ಬಾಗಲಕೋಟೆ ಬಳಿ ಭೀಕರ ಅಪಘಾತ: ನಾಲ್ವರ ದುರ್ಮರಣ

ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್‌ಗೆ ಹಿಂದಿನಿಂದ ಅತಿ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟರೆ, ಇಬ್ಬರು ಯುವಕರು ಗಂಭೀರವಾಗಿ ಗಾಯಗೊಂಡಿದ್ದರು.

Update: 2025-12-03 04:07 GMT

ಎಐ ಚಿತ್ರ 

Click the Play button to listen to article

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಿದ್ದಾಪುರ ಗ್ರಾಮದ ಬಳಿ ಮಂಗಳವಾರ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಯುವಕರು ಮೃತಪಟ್ಟಿದ್ದಾರೆ. ಬಾಗಲಕೋಟೆ–ವಿಜಯಪುರ ಹೆದ್ದಾರಿಯಲ್ಲಿ ರಾತ್ರಿ 1 ಗಂಟೆ ಸುಮಾರಿಗೆ ಈ ದುರಂತ ಸಂಭವಿಸಿದೆ.

ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್‌ಗೆ ಹಿಂದಿನಿಂದ ಅತಿ ವೇಗವಾಗಿ ಬಂದ ಕಾರು  ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟರೆ, ಇಬ್ಬರು ಯುವಕರು ಗಂಭೀರವಾಗಿ ಗಾಯಗೊಂಡಿದ್ದರು. ಗಾಯಾಳುಗಳನ್ನು ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಚಿಕಿತ್ಸೆ ಫಲಿಸದೆ ಒಬ್ಬ ಯುವಕ ಕೊನೆಯುಸಿರೆಳೆದಿದ್ದಾನೆ.

ಮೃತರನ್ನು ಸಿದ್ದಾಪುರ ಗ್ರಾಮದವರಾದ ವಿಶ್ವನಾಥ ಕಂಬಾರ (17), ಗಣೇಶ್ ಅರಳಿಮಟ್ಟಿ (20), ಈಶು ಕಂಬಾರ, ಪ್ರವೀಣ ಶೇಡಬಾಳ (22) ಹಾಗೂ ಆಸ್ಪತ್ರೆಯಲ್ಲಿ ಮೃತಪಟ್ಟ ಪ್ರಜ್ವಲ್ ಶೇಡಬಾಳ (17) ಎಂದು ಗುರುತಿಸಲಾಗಿದೆ. ಮೃಪಟ್ಟ ಹಾಗೂ ಗಾಯಗೊಂಡವರೆಲ್ಲರೂ ಸಿದ್ದಾಪುರ ಗ್ರಾಮದ ಯುವಕರೇ ಆಗಿದ್ದಾರೆ. ಘಟನಾ ಸ್ಥಳಕ್ಕೆ ಜಮಖಂಡಿ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 

Tags:    

Similar News