Ankola Landslide| 72 ದಿನಗಳ ನಂತರ ಕೊನೆಗೂ ಸಿಕ್ಕಿತು ಅರ್ಜುನ್ ಮೃತದೇಹ
ಉತ್ತರಕನ್ನಡ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 66ರ ಶಿರೂರು ಗುಡ್ಡ ಕುಸಿತ ದುರಂತದಲ್ಲಿ ರಾಷ್ಟ್ರೀಯ ಹೆದ್ದಾರಿ 66ರ ಶಿರೂರು ಗುಡ್ಡ ಕುಸಿತ ದುರಂತದಲ್ಲಿ ನಾಪತ್ತೆಯಾಗಿರುವ ಕೇರಳ ಮೂಲದ ಲಾರಿ ಮತ್ತು ಚಾಲಕ ಅರ್ಜುನ್ ಶವ ಪತ್ತೆಯಾಗಿದೆ.;
ಉತ್ತರಕನ್ನಡ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 66ರ ಅಂಕೋಲ ಬಳಿಯ ಶಿರೂರು ಗುಡ್ಡ ಕುಸಿತ ದುರಂತದಲ್ಲಿ ನಾಪತ್ತೆಯಾಗಿರುವ ಕೇರಳ ಮೂಲದ ಲಾರಿ ಮತ್ತು ಚಾಲಕ ಅರ್ಜುನ್ ಶವ ಪತ್ತೆಯಾಗಿದೆ. ಗುಡ್ಡ ಕುಸಿತದ ಸಂದರ್ಭದಲ್ಲಿ ಅಪಾರ ಪ್ರಮಾಣದ ಮಳೆಯಾಗುತ್ತಿದ್ದ ಕಾರಣ ಗಂಗಾವಳಿ ನದಿಯಲ್ಲಿ ಪ್ರವಾಹದಲ್ಲಿ ಲಾರಿ ಸಮೇತ ಅರ್ಜುನ್ ನಾಪತ್ತೆಯಾಗಿದ್ದರು. ಇದೀಗ ಮುಳುಗು ತಜ್ಞರ ಸತತ ಪ್ರಯತ್ನದಿಂದ ಅರ್ಜುನ್ ಶವ ಸಿಕ್ಕಿದೆ.
ಕೇರಳ ಮೂಲದ ಚಾಲಕ ಅರ್ಜುನ್ ಓಡಿಸುತ್ತಿದ್ದ ಲಾರಿ ಪತ್ತೆಯಾಗಿತ್ತು. ಇದೀಗ ಲಾರಿಯೊಳಗೆ ಅರ್ಜುನನ ಮೃತದೇಹ ಎರಡು ತುಂಡಾಗಿ ಪತ್ತೆಯಾಗಿದೆ. ಗಂಗಾವಳಿ ನದಿಯಿಂದ ಲಾರಿ ಹಾಗೂ ಸಿಕ್ಕಿರುವ ಮೃತದೇಹವನ್ನು ಎತ್ತುವ ಕಾರ್ಯ ಮುಂದುವರೆದಿದೆ. ಕಳೆದ 72 ದಿನಗಳ ನಂತರ ನದಿಯಲ್ಲಿ ಲಾರಿ ಹಾಗೂ ಇಬ್ಬರ ಮೃತದೇಹಗಳು ಪತ್ತೆಯಾಗಿದೆ. ಗುಡ್ಡ ಕುಸಿತದ ರಭಸಕ್ಕೆ ನದಿಗೆ ಬಿದ್ದು ಲಾರಿ ನಜ್ಜುಗುಜ್ಜಾಗಿದೆ.
