ಮಾಜಿ ಎಂಎಲ್‌ಸಿ, ಆರ್‌ಎಸ್‌ಎಸ್ ಮುಖಂಡ ಪ್ರೊ. ಕೃ.ನರಹರಿ ನಿಧನ
ಬುಧವಾರ (ಅ.8) ಮಧ್ಯಾಹ್ನ 2.30ರ ವರೆಗೆ ಸ್ವಗೃಹದಲ್ಲೇ ಅಂತಿಮ ದರ್ಶನದ ವ್ಯವಸ್ಥೆ ಮಾಡಲಾಗಿದೆ. ಮಧ್ಯಾಹ್ನ 3ಗಂಟೆಗೆ ಹರಿಶ್ಚಂದ್ರ ಘಾಟ್‌ನ ವಿದ್ಯುತ್ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
By : The Federal
Update: 2025-10-08 05:22 GMT
ಪ್ರೊ. ಕೃ. ನರಹರಿ
ವಿಧಾನ ಪರಿಷತ್ ಮಾಜಿ ಸದಸ್ಯ ಹಾಗೂ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖಂಡ ಪ್ರೊ.ಕೃ.ನರಹರಿ (93) ವಯೋಸಹಜ ಸಮಸ್ಯೆಯಿಂದ ಬೆಂಗಳೂರಿನ ಸ್ವಗೃಹದಲ್ಲಿ ಬುಧವಾರ ಬೆಳಿಗ್ಗೆ 4.30ಕ್ಕೆ ನಿಧನರಾದರು.
ರಾಷ್ಟ್ರೀಯ ಸ್ವಯಂಸೇವಕ ಸಂಘದ ಕ್ಷೇತ್ರೀಯ ಕಾರ್ಯವಾಹಕರಾಗಿ, ರಾಷ್ಟ್ರೀಯ ಶೈಕ್ಷಿಕ ಮಹಾಸಂಘದ ಅಖಿಲ ಭಾರತೀಯ ಅಧ್ಯಕ್ಷರಾಗಿ, ವಿಧಾನ ಪರಿಷತ್ ಸದಸ್ಯರಾಗಿ, ದಿ ಮಿಥಿಕ್ ಸೊಸೈಟಿಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ತುರ್ತು ಪರಿಸ್ಥಿತಿ ಸಂದರ್ಭದಲ್ಲೂ ಹೋರಾಟ ಮಾಡಿ ಜೈಲುವಾಸ ಅನುಭವಿಸಿದ್ದರು.
ಬುಧವಾರ (ಅ.8) ಮಧ್ಯಾಹ್ನ 2.30 ರವರೆಗೆ ಸ್ವಗೃಹದಲ್ಲಿ ಅಂತಿಮ ದರ್ಶನದ ವ್ಯವಸ್ಥೆ ಮಾಡಲಾಗಿದೆ. ಮಧ್ಯಾಹ್ನ 3ಗಂಟೆಗೆ ಹರಿಶ್ಚಂದ್ರ ಘಾಟ್‌ನ ವಿದ್ಯುತ್ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಕೃ.ನರಹರಿ ಅವರ ನಿಧನಕ್ಕೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಮುಖರು, ರಾಜ್ಯ ಬಿಜೆಪಿ ನಾಯಕರು ಕಂಬನಿ ಮಿಡಿದಿದ್ದಾರೆ.