Republic Day 2025: ಗಣರಾಜ್ಯೋತ್ಸವ ಸಂಭ್ರಮದ ನಡುವೆ ಸಿಎಂ ಹೊಗಳಿದ ದಿನೇಶ್‌ ಗುಂಡೂರಾವ್‌

Republic Day 2025: ಮಂಗಳೂರಿನಲ್ಲಿ ನಡೆದ ಗಣರಾಜ್ಯೋತ್ಸವದಲ್ಲಿ ಪಾಲ್ಗೊಂಡು ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಮುಖ್ಯಮಂತ್ರಿ ಬದಲಾವಣೆ ಚರ್ಚೆಯ ವಿಷಯವೇ ಅಲ್ಲ.;

Update: 2025-01-26 09:24 GMT
ದಿನೇಶ್‌ ಗುಂಡೂರಾವ್‌

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲ್ಲರ ನೆಚ್ಚಿನ ನಾಯಕರಾಗಿದ್ದು, ಬದಲಾವಣೆಯ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸುವುದು ಅಪ್ರಸ್ತುತ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಸಿ.ಎಂ ಸಿದ್ದರಾಮಯ್ಯ ಅವರನ್ನು ಹಾಡಿ ಹೊಗಳಿದ್ದಾರೆ. 

ಮಂಗಳೂರಿನಲ್ಲಿ ನಡೆದ ಗಣರಾಜ್ಯೋತ್ಸವದಲ್ಲಿ ಪಾಲ್ಗೊಂಡು ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬದಲಾವಣೆ ಚರ್ಚೆಯ ವಿಷಯವೇ ಅಲ್ಲ. ಪಕ್ಷದ ಆಂತರಿಕ ವಿಷಯಗಳು ಏನೇ ಇದ್ದರೂ ವರಿಷ್ಠರು ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದು ಹೇಳಿದರು. 

ಉಳ್ಳಾಲ ತಾಲ್ಲೂಕಿನ ಕೋಟೆಕಾರು ವ್ಯವಸಾಯ ಸೇವಾ ಸಹಕಾರ ಸಂಘದ ಕೆ.ಸಿ.ರೋಡ್ ಶಾಖೆಯಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿದ ಅವರು, ಈ ಪ್ರಕರಣವನ್ನು ಪೊಲೀಸರು ನಾಲ್ಕು ದಿನಗಳಲ್ಲಿ ಭೇದಿಸಿ, ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.  ಚಬ್ಯಾಂಕ್‌ಗಳು ಹಾಗೂ ಹಣಕಾಸು ಸಂಸ್ಥೆಗಳ ಭದ್ರತೆಗೆ ಆದ್ಯತೆ ನೀಡಬೇಕು. ಸುರಕ್ಷತೆಯ ಬಗ್ಗೆ ಎಲ್ಲಾ ಹಣಕಾಸು ಸಂಸ್ಥೆಗಳಿಗೆ ಸುರಕ್ಷತೆಯ ಮಾರ್ಗಸೂಚಿ ನೀಡುವಂತೆ ಪೊಲೀಸರಿಗೆ ಸೂಚಿಸಿದ್ದೇನೆ ಅಲ್ಲದೆ ಈ ಪ್ರಕರಣದಲ್ಲಿ ಯಾರು ಭಾಗಿಯಾಗಿದ್ದಾರೆ, ಇದರ ಹಿಂದಿರುವವರು ಯಾರು ಎಲ್ಲವನ್ನು ಪೊಲೀಸರು ಪತ್ತೆ ಹಚ್ಚಲಿದ್ದಾರೆ ಎಂದು ಹೇಳಿದರು.

ಮಸಾಜ್ ಪಾರ್ಲರ್ ಮೇಲೆ ರಾಮ ಸೇನೆ ನಡೆಸಿದ ದಾಳಿಯನ್ನು ಖಂಡಿಸಿದ ಅವರು ಕಾನೂನು ಕೈಗೆತ್ತಿಕೊಳ್ಳುವವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು. ಅಕ್ರಮ ಚಟುವಟಿಕೆಗಳು ನಡೆಯುತ್ತಿದ್ದರೆ ಮೊದಲು ಪೊಲೀಸರ ಗಮನಕ್ಕೆ ತರಬೇಕು ಅದು ಬಿಟ್ಟು ಈ ರೀತಿ ಗೂಂಡಾಗಿರಿ ಮಾಡಿ ದಕ್ಷಿಣ ಕನ್ನಡ ಜಿಲ್ಲೆಗೆ ಕೆಟ್ಟ ಹೆಸರು ತರೋದು ಸರಿಯಲ್ಲ, ಈ ರೀತಿಯ ಘಟನೆಗಳು ನಡೆದಾಗ ಬಂಡವಾಳ ಹೂಡಿಕೆ, ಧಾರ್ಮಿಕ ಕ್ಷೇತ್ರಗಳಿಗೆ ಬರುವವರ ಮೇಲೆ ಪರಿಣಾಮ ಬೀಳುತ್ತದೆ ಎಂದು ಅವರು ಅಭಿಪ್ರಾಯಪಟ್ಟರು. 

Tags:    

Similar News