Federal Ground Report | ಭೂಸ್ವಾಧೀನಕ್ಕೆ ವಿರೋಧ; ಸಾವಿರ ದಿನದತ್ತ ಚನ್ನರಾಯಪಟ್ಟಣ ರೈತ ಹೋರಾಟ

ʼದ ಫೆಡರಲ್ ಕರ್ನಾಟಕʼ ತಂಡ ರಾಜಧಾನಿಯ ಕೂಗಳತೆ ದೂರದ ದೇವನಹಳ್ಳಿ ಬಳಿಯ ವಿವಿಧ ಹಳ್ಳಿಗಳಿಗೆ ತೆರಳಿ ಅಲ್ಲಿನ ರೈತರ ಸಮಸ್ಯೆ, ಕೆಐಎಡಿಬಿ ವಿರುದ್ಧ ಹೋರಾಟದ ಬಗ್ಗೆ ಮಾಡಿದ ಪ್ರತ್ಯಕ್ಷ ವರದಿ.

Update: 2024-12-07 02:30 GMT

ಕೆಐಎಡಿಬಿ ಬಲವಂತದ ಭೂಸ್ವಾಧೀನ ವಿರೋಧಿಸಿ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ 13 ಗ್ರಾಮಗಳ ರೈತರು ನಡೆಸುತ್ತಿರುವ ಹೋರಾಟ ಈಗ 1000 ದಿನ ಸಮೀಪಿಸುತ್ತಿದೆ.

ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ಹರಳೂರು ಕೈಗಾರಿಕಾ ಪ್ರದೇಶಕ್ಕಾಗಿ ರೈತರು ಸಾವಿರಾರು ಎಕರೆ ಭೂಮಿ ಕಳೆದುಕೊಂಡಿದ್ದಾರೆ. ಆದರೆ, ಕೆಐಎಡಿಬಿ ಮತ್ತೊಂದು ಸುತ್ತಿನ ಭೂಸ್ವಾಧೀನ ಪ್ರಕ್ರಿಯೆಗೆ ಮುಂದಾಗಿರುವುದು ರೈತರ ವಿರೋಧಕ್ಕೆ ಕಾರಣವಾಗಿದೆ.

ಚನ್ನರಾಯಪಟ್ಟಣ ರೈತರ ಭೂಸ್ವಾಧೀನ ವಿರೋಧಿ ಹೋರಾಟದ ಹಿನ್ನೆಲೆಯಲ್ಲಿ ʼದ ಫೆಡರಲ್ ಕರ್ನಾಟಕʼ ತಂಡ ಹೋಬಳಿಯ ವಿವಿಧ ಗ್ರಾಮಗಳಿಗೆ ತೆರಳಿ ಅಲ್ಲಿನ ರೈತರ ಸಮಸ್ಯೆ, ಕೆಐಎಡಿಬಿ ವಿರುದ್ಧ ಹೋರಾಟ ಬಗ್ಗೆ ಕಂಡು, ಕೇಳಿ ದಾಖಲಿಸಿದ ಗ್ರೌಂಟ್ ರಿಪೋರ್ಟ್ ಇಲ್ಲಿದೆ.

Full View

ಕೃಷಿ ಹಾಗೂ ಹೈನುಗಾರಿಕೆ ಅವಲಂಬಿಸಿ ಬದುಕು ಕಟ್ಟಿಕೊಂಡಿರುವ ಇಲ್ಲಿನ ಬಹುತೇಕ ರೈತರು ತುಂಡು ಭೂಮಿ ಹೊಂದಿದ್ದಾರೆ. ಇದರಲ್ಲಿ ಹೂವು, ರೇಷ್ಮೆ, ದಾಳಿಂಬೆ ಸೇರಿದಂತೆ ವಿವಿಧ ತರಕಾರಿ ಬೆಳೆದು ರಾಜಧಾನಿ ಪೂರೈಸುತ್ತಿದ್ದಾರೆ. ಆದರೆ, ಅಳಿದುಳಿದ ತುಂಡು ಭೂಮಿಯನ್ನು ಕೆಐಎಡಿಬಿ ಕಿತ್ತುಕೊಂಡರೆ ಕುಟುಂಬಗಳು ಎಲ್ಲಿಗೆ ಹೋಗಬೇಕು, ಏನು ಮಾಡಬೇಕು ಎಂಬುದು ರೈತರ ಪ್ರಶ್ನೆಯಾಗಿದೆ.

ಈ ಹಿಂದೆ ವಿರೋಧ ಪಕ್ಷದ ನಾಯಕರಾಗಿದ್ದ ಈಗಿನ ಸಿಎಂ ಸಿದ್ದರಾಮಯ್ಯ, ಎಚ್.ಡಿ. ಕುಮಾರಸ್ವಾಮಿ ಸೇರಿದಂತೆ ಹಲವು ನಾಯಕರು ರೈತರ ಪ್ರತಿಭಟನಾ ಸ್ಥಳಕ್ಕೆ ಬಂದು ಹೋರಾಟಕ್ಕೆ ಬೆಂಬಲ ಸೂಚಿಸಿದ್ದರು. ಆದರೆ, ಅಧಿಕಾರಕ್ಕೆ ಬಂದ ನಂತರ ರೈತರ ಹೋರಾಟವನ್ನು ನಿರ್ಲಕ್ಷಿಸಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್. ಮುನಿಯಪ್ಪ ನಿವಾಸದ ಎದುರು ಪ್ರತಿಭಟನೆ ನಡೆಸಿದ್ದೆವು. ಸಿದ್ದರಾಮಯ್ಯ ಮುಖ್ಯಮಂತ್ರಿಯಾದ ಬಳಿಕ ಭೇಟಿ ಮಾಡಿ ಚರ್ಚಿಸಿದ್ದೆವು. ಆದರೆ, ಯಾವುದೇ ಪ್ರಯೋಜನವಾಗಿಲ್ಲ. ಸರ್ಕಾರದ ನಿರ್ಲಕ್ಷ್ಯ ಮುಂದುವರಿಸಿದರೆ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ರೈತ ಮುಖಂಡರು ಎಚ್ಚರಿಸಿದ್ದಾರೆ.

Tags:    

Similar News