ಹಾಸನ ಗಣೇಶ ಮೆರವಣಿಗೆ ದುರಂತ : ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ಪರಿಹಾರ ಘೋಷಣೆ

ಮೃತರ ಕುಟುಂಬಗಳಿಗೆ ಸರ್ಕಾರದ ವತಿಯಿಂದ ತಲಾ ರೂ.5 ಲಕ್ಷ ಪರಿಹಾರ ನೀಡಲಾಗುವುದು. ಘಟನೆಯಲ್ಲಿ ಗಾಯಗೊಂಡವರ ಚಿಕಿತ್ಸೆಯ ವೆಚ್ಚವನ್ನು ಸರ್ಕಾರವೇ ಭರಿಸಲಿದೆ.;

Update: 2025-09-12 17:36 GMT

ಹಾಸನದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ತೆರಳುತ್ತಿದ್ದವರ ಮೇಲೆ ಲಾರಿ ಹರಿದು ಆರು ಮಂದಿ  ಮೃತಪಟ್ಟಿದ್ದು, ಮೃತರ ಕುಟುಂಬಗಳಿಗೆ ರಾಜ್ಯ ಸರ್ಕಾರ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದೆ.

ಈ ಕುರಿತು ಸಿಎಂ ಸಿದ್ದರಾಮಯ್ಯ ಅವರು ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿದ್ದು, ಘಟನೆಗೆ ಆಘಾತ ವ್ಯಕ್ತಪಡಿಸಿದ್ದಾರೆ.

ಮೃತರ ಕುಟುಂಬಗಳಿಗೆ ಸರ್ಕಾರದ ವತಿಯಿಂದ ತಲಾ ರೂ.5 ಲಕ್ಷ ಪರಿಹಾರ ನೀಡಲಾಗುವುದು. ಘಟನೆಯಲ್ಲಿ ಗಾಯಗೊಂಡವರ ಚಿಕಿತ್ಸೆಯ ವೆಚ್ಚವನ್ನು ಸರ್ಕಾರವೇ ಭರಿಸಲಿದೆ. ಇದು ಅತ್ಯಂತ ನೋವಿನ ಘಳಿಗೆ. ಅಪಘಾತ ಸಂತ್ರಸ್ತ ಕುಟುಂಬಗಳ ಜೊತೆ ನಾವೆಲ್ಲರೂ ನಿಲ್ಲೋಣ ಎಂದು ಟ್ವೀಟ್ ಮಾಡಿದ್ದಾರೆ.

ಮೆರವಣಿಗೆಯಲ್ಲಿದ್ದ ಜನರ ಮೇಲೆ ಟ್ರಕ್ ಹರಿದ ಘಟನೆಯಲ್ಲಿ ಸುಮಾರು 20ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿದ್ದಾರೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಗಾಯಾಳುಗಳು ಆದಷ್ಟು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.

ಮೊಸಳೆಹೊಸಹಳ್ಳಿಯಲ್ಲಿ ಗಣಪತಿ ವಿಸರ್ಜನೆ ಮೆರವಣಿಗೆ ನಡೆಯುತ್ತಿತ್ತು. ಸಾವಿರಾರು ಜನರು ಮೆರವಣಿಗೆಯಲ್ಲಿ ಭಾಗವಹಿಸಿ, ಡಿಜೆ ಸದ್ದಿಗೆ ಕುಣಿದು ಕುಪ್ಪಳಿಸುತ್ತಿದ್ದರು.  ಈ ವೇಳೆ ಯಮರೂಪಿ ಟ್ರಕ್ ನಿಯಂತ್ರಣ ತಪ್ಪಿ ರಭಸದಿಂದ ಡಿವೈಡರ್ ಗುದ್ದಿ, ನೇರವಾಗಿ ಜನರ‌ ಮೇಲೆ ಹರಿಯಿತು. ಸ್ಥಳದಲ್ಲೇ ಆರು ಮಂದಿ ಮೃತಪಟ್ಟರು. 

ಮೃತರ ಕುಟುಂಬಸ್ಥರ ಆಕ್ರಂಧನ ಮುಗಿಲು ಮುಟ್ಟಿತ್ತು. ಅಪಘಾತದ ವಿಚಾರ ತಿಳಿಯುತ್ತಿದ್ದಂತೆಯೇ ಮಾಜಿ ಸಚಿವ ಎಚ್.ಡಿ. ರೇವಣ್ಣ, ಪರಿಷತ್ ಸದಸ್ಯ ಸೂರಜ್ ರೇವಣ್ಣ, ಸಂಸದ ಶ್ರೇಯಸ್ ಪಟೇಲ್ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ಪರಿಶೀಲಿಸಿದರು.

Tags:    

Similar News