ಮಾಜಿ ಶಾಸಕ ಮೊಯಿದ್ದೀನ್‌ ಬಾವ ಸಹೋದರ ದಿಢೀರ್‌ ನಾಪತ್ತೆ; ಆತ್ಮಹತ್ಯೆ ಶಂಕೆ, ನದಿಯಲ್ಲಿ ಶೋಧ

ಸೇತುವೆಯಿಂದ ಕೆಳಗೆ ಹಾರಿರುವ ಬಗ್ಗೆ ಸಂಶಯ ಇದೆ. ರಕ್ಷಣಾ ತಂಡಗಳು ನದಿಯಲ್ಲಿ ಶೋಧ ಕಾರ್ಯ ನಡೆಸುತ್ತಿವೆ. ಘಟನೆಗೆ ಸಂಬಂಧಿಸಿ ಎಲ್ಲ ಆಯಾಮಗಳಲ್ಲಿ ತನಿಖೆ ನಡೆಸಲಾಗುವುದು ಎಂದು ಪೊಲೀಸ್‌ ಆಯುಕ್ತ ಅನುಪಮ್‌ ಅಗರ್‌ವಾಲ್‌ ತಿಳಿಸಿದ್ದಾರೆ.

Update: 2024-10-06 14:28 GMT
ಮಾಜಿ ಶಾಸಕ ಮೊಯಿದ್ದೀನ್‌ ಬಾವಾ ಅವರ ಸಹೋದರ ನಾಪತ್ತೆಯಾಗಿರುವ ಮಂಗಳೂರಿನ ಕೂಳೂರು ಬಳಿ ನದಿಯಲ್ಲಿ ಪೊಲೀಸರು ನಡೆಸುತ್ತಿರುವುದು

ಮಾಜಿ ಶಾಸಕ ಮೊಯಿದ್ದೀನ್ ಬಾವಾ ಅವರ ಸಹೋದರ ಮುಮ್ತಾಜ್ ಅಲಿ (52) ಅವರು ನಾಪತ್ತೆ ಆಗಿದ್ದು, ಅವರ ಕಾರು ಕೂಳೂರಿನ ಸೇತುವೆ ಪಕ್ಕದಲ್ಲಿ ಪತ್ತೆ ಆಗಿದ್ದು, ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.

ತಡರಾತ್ರಿ 3 ಗಂಟೆ ಸುಮಾರಿಗೆ ಮುಮ್ತಾಜ್ ಅಲಿ ಅವರು ಮನೆಯಿಂದ ಬಿಎಂಡಬ್ಲ್ಯು ಕಾರಿನಲ್ಲಿ ತೆರಳಿದ್ದರು. ಭಾನುವಾರ ಬೆಳಿಗ್ಗೆ ಬೆಳಗ್ಗೆ 5 ಗಂಟೆಗೆ ಕೂಳೂರು ಸೇತುವೆ ಪಕ್ಕದಲ್ಲಿಯೇ ಕಾರು ಅಪಘಾತವಾದ ಸ್ಥಿತಿಯಲ್ಲಿ ಪತ್ತೆ ಆಗಿದೆ. ಆದರೆ, ಅವರು ಮಾತ್ರ ಕಾಣೆಯಾಗಿದ್ದಾರೆ. ಅವರ ಮೊಬೈಲ್ ಕೂಡ ಸ್ವೀಚ್ಡ್ ಆಫ್ ಆಗಿದೆ.

ಪುತ್ರಿಗೆ ಈ ವಿಚಾರ ತಿಳಿದು ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮುಮ್ತಾಜ್ ಅಲಿ ಅವರು ಸೇತುವೆಯಿಂದ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದ್ದು, ಎಸ್‌ಡಿಆರ್‌ಎಫ್, ಎನ್‌ಡಿಆರ್‌ಎಫ್, ಅಗ್ನಿಶಾಮಕದಳ ನದಿಯಲ್ಲಿ ಶೋಧ ಕಾರ್ಯ ನಡೆಸುತ್ತಿದೆ. ಎಫ್ಎಸ್‌ಎಲ್ ಅಧಿಕಾರಿಗಳು ಕೂಡ ಶೋಧ ಕಾರ್ಯ ನಡೆಸುತ್ತಿದ್ದಾರೆ.

ಸ್ಥಳಕ್ಕೆ ಮಾಜಿ ಶಾಸಕ ಮೊಯಿದ್ದೀನ್ ಬಾವಾ ಸೇರಿದಂತೆ ಕುಟುಂಬಸ್ಥರು ಸ್ಥಳಕ್ಕೆ ಭೇಟಿ ನೀಡಿದ್ದಾರೆ‌. ಸ್ಥಳಕ್ಕೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗ್ರವಾಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಮ್ತಾಜ್ ಅಲಿ ಅವರು ವಿವಿಧ ಉದ್ಯಮ ಮತ್ತು ಮಸೀದಿ ಕಮಿಟಿಗಳಲ್ಲಿ ತೊಡಗಿಸಿಕೊಂಡಿದ್ದರು.

ಈ ವೇಳೆ ಮಾತನಾಡಿದ ನಗರ ಪೊಲೀಸ್‌ ಆಯುಕ್ತ ಅನುಪಮ್‌ ಅಗರ್‌ವಾಲ್‌  ಅವರು, ಮಮ್ತಾಜ್‌ ಅಲಿ ಕಾಣೆಯಾಗಿರುವ ಬಗ್ಗೆಅವರ ಪುತ್ರಿಯೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕಾರು ಅಪಘಾತಕ್ಕೀಡಾಗಿದ್ದು, ಅದರಲ್ಲಿ ಮುಮ್ತಾಜ್‌ ಅಲಿ ಇರಲಿಲ್ಲ. ಸೇತುವೆಯಿಂದ ಕೆಳಗೆ ಹಾರಿರುವ ಬಗ್ಗೆ ಸಂಶಯ ಇದೆ. ರಕ್ಷಣಾ ತಂಡಗಳು ನದಿಯಲ್ಲಿ ಶೋಧ ಕಾರ್ಯ ನಡೆಸುತ್ತಿವೆ. ಘಟನೆಗೆ ಸಂಬಂಧಿಸಿ ಎಲ್ಲ ಆಯಾಮಗಳಲ್ಲಿ ತನಿಖೆ ನಡೆಸಲಾಗುವುದು. ಈಗಾಗಲೇ ಎಫ್ ಎಸ್ ಎಲ್ ಅಧಿಕಾರಿಗಳು ಕೂಡ ಕಾರು ಪರಿಶೀಲನೆ ಮಾಡಿದ್ದಾರೆ ಎಂದು ತಿಳಿಸಿದರು.

ಈ ಮಧ್ಯೆ,ಮುಮ್ತಾಜ್‌ ಅಲಿ ನಾಪತ್ತೆ ಪ್ರಕರಣಕ್ಕೆ ಹೊಸ ಟ್ವಿಸ್ಟ್‌ ಸಿಕ್ಕಿದೆ. ಬಿ.ಎಂ.ಮುಮ್ತಾಜ್ ಅಲಿ ಅವರಿಗೆ ಮಹಿಳೆಯೊಬ್ಬರು ನಿರಂತರ ಕರೆ ಮಾಡಿ ಮದುವೆಯಾಗುವಂತೆ ಬ್ಲ್ಯಾಕ್‌ ಮೇಲ್‌ ಮಾಡುತ್ತಿದ್ದರು ಎನ್ನಲಾಗಿದೆ. ಆ ಮಹಿಳೆಗೆ ಸುರತ್ಕಲ್‌ನ ನಾಲ್ವರು ಸಹಕಾರ ನೀಡುತ್ತಿದ್ದರು, ಇದರಿಂದ ಬೇಸತ್ತು ಮುಮ್ತಾಜ್‌ ಅಲಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿಬಹುದು ಎಂದು ಶಂಕಿಸಲಾಗಿದೆ.

ಮಹಿಳೆಯು ಕೆಲ ಖಾಸಗಿ ವಿಡಿಯೋಗಳನ್ನು ತೋರಿಸಿ ಬ್ಲ್ಯಾಕ್‌ ಮೇಲ್‌ ಮಾಡುತ್ತಿದ್ದರು ಎನ್ನಲಾಗಿದೆ. ಈ ಹಿಂದೆ ಮಸೀದಿಯ ಕಮಿಟಿ ವಿಚಾರವಾಗಿ ಸುರತ್ಕಲ್‌ನ ನಾಲ್ವರು ವ್ಯಕ್ತಿಗಳೊಂದಿಗೆ ಮುಮ್ತಾಜ್‌ ಅಲಿ ಗಲಾಟೆ ಮಾಡಿಕೊಂಡಿದ್ದರು. ಇದೇ ದ್ವೇಷದ ಹಿನ್ನೆಲೆಯಲ್ಲಿ ಆ ಮಹಿಳೆ ಹಾಗೂ ನಾಲ್ವರು ನಿತ್ಯ ಕಿರುಕುಳ ಕೊಡುತ್ತಿದ್ದರು ಎಂದು ಮೂಲಗಳು ತಿಳಿಸಿವೆ.

Tags:    

Similar News