Gang Rape | ಬಾಲಕಿ ಮೇಲೆ ಅತ್ಯಾಚಾರ ; ಮೂವರು ಆರೋಪಿಗಳ ಬಂಧನ, ಮತ್ತೊಬ್ಬನಿಗೆ ಪೋಲೀಸರ ಶೋಧ

ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದ ಪ್ರಕರಣ ದಾಖಲಾದ 24 ಗಂಟೆಯೊಳಗೆ ಆರೋಪಿಗಳನ್ನು ಬಂಧಿಸುವಲ್ಲಿ ಬೆಳಗಾವಿ ಪೊಲೀಸರು ಯಶಸ್ವಿಯಾಗಿದ್ದಾರೆ.;

Update: 2025-06-01 11:14 GMT

ಅಪ್ರಾಪ್ತ ಬಾಲಕಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಇಬ್ಬರು ಬಾಲರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಮತ್ತೊಬ್ಬ ಪರಾರಿಯಾಗಿದ್ದು, ಶೋಧ ಮುಂದುವರಿಸಲಾಗಿದೆ.

ಬೆಳಗಾವಿಯಲ್ಲಿ ಭಾನುವಾರ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದ ನಗರ ಪೊಲೀಸ್‌ ಆಯುಕ್ತ ಭೂಷಣ್ ಗುಲಾಬರಾವ್ ಬೊರಸೆ ಅವರು, ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಎಪಿಎಂಸಿ ಠಾಣೆಯಲ್ಲಿ 6 ಮಂದಿ ವಿರುದ್ಧ ಶನಿವಾರ ಎಫ್‌ಐಆ‌ರ್ ದಾಖಲಾಗಿತ್ತು.

ಪ್ರಕರಣ ದಾಖಲಾದ 24 ಗಂಟೆಯೊಳಗೆ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ ಎಂದು ತಿಳಿಸಿದರು. 

ಆರೋಪಿಗಳಲ್ಲಿ ಒಬ್ಬ ಮೊದಲು ಬಾಲಕಿಯನ್ನು ಪರಿಚಯ ಮಾಡಿಕೊಂಡು ಸ್ನೇಹ ಬೆಳೆಸಿದ್ದ. ಇದಾದ ನಂತರ ಆತ ಮತ್ತು ಸ್ನೇಹಿತರು 2024ರ ಡಿಸೆಂಬರ್‌ನಲ್ಲಿ ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿದ್ದಾರೆ. ಅಲ್ಲದೇ ಅತ್ಯಾಚಾರದ ದೃಶ್ಯವನ್ನು ಆರೋಪಿಗಳು ರೆಕಾರ್ಡ್ ಮಾಡಿಕೊಂಡಿದ್ದರು. ಈಗ ಮತ್ತೆ ಅದೇ ದೃಶ್ಯವನ್ನು ತೋರಿಸಿ ಬಾಲಕಿಯನ್ನು  ಬ್ಲಾಕ್‌ಮೇಲ್ ಮಾಡಿದ್ದರು. 2025ರ ಜನವರಿಯಲ್ಲಿ ಮತ್ತೆ ಮೂವರು ಬಾಲಕಿ ಮೇಲೆ ಬೇರೆ ಬೇರೆ ಸ್ಥಳಗಳಲ್ಲಿ ಅತ್ಯಾಚಾರ ಮಾಡಿದ್ದಾರೆ.

ಮೇ 6ರಂದು ವಿಡಿಯೋ ತೋರಿಸಿ ಮತ್ತೆ ಬ್ಲಾಕ್ ಮೇಲ್ ಮಾಡಿದ್ದರು. ಆಗ ಬಾಲಕಿಯರ ಪೋಷಕರು ಮೇ 12 ರಂದು ದೂರು ನೀಡಿದ್ದರು. ಅತ್ಯಾಚಾರ ನಡೆಸಿದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಲು ಪ್ರಯತ್ನಿಸಲಾಗುವುದು ಎಂದು ವಿವರಿಸಿದರು.

Tags:    

Similar News