ವಿರಾಟ್ ಕೊಹ್ಲಿ ಒಡೆತನದ ಪಬ್ ವಿರುದ್ಧ ಬೆಂಗಳೂರಿನಲ್ಲಿ ಕೇಸ್ ದಾಖಲು
ವಿರಾಟ್ ಕೊಹ್ಲಿ ಮಾಲೀಕತ್ವದ ಬೆಂಗಳೂರಿನ ಕಸ್ತೂರ್ ಬಾ ರಸ್ತೆಯಲ್ಲಿರುವ ‘ದ ಒನ್ 8 ಕಮ್ಯೂನ್’ ಪಬ್ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.;
ವಿರಾಟ್ ಕೊಯ್ಲಿ ಮಾಲೀಕತ್ವದ ಪಬ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ಟೀಮ್ ಇಂಡಿಯಾ ಕ್ರಿಕೆಟಿಗ ವಿರಾಟ್ ಕೊಹ್ಲಿ ಮಾಲೀಕತ್ವದ ಬೆಂಗಳೂರಿನ ಪಬ್ 'ದಿ ಒನ್ 8 ಕಮ್ಯೂನ್' ವಿರುದ್ಧ ಎಫ್ಐಆರ್ ದಾಖಲಾಗಿದೆ. ಕಸ್ತೂರ್ ಬಾ ರಸ್ತೆಯಲ್ಲಿರುವ ಈ ಪಬ್ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಸಿಗರೇಟ್ ಮತ್ತು ಇತರ ತಂಬಾಕು ಉತ್ಪನ್ನಗಳ (ಜಾಹೀರಾತು ನಿಷೇಧ ಮತ್ತು ವ್ಯಾಪಾರ ಮತ್ತು ವಾಣಿಜ್ಯ, ಉತ್ಪಾದನೆ, ಸರಬರಾಜು ಮತ್ತು ವಿತರಣೆಯ ನಿಯಂತ್ರಣ) ಕಾಯ್ದೆ (COTPA Act) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದೆ.
ಪಬ್ನಲ್ಲಿ ಧೂಮಪಾನಕ್ಕೆ ಪ್ರತ್ಯೇಕ ಸ್ಥಳವನ್ನು ನಿಗದಿಪಡಿಸದೆ, ಧೂಮಪಾನಕ್ಕೆ ಅವಕಾಶ ನೀಡಿದ ಆರೋಪದ ಮೇಲೆ ಬಾರ್ ಮತ್ತು ರೆಸ್ಟೋರೆಂಟ್ನ ವ್ಯವಸ್ಥಾಪಕರು ಹಾಗೂ ಸಿಬ್ಬಂದಿ ವಿರುದ್ಧ ಈ ಪ್ರಕರಣ ದಾಖಲಿಸಲಾಗಿದೆ. ಮೇ 29 ರಂದು ಪೊಲೀಸರು ದಾಳಿ ನಡೆಸಿ, ಎನ್ಸಿಆರ್ (Non-Cognizable Report) ದಾಖಲಿಸಿಕೊಂಡಿದ್ದರು. ನಂತರ, ನ್ಯಾಯಾಲಯದ ಅನುಮತಿ ಪಡೆದು ಈಗ ಎಫ್ಐಆರ್ ದಾಖಲಿಸಿದ್ದಾರೆ.
ಕಳೆದ ಡಿಸೆಂಬರ್ 2024 ರಲ್ಲಿ ಇದೇ ಪಬ್ಗೆ ಬಿಬಿಎಂಪಿ (ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ) ಕೂಡ ನೋಟಿಸ್ ನೀಡಿತ್ತು. ಸಾಮಾಜಿಕ ಕಾರ್ಯಕರ್ತರೊಬ್ಬರು ನೀಡಿದ ದೂರಿನ ಆಧಾರದ ಮೇಲೆ, ಪಬ್ನಲ್ಲಿ ಸುರಕ್ಷತಾ ಕ್ರಮಗಳನ್ನು ಅಳವಡಿಸಿಲ್ಲ, ಅಗ್ನಿ ಸುರಕ್ಷತಾ ಕ್ರಮಗಳನ್ನು ಪಾಲಿಸಿಲ್ಲ ಮತ್ತು ಅಗ್ನಿಶಾಮಕ ದಳದ ಪ್ರಮಾಣಪತ್ರವನ್ನು ಪಡೆದಿಲ್ಲ ಎಂಬ ಆರೋಪಗಳ ಮೇಲೆ ಈ ನೋಟಿಸ್ ನೀಡಲಾಗಿತ್ತು.