಕೊಂಡ ಯುವತಿ 

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 4ನೇ ಬಾರಿಗೆ ಫೇಲ್‌ ಆಗಿದ್ದಕ್ಕೆ ಮನನೊಂದ 17 ವರ್ಷದ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಕಾಚೋಹಳ್ಳಿ ಗ್ರಾಮದಲ್ಲಿ ನಡೆದಿದೆ.

ಮೃತ ಯುವತಿಯನ್ನು ತನುಶ್ರೀ (17) ಎಂದು ಗುರುತಿಸಲಾಗಿದೆ. ರವಿ ಮತ್ತು ಶ್ವೇತಾ ದಂಪತಿ ಪುತ್ರಿಯಾದ ತನುಶ್ರೀ ಬೆಂಗಳೂರು ಮಾಗಡಿ ರಸ್ತೆಯ ಬ್ಯಾಡರಹಳ್ಳಿಯ ಸರ್ಕಾರಿ ಶಾಲೆಯಲ್ಲಿ ಓದುತ್ತಿದ್ದಳು. ಈ ಬಾರಿಯ ಸಪ್ಲಿಮೆಂಟ್ರಿ ಪರೀಕ್ಷೆಯಲ್ಲಿ 3 ವಿಷಯಗಳಿಗೆ ಪರೀಕ್ಷೆ ಬರೆದಿದ್ದಳು. ಆದರೆ, ಗುರುವಾರ ಪ್ರಕಟವಾದ ಫಲಿತಾಂಶದಲ್ಲಿ (ಜು.24) ಮತ್ತೆ ಫೇಲ್ ಆಗಿದ್ದರು. ಮೊಬೈಲ್ ನಲ್ಲಿ ಫಲಿತಾಂಶ ನೋಡಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಪೋಷಕರು ಮನೆಯಲ್ಲಿಲ್ಲದ ವೇಳೆ ಅಡುಗೆ ಮನೆಯಲ್ಲಿದ್ದ ಫ್ಯಾನಿಗೆ  ನೇಣು ಬಿಗಿದುಕೊಂಡಿದ್ದಾಳೆ. ಘಟನೆ ಬೆಳಕಿಗೆ ಬಂದ ತಕ್ಷಣವೇ ಕುಟುಂಬಸ್ಥರು ಆಕೆಯನ್ನು ನೇಣು ಹಗ್ಗದಿಂದ ಕೆಳಗಿಳಿಸಿ ಪರೀಕ್ಷೆ ಮಾಡಿದ್ದಾರೆ. ಆ ವೇಳೆಗಾಗಲೇ ಪ್ರಾಣ ಹೋಗಿತ್ತು. 

ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ಶವವನ್ನು ರವಾನಿಸಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಈ ಬಗ್ಗೆ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.

Tags:    

Similar News