ಇಬ್ಬರು ಕಣ್ಮರೆಯಾದವರ ಬಗ್ಗೆ ನಡೆಯಬೇಕಿದೆ ಶೋಧ
ಕಳೆದ ಆರು ದಿನಗಳಿಂದ ಈ ಕಾರ್ಯಾಚರಣೆ ನಡೆಯುತ್ತಿದ್ದು, ಬಾರ್ಜ್ ಮೂಲಕ ನದಿಯಲ್ಲಿ ಲಾರಿ ಹಾಗೂ ನಾಪತ್ತೆಯಾದ ಮೂವರಿಗಾಗಿ ಹುಡುಕಾಟ ನಡೆಸಲಾಗುತ್ತಿತ್ತು. ಮೊನ್ನೆಯಷ್ಟೇ ನದಿಯಲ್ಲಿ ಕಾರ್ಯಾಚರಣೆ ನಡೆಸುವ ವೇಳೆ ಅರ್ಜುನ್ ಲಾರಿ ಪತ್ತೆಯಾಗಿತ್ತು. ಇದೀಗ ಅರ್ಜುನ ಮೃತದೇಹ ಸಿಕ್ಕಿದ್ದು, ಗುಡ್ಡಕುಸಿತದಲ್ಲಿ ಸಿಕ್ಕು ಲಾರಿ ಸಂಪೂರ್ಣ ನುಜ್ಜುಗುಜ್ಜಾಗಿದೆ. ಈ ಮೂಲಕ ಗುಡ್ಡಕುಸಿತ ಭೀಕರತೆಯನ್ನು ಈ ಲಾರಿ ತೋರಿಸುತ್ತಿದೆ.
ಜುಲೈ 16 ರಂದು ಅಂಕೋಲಾ ತಾಲೂಕಿನ ಶಿರೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭಿವಿಸಿದ್ದ ಗುಡ್ಡ ಭೂಕುಸಿತದಲ್ಲಿ 11 ಜನ ಮಣ್ಣಿನಲ್ಲಿ ಕೊಚ್ಚಿ ಹೋಗಿದ್ದರು. ಅದರಲ್ಲಿ 8 ಜನರನ್ನು ಪತ್ತೆ ಮಾಡಲಾಗಿತ್ತು. ಇನ್ನುಳಿದ ಕೇರಳ ಮೂಲದ ಲಾರಿ ಚಾಲಕ ಅರ್ಜುನ್, ಶಿರೂರಿನ ಲೋಕೇಶ್ ನಾಯ್ಕ ಹಾಗೂ ಜಗನ್ನಾಥ ನಾಯ್ಕ ಎಂಬುವವರಿಗಾಗಿ ಹುಡುಕಾಟ ನಡೆಸಲಾಗಿತ್ತು. ಇದೀಗ ಲಾರಿಯೊಳಗೆ ಅರ್ಜುನನ ಮೃತದೇಹ ಎರಡು ತುಂಡಾಗಿ ಪತ್ತೆ ಪತ್ತೆಯಾಗಿದೆ. ಇನ್ನೂ ಇಬ್ಬರು ಕಣ್ಮರೆಯಾದವರ ಬಗ್ಗೆ ಶೋಧ ನಡೆಯಬೇಕಿದೆ.
ಶಿರೂರು ಗುಡ್ಡ ಕುಸಿತದ ಮೊದಲ ಹಂತದಲ್ಲಿ 17 ದಿನ ನಡೆದರೆ,ಎರಡನೆ ಹಂತದ ಕಾರ್ಯಾಚರಣೆ 8 ದಿನ ನಡೆದಿತ್ತು. ಮೂರನೇ ಹಂತದ ಕಾರ್ಯಾಚರಣೆ ಸೆ20 ರಿಂದ 30ರವರೆಗೆ ನಡೆಸಲು ಅನುಮತಿ ಸಿಕ್ಕಿತ್ತು. ಮೂರನೇ ಹಂತದ ಕಾರ್ಯಾಚರಣೆಯ 6ನೇ ದಿನ ಅರ್ಜುನ್ ಶವ ಸಿಕ್ಕಿದೆ. ಇನ್ನು ಸ್ಥಳೀಯ ಇಬ್ಬರಿಗೂ ಶೋಧ ಕಾರ್ಯ ಮುಂದುವರಿಯಲಿದೆ.