ರಾಜ್ಯದಲ್ಲಿ ನಾಳೆ ಮೊದಲ ಹಂತದ ಮತದಾನ

Update: 2024-04-25 13:50 GMT

ರಾಜ್ಯದಲ್ಲಿ ಮೊದಲ ಹಂತದ ಚುನಾವಣೆ ಏಪ್ರಿಲ್ 26 (ನಾಳೆ)ರಂದು ನಡೆಯಲಿದೆ, ಮತದಾರರು ತಮ್ಮ ಹಕ್ಕು ಚಲಾಯಿಸಲು ಉತ್ಸುಕರಾಗಿದ್ದಾರೆ. ಬೆಳಿಗ್ಗೆ  7ಗಂಟೆಯಿಂದ ಸಂಜೆ 6 ಗಂಟೆವರೆಗೆ ಮತದಾನ ನಡೆಯುತ್ತದೆ.

ಮೊದಲ ಹಂತದ ಚುನಾವಣೆಗೆ ಉಡುಪಿ-ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ (ಎಸ್‌ಸಿ), ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ (ಎಸ್‌ಸಿ), ಬೆಂಗಳೂರು ಗ್ರಾಮಾಂತರ, ಬೆಂಗಳೂರು, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ, ಕೋಲಾರ (ಎಸ್‌ಸಿ) ಸೇರಿ 14 ಕ್ಷೇತ್ರಗಳಲ್ಲಿ ಮತದಾನ ಪ್ರಕ್ರಿಯೆ ನಡೆಯುತ್ತದೆ.

1,44,17,530 ಪುರುಷರು, 1,43,87,585 ಮಹಿಳೆಯರು ಹಾಗೂ 3,067 ತೃತೀಯ ಲಿಂಗಿಗಳು ಸೇರಿ ಒಟ್ಟು 2,88,08,182 ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ.



Tags:    

Similar News