ಮನಕಲಕುವ ಘಟನೆ: ಕೊಳವೆಬಾವಿ ಬಳಿ ಬಾಲಕಿ ಮೇಲೆ ಅತ್ಯಾಚಾರ

ತಡರಾತ್ರಿಯಾದರೂ ಮನೆಗೆ ಬಾರದ ಮಗಳನ್ನು ಹುಡುಕಿಕೊಂಡು ಪೋಷಕರು ತೆರಳಿದಾಗ, ಬಾಲಕಿಯು ಗಾಯಗೊಂಡ ಸ್ಥಿತಿಯಲ್ಲಿ ಹೊಲದಲ್ಲಿ ಪತ್ತೆಯಾಗಿದ್ದಾಳೆ. ಬಾಲಕಿಯ ಪೋಷಕರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.;

Update: 2025-06-14 07:32 GMT

ಸಾಂದರ್ಭಿಕ ಚಿತ್ರ

ಉತ್ತರ ಪ್ರದೇಶದ ಮುರ್ಸಾನ್ ಬಳಿ ತೋಟದ ಕೊಳವೆ ಬಾವಿ ಬಳಿ ಆಟವಾಡುತ್ತಿದ್ದ ಎಂಟು ವರ್ಷದ ಬಾಲಕಿಯ ಮೇಲೆ 14 ವರ್ಷದ ಬಾಲಕನೊಬ್ಬ ಅತ್ಯಾಚಾರವೆಸಗಿರುವ ಆಘಾತಕಾರಿ ಘಟನೆ ನಡೆದಿದೆ.

ಶುಕ್ರವಾರ (ಜೂನ್ 13) ಸಂಜೆ ಈ ಘಟನೆ ಸಂಭವಿಸಿದೆ. ಬಾಲಕಿ ತೋಟಕ್ಕೆ ತೆರಳಿದ್ದಾಗ, ಪಕ್ಕದ ಊರಿನ ಬಾಲಕನು ಆಕೆಯನ್ನು ಹೊಲಕ್ಕೆ ಕರೆದೊಯ್ದು ಈ ಕೃತ್ಯ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ತಡರಾತ್ರಿಯಾದರೂ ಮಗಳು ಮನೆಗೆ ಬಾರದಿರುವುದರಿಂದ ಆತಂಕಗೊಂಡ ಪೋಷಕರು ಹುಡುಕಿಕೊಂಡು ಹೋಗಿದ್ದಾರೆ. ಆಗ ಬಾಲಕಿಯು ಗಾಯಗೊಂಡ ಸ್ಥಿತಿಯಲ್ಲಿ ಹೊಲದಲ್ಲಿ ಪತ್ತೆಯಾಗಿದ್ದಾಳೆ. ತಕ್ಷಣವೇ ಪೋಷಕರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಪೊಲೀಸ್ ಅಧಿಕಾರಿಗಳ ಪ್ರಕಾರ, ಆರೋಪಿ ಬಾಲಕನ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದ್ದು, ಆತ ತಲೆಮರೆಸಿಕೊಂಡಿದ್ದಾನೆ. ಆತನನ್ನು ಬಂಧಿಸಲು ಶೋಧ ಕಾರ್ಯ ನಡೆಯುತ್ತಿದೆ. ಗಾಯಗೊಂಡ ಬಾಲಕಿಯನ್ನು ವೈದ್ಯಕೀಯ ತಪಾಸಣೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. 

Tags:    

Similar News