ರಾಮನಗರ| ಜಮೀನಿಗೆ ನೀರು ಹಾಯಿಸಲು ತೆರಳಿದ್ದ ರೈತ ಕಾಡಾನೆ ದಾಳಿಗೆ ಬಲಿ
ಬೆಂಗಳೂರು ದಕ್ಷಿಣ ಜಿಲ್ಲೆಯ ದುನ್ನಸಂದ್ರದ ರೈತ ದುಂಡಮಾದ (50) ಕಾಡಾನೆ ದಾಳಿಗೆ ಬಲಿಯಾದ ವ್ಯಕ್ತಿ. ಬೆಳಗಿನ ಜಾವ ತನ್ನ ಜಮೀನಿಗೆ ನೀರು ಹಾಯಿಸಲು ತೆರಳಿದ್ದ ರೈತನ ಮೇಲೆ ಏಕಾಏಕಿ ಕಾಡಾನೆ ದಾಳಿ ಮಾಡಿದ್ದು, ದುಂಡಮಾದ ಸ್ಥಳದಲ್ಲಿಯೇ ಮೃತ ಪಟ್ಟಿದ್ದಾರೆ.
ಕಾಡಾನೆ ದಾಳಿಗೆ ಬಲಿಯಾದ ರೈತ ದುಂಡಮಾದ
ಜಮೀನಿನಲ್ಲಿ ನೀರು ಹಾಯಿಸಲು ತೆರಳಿದ್ದ ರೈತ ಕಾಡಾನೆ ದಾಳಿಯಿಂದ ಮೃತಪಟ್ಟ ಘಟನೆ ರಾಮನಗರದ ಹಾರೋಹಳ್ಳಿ ತಾಲೂಕಿನ ದುನ್ನಸಂದ್ರದಲ್ಲಿ ನಡೆದಿದೆ. ಕಾಡು ಪ್ರಾಣಿಗಳ ಹಾವಳಿ ಕುರಿತು ನಿಗಾ ವಹಿಸದ ಅರಣ್ಯಾಧಿಕಾರಿಗಳ ಮೇಲೆ ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ.
ಬೆಂಗಳೂರು ದಕ್ಷಿಣ ಜಿಲ್ಲೆಯ ದುನ್ನಸಂದ್ರದ ರೈತ ದುಂಡಮಾದ (50) ಕಾಡಾನೆ ದಾಳಿಗೆ ಬಲಿಯಾದ ವ್ಯಕ್ತಿ. ಬೆಳಗಿನ ಜಾವ ತನ್ನ ಜಮೀನಿಗೆ ನೀರು ಹಾಯಿಸಲು ತೆರಳಿದ್ದ ರೈತನ ಮೇಲೆ ಏಕಾಏಕಿ ಕಾಡಾನೆ ದಾಳಿ ಮಾಡಿದ್ದು, ದುಂಡಮಾದ ಸ್ಥಳದಲ್ಲಿಯೇ ಮೃತ ಪಟ್ಟಿದ್ದಾರೆ. ಜಮೀನಿಗೆ ತೆರಳಿದ ರೈತ ಸಾಕಷ್ಟು ಸಮಯವಾದರೂ ಮನೆಗೆ ಮರಳದೇ ಇದ್ದಾಗ ಆತಂಕಗೊಂಡ ಕುಟುಂಬಸ್ಥರು ಪರಿಶೀಲನೆ ನಡೆಸಿದಾಗ ಆತ ಮೃತಪಟ್ಟಿರುವುದು ತಿಳಿದುಬಂದಿದೆ. ಈ ಕಾಡಾನೆ ಬನ್ನೇರುಘಟ್ಟ ಅರಣ್ಯ ಪ್ರದೇಶದಿಂದ ಬಂದಿದೆ ಎಂದು ಹೇಳಲಾಗುತ್ತಿದ್ದು, ಅರಣ್ಯ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಬೋಮ್ಮಲಾಪುರದಲ್ಲಿ ಮಠದ ಜಮೀನಿನಲ್ಲಿ ಮೇಯುತ್ತಿದ್ದ ಹಸುವನ್ನು ಹುಲಿ ಬಲಿ ಪಡೆದಿರುವ ಘಟನೆ ನಡೆದಿದೆ. ಮಹದೇವಪ್ಪ ಎಂಬುವವರಿಗೆ ಸೇರಿದ ಹಸುವನ್ನು ಭಾನುವಾರ ಬೆಳಗ್ಗೆ ಹುಲಿ ಬೇಟೆಯಾಡಿದೆ. ಇದುವರೆಗೆ ಜಿಲ್ಲೆಯಲ್ಲಿ 11 ಹಸುಗಳನ್ನು ಬಲಿ ಪಡೆದಿರು ಹುಲಿ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದ್ದು, ಗ್ರಾಮಸ್ಥರು ಬಂಡೀಪುರ ಅರಣ್ಯಾಧಿಕಾರಿಗಳ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯದ ವಿವಿಧ ಜಿಲ್ಲೆಗಳಾದ ಮೈಸೂರು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಇತ್ತೀಚೆಗೆ ಆನೆ ಮತ್ತು ಹುಲಿ ದಾಳಿ ಪ್ರಕರಣಗಳು ಹೆಚ್ಚಾಗಿದ್ದು, ಹಲವಾರು ರೈತರು ಮತ್ತು ಕಾರ್ಮಿಕರು ಪ್ರಾಣ ಕಳೆದುಕೊಂಡಿದ್ದಾರೆ. ಈ ಘಟನೆಗಳು ಕಾಡಂಚಿನ ಗ್ರಾಮಗಳ ನಿವಾಸಿಗಳಲ್ಲಿ ತೀವ್ರ ಆತಂಕ ಮತ್ತು ಆಕ್ರೋಶವನ್ನು ಮೂಡಿಸಿವೆ.