ಮಡಿಕೇರಿ ವಸತಿ ಶಾಲೆಯಲ್ಲಿ ಬೆಂಕಿ ಅವಘಡ ; 2ನೇ ತರಗತಿ ವಿದ್ಯಾರ್ಥಿ ಬಲಿ

ಸ್ಥಳೀಯರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣವೇ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಲು ಪ್ರಯತ್ನಿಸಿತು. ಆದಾಗ್ಯೂ ಒಬ್ಬ ವಿದ್ಯಾರ್ಥಿ ಬೆಂಕಿಗೆ ಆಹುತಿಯಾಗಿದ್ದಾನೆ ಎಂದು ತಿಳಿದುಬಂದಿದೆ.

Update: 2025-10-09 07:23 GMT

ಸಾಂದರ್ಭಿಕ ಚಿತ್ರ 

Click the Play button to listen to article

ಮಡಿಕೇರಿ ತಾಲೂಕಿನ ಹರಿ ಮಂದಿರ ವಸತಿ ಶಾಲೆಯಲ್ಲಿ ಗುರುವಾರ ಬೆಳಿಗ್ಗೆ ಸಂಭವಿಸಿದ ಬೆಂಕಿ ಅವಘಡದಲ್ಲಿ ಎರಡನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಬಾಲಕ ಮೃತಪಟ್ಟಿರುವ ಧಾರುಣ ಘಟನೆ ನಡೆದಿದೆ. 

ಮೃತ ಬಾಲಕನ್ನು ಭಾಗಮಂಡಲ ಸಮೀಪದ ಚೆಟ್ಟಿಮಾನಿ ನಿವಾಸಿ ಪುಷ್ಪಕ್‌ ಎಂದು ಗುರುತಿಸಲಾಗಿದೆ. ಮಗುವಿನ ತಾಯಿ ತ್ರಿವೇಣಿ ಎಂಬುವರು ಕುಂದಾಚೇರಿ ಪ್ರಾಥಮಿಕ ಶಾಲೆಯಲ್ಲಿ ಅತಿಥಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರೆ, ತಂದೆ ಕೃಷಿಕರಾಗಿದ್ದಾರೆ. ಮಗನ ಸಾವಿನ ಸುದ್ದಿ ಕೇಳಿದ ದಂಪತಿ ತೀವ್ರ ಆಘಾತಕ್ಕೆ ಒಳಗಾಗಿದ್ದಾರೆ.    

ಬೆಂಕಿ ತಗುಲಲು ಕಾರಣವೇನು?

ಶಾಲೆಯ ವಸತಿ ನಿಲಯದ ಒಂದು ಕೊಠಡಿಯಲ್ಲಿ ವಿದ್ಯುತ್ ಶಾರ್ಟ್ ಸರ್ಕೀಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ. ಕೆಲವೇ ಕ್ಷಣಗಳಲ್ಲಿ ಬೆಂಕಿ ವ್ಯಾಪಕವಾಗಿ ಹರಡಿದೆ. ಸ್ಥಳೀಯರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣವೇ ಕಾರ್ಯ ಪ್ರವೃತ್ತರಾಗಿ ಬೆಂಕಿ ನಂದಿಸಲು ಪ್ರಯತ್ನಿಸಿದರು. ಆದರೂ, ಎರಡನೇ ತರಗತಿ ಬಾಲಕ ಪುಷ್ಪಕ್‌ ಬೆಂಕಿಗೆ ಆಹುತಿಯಾಗಿದ್ದಾನೆ. ಉಳಿದ 29 ವಿದ್ಯಾರ್ಥಿಗಳನ್ನು ರಕ್ಷಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಂಕಿಯಿಂದ ವಸತಿ ನಿಲಯದ ಕೆಲವು ಭಾಗಗಳು ಸಂಪೂರ್ಣ ಹಾನಿಗೊಂಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Tags:    

Similar News