ಕೋಮುದ್ವೇಷದ ಭಾಷಣ; ಕಲ್ಲಡ್ಕ ಪ್ರಭಾಕರ್‌ ಭಟ್‌ ವಿರುದ್ಧ ಎಫ್‌ಐಆರ್‌

ಅ.20 ರಂದು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಳಿಗೆಯಲ್ಲಿ ಆಯೋಜಿಸಿದ್ದ ದೀಪೋತ್ಸವ ಕಾರ್ಯಕ್ರಮದಲ್ಲಿ ಪ್ರಭಾಕರ್ ಭಟ್ ಅವರು ಕೋಮು ದ್ವೇಷ ಹರಡುವ ಹಾಗೂ ಮಹಿಳೆಯರ ಘನತೆಗೆ ಧಕ್ಕೆ ತರುವ ರೀತಿಯಲ್ಲಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

Update: 2025-10-26 10:58 GMT

ಕೋಮು ದ್ವೇಷ ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪದ ಮೇಲೆ ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಹಿಳಾ ಹೋರಾಟಗಾರ್ತಿ ಈಶ್ವರಿ ಪದ್ಮುಂಜ ಎಂಬುವರು ನೀಡಿದ ದೂರಿನ ಮೇರೆಗೆ ಬಿಎನ್ಎಸ್ ಕಾಯ್ದೆಯ 79, 196, 290, 302 ಹಾಗೂ 3(5) ಕಲಂಗಳಡಿ ಪ್ರಕರಣ ದಾಖಲಿಸಲಾಗಿದೆ.

ಅ.20 ರಂದು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಳಿಗೆಯಲ್ಲಿ ಆಯೋಜಿಸಿದ್ದ ದೀಪೋತ್ಸವ ಕಾರ್ಯಕ್ರಮದಲ್ಲಿ ಪ್ರಭಾಕರ್ ಭಟ್ ಅವರು ಕೋಮು ದ್ವೇಷ ಹರಡುವ ಹಾಗೂ ಮಹಿಳೆಯರ ಘನತೆಗೆ ಧಕ್ಕೆ ತರುವ ರೀತಿಯಲ್ಲಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಆರ್‌ಎಸ್‌ಎಸ್‌ ಮುಖಂಡ ಪ್ರಭಾಕರ ಭಟ್ ಭಾಷಣದ ವಿಡಿಯೊ ಖಾಸಗಿ ಯೂಟ್ಯೂಬ್ ಒಂದರಲ್ಲಿ ಪ್ರಸಾರವಾಗಿತ್ತು. ಧಾರ್ಮಿಕ ಭಾವನೆ ಕೆರಳಿಸಲು ರೀತಿ ಮಾತನಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಕಲ್ಲಡ್ಕ ಪ್ರಭಾಕರ್‌ ಭಟ್‌ ವಿರುದ್ಧ ಈ ಹಿಂದೆಯೂ ಹಲವು ಬಾರಿ ಕೋಮು ದ್ವೇಷ ಹರಡಿದ, ಕೋಮುಗಲಭೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಪ್ರಕರಣಗಳು ದಾಖಲಾಗಿದ್ದವು. ಇದು ತಿಳಿದಿದ್ದರೂ ದೀಪೋತ್ಸವ ಕಾರ್ಯಕ್ರಮಕ್ಕೆ ಪ್ರಭಾಕರ ಭಟ್ ಅವರನ್ನು ಆಹ್ವಾನಿಸಿ ಭಾಷಣ ಮಾಡಿಸಿರುವುದು ಒಂದು ಧರ್ಮವನ್ನು ಅವಮಾನಿಸುವ ಉದ್ದೇಶದಿಂದ ಕೂಡಿದೆ. ಈ ಕೃತ್ಯವನ್ನು ಕಾರ್ಯಕ್ರಮ ಆಯೋಜಕರು ಹಾಗೂ ಕಲ್ಲಡ್ಕ ಪ್ರಭಾಕರ ಭಟ್ ಅವರು ಜಂಟಿಯಾಗಿ ಮಾಡಿದ್ದಾರೆ. ಯಾವುದೇ ವ್ಯಕ್ತಿಯ ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸುವ ಪದಗಳನ್ನು ಉಚ್ಚರಿಸುವುದು ಅಥವಾ ಸನ್ನೆಗಳನ್ನು ಮಾಡಿರುವುದು ಬಿಎನ್ಎಸ್ ಕಾಯ್ದೆಯ 302 ರ ಪ್ರಕಾರ ಅಪರಾಧ. ಆದ್ದರಿಂದ ಆರೋಪಿತರ ವಿರುದ್ಧ ಕಠಿಣ ಕ್ರಮ ಕೈಗೊಂಡು ಈ ರೀತಿಯ ದ್ವೇಷಭಾಷಣಗಳು ಮರುಕಳಿಸದಂತೆ ಕಾನೂನು ಕ್ರಮ ಜರುಗಿಸಬೇಕೆಂದು ದೂರಿನಲ್ಲಿ ಮನವಿ ಮಾಡಿದ್ದಾರೆ.

