ಅಂಜನಾದ್ರಿ ಬೆಟ್ಟ ಸೇರಿದಂತೆ 11 ಪ್ರವಾಸಿ ತಾಣಗಳಿಗೆ ರೋಪ್‌ವೇ ನಿರ್ಮಾಣಕ್ಕೆ ಸರ್ಕಾರ ಅನುಮೋದನೆ

ಹನುಮ ಜಯಂತಿ ಸಂದರ್ಭದಲ್ಲಿ ಉತ್ತರ ಭಾರತದ ಪ್ರವಾಸಿಗರು ಸೇರಿದಂತೆ ಲಕ್ಷಾಂತರ ಜನರು ಅಂಜನಾದ್ರಿ ಬೆಟ್ಟಕ್ಕೆ ಭೇಟಿ ನೀಡುತ್ತಾರೆ. ಯಾತ್ರಿಕರು ಉಳಿದುಕೊಳ್ಳಲು ವ್ಯವಸ್ಥೆ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.;

Update: 2025-09-03 09:15 GMT

ಸಿಎಂ ಸಿದ್ದರಾಮಯ್ಯ ಸಭೆ ನಡೆಸಿದರು.

Click the Play button to listen to article

2024-25ನೇ ಸಾಲಿನ ಆಯವ್ಯಯ ಘೋಷಣೆಯಂತೆ ಅಂಜನಾದ್ರಿ ಬೆಟ್ಟವೂ ಒಳಗೊಂಡಂತೆ ರಾಜ್ಯದ 11 ಪ್ರವಾಸಿ ತಾಣಗಳಿಗೆ ಸಾರ್ವಜನಿಕ ಖಾಸಗಿ ಸಹಭಾಗಿತ್ವ (ಪಿಪಿಪಿ) ಮಾದರಿಯಲ್ಲಿ ರೋಪ್‌ವೇಗಳನ್ನು ಅಭಿವೃದ್ಧಿಪಡಿಸಲು ಅನುಮೋದನೆ ನೀಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಬುಧವಾರ ಕಾವೇರಿ ನಿವಾಸದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಹನುಮ ಜಯಂತಿ ಸಂದರ್ಭದಲ್ಲಿ ಉತ್ತರ ಭಾರತದ ಪ್ರವಾಸಿಗರು ಸೇರಿದಂತೆ ಲಕ್ಷಾಂತರ ಜನರು ಅಂಜನಾದ್ರಿ ಬೆಟ್ಟಕ್ಕೆ ಭೇಟಿ ನೀಡುತ್ತಾರೆ. ಯಾತ್ರಿಕರು ಉಳಿದುಕೊಳ್ಳಲು ವ್ಯವಸ್ಥೆ ಮಾಡಬೇಕು, ಹಿರಿಯ ಭಕ್ತಾಧಿಗಳು ಬೆಟ್ಟವೇರಲು ಅನುಕೂಲವಾಗುವಂತೆ ಮೆಟ್ಟಿಲುಗಳ ವ್ಯವಸ್ಥೆ , ಸಮುದಾಯ ಭವನ ನಿರ್ಮಾಣ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿ ಪಡಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

180 ಕೋಟಿ ರೂಪಾಯಿ ಬಿಡುಗಡೆಗೆ ಸೂಚನೆ

ಅಂಜನಾದ್ರಿ ಕ್ಷೇತ್ರಕ್ಕೆ ಹಂತ-1 ಮತ್ತು ಹಂತ-2ರಲ್ಲಿ 200 ಕೋಟಿ ರೂಪಾಯಿಗಳ ಕಾಮಗಾರಿಗಳು ಮಂಜೂರಾಗಿದ್ದು, ಈವರೆಗೆ ಸದರಿ ಕಾಮಗಾರಿಗಳಿಗೆ 10 ಕೋಟಿ ರೂಪಾಯಿ ಬಿಡುಗಡೆ ಮಾಡಿದ್ದು, ಬಾಕಿ ಅನುದಾನ ಬಿಡುಗಡೆ ಮಾಡಲು ಆರ್ಥಿಕ ಇಲಾಖೆಗೆ ಸೂಚನೆ ಮಾಡಲಾಗುವುದು ಎಂದು ತಿಳಿಸಿದರು.

101 ಎಕರೆ ಭೂಸ್ವಾಧೀನ

ಮಂಜೂರಾಗಿರುವ ಕಾಮಗಾರಿಗಳನ್ನು ಕೈಗೊಳ್ಳಲು ಸರ್ಕಾರಿ ಜಮೀನಿನ ಕೊರತೆ ಇರುವುದರಿಂದ, ಪ್ರಸಾಪಿಸಿರುವ 77.28 ಖಾಸಗಿ ಜಮೀನನ್ನು ಅನುದಾನದ ಕೊರತೆಯಿರುವುದರಿಂದ ಈವರೆಗೂ ಭೂ-ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಾಗಿಲ್ಲ. ಆದ್ದರಿಂದ ಹೆಚ್ಚುವರಿ ಜಮೀನು ಒಳಗೊಂಡಂತೆ ಒಟ್ಟು 101.30 ಎಕರೆ ಖಾಸಗಿ ಜಮೀನು ಭೂಸ್ವಾಧೀನಪಡಿಸಿಕೊಳ್ಳಲು ಅಗತ್ಯವಾಗಿರುವ ಅನುದಾನವನ್ನು ಒದಗಿಸಲಾಗುವುದು ಎಂದರು.

ಮಂಜೂರಾಗಿರುವ ಬಹುತೇಕ ಕಾಮಗಾರಿಗಳನ್ನು ಅರಣ್ಯ ಇಲಾಖೆಯ ವ್ಯಾಪ್ತಿಗೆ ಬರುವ ಜಮೀನುಗಳಲ್ಲಿ ಕೈಗೊಳ್ಳಬೇಕಿರುವುದರಿಂದ, ಈ ಎಲ್ಲಾ ಕಾಮಗಾರಿಗಳನ್ನು ಕೈಗೊಳ್ಳಲು ಅರಣ್ಯ ಇಲಾಖೆಯ ನಿರಾಪೇಕ್ಷಣಾ ಪತ್ರ ನೀಡಬೇಕಿದ್ದು, ಈ ಕುರಿತು ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

Tags:    

Similar News