ಸಹಿ ಕನ್ನಡದಲ್ಲಿ ಏಕಿಲ್ಲ? ರಾಜ್ಯಪಾಲರ ಮತ್ತೊಂದು ತಗಾದೆ

ಕನ್ನಡದಲ್ಲಿರುವ ಪತ್ರಗಳಿಗೆ ಕನ್ನಡದಲ್ಲಿ ಹಾಗೂ ಆಂಗ್ಲದಲ್ಲಿ ಪತ್ರಗಳಿಗೆ ಆಂಗ್ಲದಲ್ಲಿ ಸಹಿ ಮಾಡುವುದು ತಪ್ಪಲ್ಲ. ಇಂತಹ ಕ್ಷುಲ್ಲಕ ವಿಚಾರಗಳ ಬಗ್ಗೆ ರಾಜ್ಯಪಾಲರು ಉತ್ತರ ಕೇಳುವುದು ಸರಿಯಲ್ಲ ಎಂದು‌ ಸಿದ್ದರಾಮಯ್ಯ ಟೀಕಿಸಿದ್ದಾರೆ.

Update: 2024-09-23 13:37 GMT

ಕನ್ನಡದಲ್ಲಿ ಸಹಿ ಮಾಡುತ್ತಿಲ್ಲ ಎಂಬ ವಿಷಯದ ಬಗ್ಗೆಯೂ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಸರ್ಕಾರಕ್ಕೆ ಪತ್ರ ಬರೆದಿದ್ದಾರೆ! ಈ ವಿಷಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ವತಃ ಹೇಳಿಕೊಂಡಿದ್ದಾರೆ.

ರಾಜ್ಯಪಾಲರ ನಡೆಗೆ ಸಂಬಂಧಿಸಿದಂತೆ ರಾಷ್ಟ್ರಪತಿಗೆ ದೂರು ಕೊಡುವ ವಿಚಾರದಲ್ಲಿ ಮಾತನಾಡಿದ ಸಿದ್ದರಾಮಯ್ಯ, ರಾಜ್ಯಪಾಲರು ಸಣ್ಣ ವಿಷಯಗಳ ಬಗ್ಗೆ ಗಮನ ಕೊಡುತ್ತಿದ್ದಾರೆ ಎಂದು ಟೀಕಿಸಿದ್ದಾರೆ. ಕನ್ನಡದಲ್ಲಿ ಸಹಿ ಮಾಡುತ್ತಿಲ್ಲವೆಂಬ ಸಣ್ಣ ವಿಷಯದ ಬಗ್ಗೆಯೂ ರಾಜ್ಯಪಾಲರು ಸರ್ಕಾರಕ್ಕೆ ಪತ್ರ ಬರೆಯುತ್ತಿದ್ದಾರೆ. ಕನ್ನಡದಲ್ಲಿರುವ ಪತ್ರಗಳಿಗೆ ಕನ್ನಡದಲ್ಲಿ ಹಾಗೂ ಆಂಗ್ಲದಲ್ಲಿ ಪತ್ರಗಳಿಗೆ ಆಂಗ್ಲದಲ್ಲಿ ಸಹಿ ಮಾಡುವುದು ತಪ್ಪಲ್ಲ. ಇಂತಹ ಕ್ಷುಲ್ಲಕ ವಿಚಾರಗಳ ಬಗ್ಗೆ ರಾಜ್ಯಪಾಲರು ಉತ್ತರ ಕೇಳುವುದು ಸರಿಯಲ್ಲ ಎಂದು ವಾಗ್ದಾಳಿ ನಡೆಸಿದರು.

ಪರಿಶೀಲಿಸಿ ಕ್ರಮ

ರಾಜ್ಯಪಾಲರು ಅರ್ಕಾವತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರಕ್ಕೆ ಪತ್ರ ಬರೆದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಬಿಜೆಪಿಯವರು ಹಿಂದೆ ನಾಲ್ಕು ವರ್ಷ ಅವಧಿಯಲ್ಲಿದ್ದಾಗ ವಿಷಯವನ್ನು ಏಕೆ ವಿಧಾನಸಭೆಯಲ್ಲಿ ಪ್ರಸ್ತಾಪಿಸಲಿಲ್ಲ. ಈ ವಿಷಯಕ್ಕೆ ಸಂಬಂಧಿಸಿದಂತೆ ಸಿ.ಟಿ.ರವಿಯವರು ರಾಜ್ಯಪಾಲರಿಗೆ ಈಗ ಪತ್ರ ಬರೆದಿದ್ದು, ಹಿಂದೆ ಅವರು ಸಚಿವರಾಗಿದ್ದಾಗ ಕ್ರಮವೇಕೆ ತೆಗೆದುಕೊಳ್ಳಲಿಲ್ಲ ಎಂದು ಮರುಪ್ರಶ್ನಿಸಿದರು. ರಾಜ್ಯಪಾಲರ ಪತ್ರವನ್ನು ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು

Tags:    

Similar News