ಎಂಜಿನಿಯರಿಂಗ್ ಪದವೀಧರರಿಗೆ ರೈಲ್ವೆಯಲ್ಲಿ ಉದ್ಯೋಗಾವಕಾಶ: 2,569 ಹುದ್ದೆಗಳಿಗೆ ಅರ್ಜಿ ಆಹ್ವಾನ
ಈ ಕುರಿತು ಪ್ರಕಟಣೆ ಹೊರಡಿಸಿರುವ ರೈಲ್ವೆ ಇಲಾಖೆ ಅ.30 ರಿಂದ ಅರ್ಜಿ ಸಲ್ಲಿಸಬಹುದಾಗಿದ್ದು, ನ.30 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಡಿ.2ರ ಒಳಗೆ ಪರೀಕ್ಷಾ ಶುಲ್ಕವನ್ನು ಕಟ್ಟಲು ಕೊನೆಯ ದಿನಾಂಕವಾಗಿದೆ ಎಂದು ತಿಳಿಸಿದೆ.
ಸಾಂದರ್ಭಿಕ ಚಿತ್ರ
ಕೇಂದ್ರ ಸರ್ಕಾರದ ಉದ್ಯೋಗದ ನಿರೀಕ್ಷೆಯಲ್ಲಿದ್ದ ದೇಶಾದ್ಯಂತದ ಲಕ್ಷಾಂತರ ಎಂಜಿನಿಯರಿಂಗ್ ