ಹುಟ್ಟೂರಲ್ಲಿ ಮಾಜಿ ಸಿಎಂ ಎಸ್‌.ಎಂ.ಕೃಷ್ಣ ಅಂತ್ಯಕ್ರಿಯೆ; ಗಣ್ಯರು, ಅಭಿಮಾನಿಳ ಕಂಬನಿ

ಮಂಗಳವಾರ ಬೆಳಗಿನ ಜಾವ ನಿಧನರಾಗಿದ್ದ ಎಸ್.ಎಂ.ಕೃಷ್ಣ ಅವರ ಪಾರ್ಥೀವ ಶರೀರದ ಅಂತಿಮಯಾತ್ರೆ ಬೆಳಿಗ್ಗೆ 8ಕ್ಕೆ ಅಲಂಕೃತ ವಾಹನದಲ್ಲಿ ಬೆಂಗಳೂರಿನ ಸದಾಶಿವನಗರದ ತಮ್ಮ ನಿವಾಸದಿಂದ ಮದ್ದೂರಿನ ಹುಟ್ಟೂರುವರೆಗೆ ಸಾಗಿತು. ಕೆಂಗೇರಿ, ರಾಮನಗರ, ಚನ್ನಪಟ್ಟಣ ಹಾಗೂ ಮದ್ದೂರಿನಲ್ಲಿ ಕೆಲ ಕಾಲ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಕಲ್ಪಿಸಿಕೊಡಲಾಗಿತ್ತು.

Update: 2024-12-11 14:11 GMT

ಬೆಂಗಳೂರನ್ನು ಸಿಂಗಾಪುರ ಮಾಡುವ ಕನಸು ಹೊತ್ತಿದ್ದ ದೂರದೃಷ್ಟಿಯ ಪ್ರಬುದ್ಧ ರಾಜಕಾರಣಿ, ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಅವರ ಅಂತ್ಯಸಂಸ್ಕಾರ ಹುಟ್ಟೂರು ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಸೋಮನಹಳ್ಳಿಯಲ್ಲಿ ಬುಧವಾರ ಸಂಜೆ ನೆರವೇರಿತು.

ಮಂಗಳವಾರ ಬೆಳಗಿನ ಜಾವ ನಿಧನರಾಗಿದ್ದ ಎಸ್.ಎಂ.ಕೃಷ್ಣ ಅವರ ಪಾರ್ಥೀವ ಶರೀರದ ಅಂತಿಮಯಾತ್ರೆ ಬೆಳಿಗ್ಗೆ 8ಕ್ಕೆ ಅಲಂಕೃತ ವಾಹನದಲ್ಲಿ ಬೆಂಗಳೂರಿನ ಸದಾಶಿವನಗರದ ತಮ್ಮ ನಿವಾಸದಿಂದ ಮದ್ದೂರಿನ ಹುಟ್ಟೂರುವರೆಗೆ ಸಾಗಿತು. ಕೆಂಗೇರಿ, ರಾಮನಗರ, ಚನ್ನಪಟ್ಟಣ ಹಾಗೂ ಮದ್ದೂರಿನಲ್ಲಿ ಕೆಲ ಕಾಲ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಕಲ್ಪಿಸಿಕೊಡಲಾಯಿತು. ಕೃಷ್ಣ ಅವರ ದರ್ಶನ ಪಡೆಯಲು ಜನರು ಸಾಗರೋಪಾದಿಯಲ್ಲಿ ಆಗಮಿಸಿದರು.


ಸೋಮನಹಳ್ಳಿಗೆ ಅಂತಿಮಯಾತ್ರೆ ಬರುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ವಿಧಾನಸಭಾಧ್ಯಕ್ಷ ಯು.ಟಿ. ಖಾದರ್, ಸರ್ಕಾರದ ಸಚಿವರು, ಕೇಂದ್ರ ಸಚಿವರಾದ ಪ್ರಹ್ಲಾದ ಜೋಶಿ, ಎಚ್‌.ಡಿ. ಕುಮಾರಸ್ವಾಮಿ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ ಸೇರಿದಂತೆ ಬಿಜೆಪಿ ನಾಯಕರು, ಮಠಾಧೀಶರು ಅಂತಿಮ ದರ್ಶನ ಪಡೆದರು.

ಶ್ರೀರಂಗಪಟ್ಟಣದ ಭಾನುಪ್ರಕಾಶ್‌ ಶರ್ಮಾ ನೇತೃತ್ವದಲ್ಲಿ 15 ವೈದಿಕರ ತಂಡ ವಿಧಿ-ವಿಧಾನ ನೆರವೇರಿಸಿತು. ಪೊಲೀಸರು ಮೂರು ಸುತ್ತು ಕುಶಾಲು ತೋಪು ಸಿಡಿಸಿ, ರಾಷ್ಟ್ರಗೀತೆ ನುಡಿಸುವ ಮೂಲಕ ಸರ್ಕಾರಿ ಗೌರವ ಸಲ್ಲಿಸಿದರು. ಮೃತದೇಹ ಮೇಲೆ ಹೊದಿಸಿದ್ದ ರಾಷ್ಟ್ರಧ್ವಜವನ್ನು ಸಿಎಂ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಡಾ. ಜಿ. ಪರಮೇಶ್ವರ್‌ ಅವರು ಎಸ್‌.ಎಂ. ಕೃಷ್ಣ ಅವರ ಪತ್ನಿ ಪ್ರೇಮಾ ಕೃಷ್ಣ ಅವರಿಗೆ ಹಸ್ತಾಂತರಿಸಿದರು. ಬಳಿಕ ಶ್ರೀಗಂಧದ ಕಟ್ಟಿಗೆಗಳಿಂದ ಜೋಡಿಸಿದ ಚಿತೆಯ ಮೇಲೆ ಎಸ್‌.ಎಂ.ಕೃಷ್ಣ ಅವರ ಮೃತದೇಹವಿರಿಸಿ, ಮೊಮ್ಮಗ ಅಮರ್ಥ್ಯ ಹೆಗ್ಡೆ ಅಗ್ನಿಸ್ಪರ್ಶ ಮಾಡಿದರು.

ಶ್ವಾಸಕೋಶದ ಸೋಂಕು ಹಾಗೂ ವಯೋ ಸಜಹ ಕಾಯಿಲೆಗಳಿಂದ ಬಳಲುತ್ತಿದ್ದ 92 ವರ್ಷ ವಯಸ್ಸಿನ ಎಸ್‌.ಎಂ. ಕೃಷ್ಣ ಅವರು ಮಂಗಳವಾರ ಮುಂಜಾನೆ ಮೃತಪಟ್ಟಿದ್ದರು. ಸದಾಶಿವನಗರದ ಆರ್ಎಂವಿ ಎಕ್ಸ್ಟೆನ್ಷನ್‌ನಲ್ಲಿರುವ ನಿವಾಸದ ಬಳಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇಡಲಾಗಿತ್ತು.

Tags:    

Similar News