Farmers Protest | ದೆಹಲಿ ಹೋರಾಟ ಬೆಂಬಲಿಸಿ 6ರಿಂದ ಫ್ರೀಡಂ ಪಾರ್ಕ್‍ನಲ್ಲಿ ಉಪವಾಸ ಸತ್ಯಾಗ್ರಹ

ಸಂಯುಕ್ತ ಕಿಸಾನ್ ಮೋರ್ಚಾ ಸಂಘಟನೆಯ ನೇತೃತ್ವದಲ್ಲಿ ನಡೆಯುತ್ತಿರುವ ಉಪವಾಸ ಸತ್ಯಾಗ್ರಹ ಬೆಂಬಲಿಸಿ ರಾಜ್ಯದಲ್ಲಿ ಡಿ.6ರಿಂದ ರೈತರ ಉಪವಾಸ ಸತ್ಯಾಗ್ರಹ ಕೈಗೊಳ್ಳಲಾಗುವುದು ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಹೇಳಿದ್ದಾರೆ.

Update: 2024-12-04 05:13 GMT
ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್
Click the Play button to listen to article

ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಕಾನೂನು ಖಾತರಿ ಮತ್ತು ರೈತರ ಸಾಲ ಸಂಪೂರ್ಣ ಮನ್ನಾಕ್ಕೆ ಆಗ್ರಹಿಸಿ ದೆಹಲಿ ಗಡಿಯಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ ಸಂಘಟನೆಯ ನೇತೃತ್ವದಲ್ಲಿ ನಡೆಯುತ್ತಿರುವ ಉಪವಾಸ ಸತ್ಯಾಗ್ರಹ ಬೆಂಬಲಿಸಿ ರಾಜ್ಯದಲ್ಲಿ ಡಿ.6ರಿಂದ ರೈತರ ಉಪವಾಸ ಸತ್ಯಾಗ್ರಹ ಕೈಗೊಳ್ಳಲಾಗುವುದು ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಹೇಳಿದ್ದಾರೆ. 

ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ದೆಹಲಿ ಗಡಿಯಲ್ಲಿ ನ.26ರಿಂದ ದೇಶದ ರೈತರ ಹಿತಕ್ಕಾಗಿ ರಾಷ್ಟ್ರೀಯ ರೈತ ಮುಖಂಡ ಜಗಜಿತ್ ಸಿಂಗ್ ದಲೈವಾಲ ನೇತೃತ್ವದಲ್ಲಿ ರೈತರು ನಡೆಸುತ್ತಿರುವ ನಡೆಸುತ್ತಿರುವ ಉಪವಾಸ ಸತ್ಯಾಗ್ರಹ ಆರನೇ ದಿನಕ್ಕೆ ಕಾಲಿಟ್ಟಿದೆ. ದಲೈವಾಲರ ಉಪವಾಸ ಬೆಂಬಲಿಸಿ ಕರ್ನಾಟಕದ ರೈತ ಸಂಘಟನೆಗಳು ಡಿ.6ರಿಂದ ಬೆಂಗಳೂರಿನ ಸ್ವಾತಂತ್ರ ಉದ್ಯಾನವನದಲ್ಲಿ ನಿರಂತರ ಉಪವಾಸ ಸತ್ಯಾಗ್ರಹ ನಡೆಸಲು ತೀರ್ಮಾನಿಸಿವೆ. ಕೇಂದ್ರ ಸರ್ಕಾರ ಚಳವಳಿನಿರತ ಮುಖಂಡರೊಂದಿಗೆ ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಿ ರೈತರನ್ನು ಉಳಿಸಬೇಕು ಎಂದು ಎಚ್ಚರಿಸುತ್ತಿದ್ದೇವೆ ಎಂದು ಆಗ್ರಹಿಸಿದ್ದಾರೆ.

ಕೃಷಿ ಉತ್ಪನ್ನಗಳ ಕನಿಷ್ಠ ಬೆಂಬಲ ಬೆಲೆಗೆ ಕಾನೂನು ಖಾತರಿ ಒದಗಿಸಬೇಕು. ಡಾ.ಸ್ವಾಮಿನಾಥನ್ ವರದಿಯಂತೆ ಬೆಂಬಲ ಬೆಲೆ ನಿಗದಿಯಾಗಬೇಕು. ರೈತರ ಸಾಲ ಸಂಪೂರ್ಣ ಮನ್ನಾ ಆಗಬೇಕು. 60 ವರ್ಷ ತುಂಬಿದ ರೈತರಿಗೆ ಪಿಂಚಣಿ ಯೋಜನೆ ಜಾರಿಗೊಳಿಸಬೇಕು. ಫಸಲ್ ಭೀಮಾ ಬೆಳೆ ವಿಮೆ ಯೋಜನೆ ತಿದ್ದುಪಡಿಯಾಗಬೇಕು ಎಂದು ದೆಹಲಿ ಗಡಿಯಲ್ಲಿ ರೈತರು ಹೋರಾಟ ಮಾಡುತ್ತಿದ್ದಾರೆ. ಅವರಿಗೆ ಬೆಂಬಲ ಸೂಚಿಸುವ ಸಲುವಾಗಿ ರಾಜ್ಯದಲ್ಲಿ ನಾವು ಉಪವಾಸ ಸತ್ಯಾಗ್ರಹ ಕೈಗೊಳ್ಳಲಿದ್ದೇವೆ ಎಂದು ಅವರು ಮಾಹಿತಿ ನೀಡಿದರು. 

Tags:    

Similar News