ಅಪ್ಪು ಅಭಿಮಾನಿಗಳಿಗೆ ಸಿಹಿ ಸುದ್ದಿ: 'PRK' ಆ್ಯಪ್ ಲಾಂಚ್‌ಗೆ ಕ್ಷಣಗಣನೆ

PRK' ಆ್ಯಪ್ ಬಿಡುಗಡೆಗೆ ಸಕಲ ಸಿದ್ಧತೆ ನಡೆದಿದ್ದು, ಪುನೀತ್ ರಾಜ್‌ಕುಮಾರ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರು ಈ ಆ್ಯಪ್‌ನ ಸಾಫ್ಟ್ ಲಾಂಚ್‌ಗಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಆಹ್ವಾನ ನೀಡಿದ್ದಾರೆ.

Update: 2025-10-14 09:23 GMT

ಅಪ್ಲಿಕೇಶನ್‌ನ ಸಾಫ್ಟ್ ಲಾಂಚ್‌ಗಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಅಧಿಕೃತವಾಗಿ ಆಹ್ವಾನ ನೀಡಿದ್ದಾರೆ.

Click the Play button to listen to article

ಕನ್ನಡದ ಹೆಮ್ಮೆಯ ನಟ, ಕರ್ನಾಟಕ ರತ್ನ ದಿ.ಪುನೀತ್ ರಾಜ್‌ಕುಮಾರ್ ಅವರ ಅಭಿಮಾನಿಗಳಿಗೆ ಸಂತಸದ ಸುದ್ದಿ. ಪುನೀತ್ ಅವರ ಸ್ಫೂರ್ತಿ ಮತ್ತು ಮಾನವೀಯ ಮೌಲ್ಯಗಳನ್ನು ಜನರಿಗೆ ತಲುಪಿಸುವ ಮಹತ್ವದ ಉದ್ದೇಶದಿಂದ 'PRK' ಮೊಬೈಲ್ ಅಪ್ಲಿಕೇಶನ್ ಅನ್ನು ಸಿದ್ಧಪಡಿಸಲಾಗಿದೆ. ಈ 'ಅಪ್ಪು' ಆ್ಯಪ್ ಶೀಘ್ರದಲ್ಲೇ ಜನರ ಅಂಗೈ ತಲುಪಲಿದೆ. 

PRK' ಆ್ಯಪ್ ಬಿಡುಗಡೆಗೆ ಸಕಲ ಸಿದ್ಧತೆ ನಡೆದಿದ್ದು, ಪುನೀತ್ ರಾಜ್‌ಕುಮಾರ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರು ಈ ಆ್ಯಪ್‌ನ ಸಾಫ್ಟ್ ಲಾಂಚ್‌ಗಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಆಹ್ವಾನ ನೀಡಿದ್ದಾರೆ.

ಅಕ್ಟೋಬರ್ 25 ರಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಅಪ್ಪು ಆ್ಯಪ್‌ನ ಸಾಫ್ಟ್ ಲಾಂಚ್ ಮಾಡಲಿದ್ದಾರೆ. ಈ ದಿನವೇ ಆ್ಯಪ್ ಕುರಿತು ಸುದ್ದಿಗೋಷ್ಠಿ ಸಹ ನಡೆಯಲಿದೆ. ಅಕ್ಟೋಬರ್ 29ರಂದು ಪುನೀತ್ ರಾಜ್‌ಕುಮಾರ್ ಅವರ ನಾಲ್ಕನೇ ಪುಣ್ಯಸ್ಮರಣೆ. ಈ ದಿನಕ್ಕೂ ಮುನ್ನವೇ ಆ್ಯಪ್ ಬಿಡುಗಡೆಗೆ ತಯಾರಿ ನಡೆದಿದೆ.

'PRK' ಆ್ಯಪ್ ಅಪ್ಪು ಅವರ ಪ್ರತಿಭೆ, ಸಮಾಜ ಸೇವೆ ಮತ್ತು ಮಾನವೀಯ ಮೌಲ್ಯಗಳನ್ನು ಎಲ್ಲರಿಗೂ ತಲುಪಿಸಿ, ಯುವಜನತೆಗೆ ಸ್ಫೂರ್ತಿ ತುಂಬುವ ಗುರಿಯನ್ನು ಹೊಂದಿದೆ.

ಎದೆ ನೋವು ಕಾಣಿಸಿಕೊಂಡಿತ್ತು

ನಟ ಪುನೀತ್ ರಾಜ್‌ಕುಮಾರ್ ಅವರು 2021ರ ಅಕ್ಟೋಬರ್ 29ರಂದು ಹೃದಯಾಘಾತದಿಂದ ನಿಧನರಾಗಿದ್ದರು. ಅವರಿಗೆ ಕೇವಲ 46 ವರ್ಷ ವಯಸ್ಸಾಗಿತ್ತು. ಅಂದು ಬೆಳಗ್ಗೆ ಜಿಮ್‌ನಲ್ಲಿ ವ್ಯಾಯಾಮ ಮಾಡುತ್ತಿದ್ದಾಗ ತೀವ್ರ ಎದೆ ನೋವು ಕಾಣಿಸಿಕೊಂಡ ನಂತರ ಅವರನ್ನು ತಕ್ಷಣ ಬೆಂಗಳೂರಿನ  ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರು ತೀವ್ರ ಪ್ರಯತ್ನಗಳನ್ನು ಮಾಡಿದರೂ, ಚಿಕಿತ್ಸೆಗೆ ಸ್ಪಂದಿಸದೆ ಅವರು ಕೊನೆಯುಸಿರೆಳೆದಿದ್ದರು. ಅವರ ಹಠಾತ್ ನಿಧನದ ಸುದ್ದಿ ಇಡೀ ಕರ್ನಾಟಕ, ಭಾರತೀಯ ಚಿತ್ರರಂಗ ಹಾಗೂ ಅವರ ಕೋಟ್ಯಂತರ ಅಭಿಮಾನಿಗಳಿಗೆ ಆಘಾತವನ್ನು ಉಂಟು ಮಾಡಿತ್ತು. 

ಲಕ್ಷಾಂತರ ಅಭಿಮಾನಿಗಳು ಬೆಂಗಳೂರಿನ ಕಂಠೀರವ ಕ್ರೀಡಾಂಗಣಕ್ಕೆ ಬಂದು ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದಿದ್ದರು. ಡಾ. ರಾಜ್‌ಕುಮಾರ್ ಅವರ ಕುಟುಂಬದ ಸಂಪ್ರದಾಯದಂತೆ, ಪುನೀತ್ ರಾಜ್‌ಕುಮಾರ್ ಅವರ ಕಣ್ಣುಗಳನ್ನು ದಾನ ಮಾಡಲಾಗಿತ್ತು. ಅಂತಿಮವಾಗಿ, ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿರುವ ಅವರ ತಂದೆಯ ಸಮಾಧಿಯ ಪಕ್ಕದಲ್ಲೇ ಸರ್ಕಾರಿ ಗೌರವಗಳೊಂದಿಗೆ ಅವರ ಅಂತ್ಯಕ್ರಿಯೆ ಮಾಡಲಾಗಿತ್ತು. 

ಮರಣೋತ್ತರವಾಗಿ ಅವರಿಗೆ ಕರ್ನಾಟಕ ರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿʻಕರ್ನಾಟಕ ರತ್ನʼ ನೀಡಿ ಗೌರವಿಸಲಾಗಿತ್ತು. 

Tags:    

Similar News