ಕಲ್ಲಡ್ಕ ಪ್ರಭಾಕರ್ ಭಟ್ ಭಾಷಣ ಏನು?

‘ಆಚೆ ಮನೆಯಲ್ಲಿ ಒಬ್ಬಳು ಬ್ಯಾರಿ ಇದ್ದಳು. ಅವಳು 6ನೆಯದ್ದು ಮುಗಿದು 7ನೇ ಮಗುವಿಗೆ ಗರ್ಭಿಣಿಯಾಗಿದ್ದಳು. ಅವಳಿಗೆ ಯಾರಾದ್ರು ಕೇಳಿದ್ರಾ?, ನೀನು ನಾಯಿ ಮರಿ ಹಾಕಿದ ಹಾಗೆ ಹಾಕ್ತಾ ಇದ್ದೀಯಾ ಅಂತ, ಯಾರಿಗೂ ಕೇಳುವ ಧೈರ್ಯ ಇಲ್ಲ ಎಂದು ಹೇಳುವ ಮೂಲಕ ಮಹಿಳೆಯರನ್ನು ನಿಂದಿಸಿದ್ದರು. 

ಮುಂದುವರಿಸಿ, ʼ ಆ ಮಗು ಅಲ್ಲಾಹನಿಗೋಸ್ಕರ ಅನ್ನುತ್ತಾರೆ. ನೀವೇನಾದರೂ ಮಹಾಲಿಂಗೇಶ್ವರನಿಗಾಗಿ ಮಕ್ಕಳು ಮಾಡ್ತೀರಾ? ಎಂದು ಪ್ರಶ್ನಿಸಿದ್ದಲ್ಲದೇ ನಮ್ಮ ಜನಸಂಖ್ಯೆ ಜಾಸ್ತಿಯಾಗಬೇಕಾದರೆ ಮೂರಕ್ಕಿಂತ ಕಡಿಮೆ ಇಲ್ಲದಂತೆ ಮಕ್ಕಳು ಮಾಡಿಕೊಳ್ಳಬೇಕುʼ ಎಂದು ಕರೆ ಕೊಟ್ಟಿದ್ದರು.

ಮಂಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಹಿಂದೂ ಗೆಲ್ಲಲು ಸಾಧ್ಯವೇ ಇಲ್ಲ. ಅಲ್ಲಿ ಖಾದರರೇ ಗೆಲ್ಲೋದು. ಏಕೆಂದರೆ ಒಂದು ಲಕ್ಷದ ಹತ್ತು ಸಾವಿರ ಬ್ಯಾರಿಗಳದ್ದೇ ವೋಟು ಇದೆ. ಹಿಂದೂಗಳು 90 ಸಾವಿರ ಇರೋದು. ನಾವು ಗೆಲ್ಲೊದು ಯಾವಾಗ?, ಹೀಗೆ ಬಿಟ್ಟರೆ ನಮ್ಮನ್ನು ಸರ್ವನಾಶ ಮಾಡ್ತಾರೆ’. ಅದಕ್ಕಾಗಿ ನಮ್ಮ ಮನೆಯಲ್ಲಿ ಮೂರು ಮಕ್ಕಳಿಗಿಂತ ಕಡಿಮೆ ಇರಬಾರದು ಎಂದು ಹೇಳಿದ್ದರು.

Tags:    

Similar News