GP Staff Strike | ಗ್ರಾ.ಪಂ. ನೌಕರರ ಬೇಡಿಕೆ ಅಧ್ಯಯನಕ್ಕೆ ಸಮಿತಿ: ಅಧಿಕಾರಿಗಳಿಗೆ ಸಿಎಂ ಸೂಚನೆ

ಗ್ರಾಮ ಪಂಚಾಯ್ತಿ ಒಕ್ಕೂಟಗಳೊಂದಿಗೆ ಸಭೆ ನಡೆಸಿರುವ ಪ್ರಿಯಾಂಕ್ ಖರ್ಗೆ ಅವರು, ಸಮಸ್ಯೆಗಳ ಅಧ್ಯಯನ ಹಾಗೂ ಅವುಗಳ ಇತ್ಯರ್ಥಕ್ಕೆ ತಜ್ಞರ ಸಮಿತಿ ರಚಿಸುವುದಾಗಿ ಭರವಸೆ ನೀಡಿದ್ದಾರೆ

Update: 2024-10-15 06:05 GMT

ಗ್ರಾಮ ಪಂಚಾಯ್ತಿ ಸದಸ್ಯರು, ಅಧಿಕಾರಿಗಳು ಹಾಗೂ ನೌಕರರ ನ್ಯಾಯಯುತ ಬೇಡಿಕೆಗಳನ್ನು ಅಧ್ಯಯನ ಮಾಡಿ ಸರ್ಕಾರಕ್ಕೆ ವರದಿ ಸಲ್ಲಿಸಲು ಅಗತ್ಯವಿರುವ ತಜ್ಞರ ಸಮಿತಿ ರಚಿಸುವ ಕುರಿತು ಪ್ರಸ್ತಾವನೆ ಸಲ್ಲಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಪ್ರಧಾನ ಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ.

ವಿಧಾನ ಪರಿಷತ್ ಕಾಂಗ್ರೆಸ್ ಸದಸ್ಯರಾದ ದಿನೇಶ್ ಗೂಳಿಗೌಡ ಅವರು ಗ್ರಾಮ ಪಂಚಾಯ್ತಿ ನೌಕರರ ಬೇಡಿಕೆ ಈಡೇರಿಸಲು ತಜ್ಞರ ಸಮಿತಿ ರಚಿಸುವಂತೆ ಸಿಎಂ ಸಿದ್ದರಾಮಯ್ಯ, ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಪತ್ರ ಬರೆದಿದ್ದರು.

ಈ ಸಂಬಂಧ ಗ್ರಾಮ ಪಂಚಾಯ್ತಿ ಒಕ್ಕೂಟಗಳೊಂದಿಗೆ ಸಭೆ ನಡೆಸಿರುವ ಪ್ರಿಯಾಂಕ್ ಖರ್ಗೆ ಅವರು, ಸಮಸ್ಯೆಗಳ ಅಧ್ಯಯನ ಹಾಗೂ ಅವುಗಳ ಇತ್ಯರ್ಥಕ್ಕೆ ತಜ್ಞರ ಸಮಿತಿ ರಚಿಸುವುದಾಗಿ ಭರವಸೆ ನೀಡಿದ್ದಾರೆ.

ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಗ್ರಾಮ ಪಂಚಾಯ್ತಿ ನೌಕರರು ಹಾಗೂ ಅಧಿಕಾರಿಗಳು ರಾಜ್ಯವ್ಯಾಪಿ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದ್ದರು. ಇದರಿಂದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸೇವೆಗಳು ಸ್ಥಗಿತಗೊಂಡಿದ್ದವು.

Tags:    

Similar News