ಬೆಂಗಳೂರಿನ ಹೆಚ್‌ಎಎಲ್‌ ಸಿಗ್ನಲ್ ಬಳಿ ಚಲಿಸುತ್ತಿದ್ದ ಬಸ್‌ನಲ್ಲಿ ಬೆಂಕಿ ಅವಘಡ: ತಪ್ಪಿದ ಭಾರಿ ದುರಂತ

ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಬಸ್‌ನಲ್ಲಿ ಹೊಗೆ ಕಾಣಿಸಿಕೊಂಡ ತಕ್ಷಣವೇ ಬೆಂಕಿ ವ್ಯಾಪಿಸಿದೆ.

Update: 2025-09-15 04:44 GMT

ಸಾಂದರ್ಭಿಕ ಚಿತ್ರ 

Click the Play button to listen to article

ಬೆಂಗಳೂರಿನ ಹೆಚ್.ಎ.ಎಲ್ ಸಿಗ್ನಲ್‌ ಬಳಿ ಚಲಿಸುತ್ತಿದ್ದ ಬಸ್​ನಲ್ಲಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ಸೋಮವಾರ ಬೆಳಗ್ಗೆ 5 ಗಂಟೆ ಸುಮಾರಿಗೆ ನಡೆದಿದೆ. 

ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಬಸ್‌ನಲ್ಲಿ ಹೊಗೆ ಕಾಣಿಸಿಕೊಂಡ ತಕ್ಷಣವೇ ಬೆಂಕಿ ವ್ಯಾಪಿಸಿದೆ. ಅದೃಷ್ಟವಶಾತ್, ಕಂಡಕ್ಟರ್ ತಕ್ಷಣವೇ ಬಸ್‌ನಲ್ಲಿದ್ದ 40ಕ್ಕೂ ಹೆಚ್ಚು ಪ್ರಯಾಣಿಕರನ್ನು ಕೆಳಗಿಳಿಸಿದ್ದಾರೆ. ಇದರಿಂದ ದೊಡ್ಡ ಅನಾಹುತ ತಪ್ಪಿದೆ.

ಬೆಳಗಿನ ಜಾವ 5.15ಕ್ಕೆ ಹೆಚ್ಎಎಲ್ ಮೇನ್ ಗೇಟ್ ಬಳಿ ಈ ಘಟನೆ ನಡೆದಿದ್ದು, ಈ ಬಸ್​ ಮೆಜೆಸ್ಟಿಕ್ ನಿಂದ ಕಾಡುಗೋಡಿ ಕಡೆಗೆ ತೆರಳುತ್ತಿತ್ತು ಎನ್ನಲಾಗಿದೆ. ಹೆಚ್ಎಲ್ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿದ್ದು, ಬೆಂಕಿಯನ್ನು ನಂದಿಸಿದ್ದಾರೆ. ಹೆಚ್ಎಎಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. 

Tags:    

Similar News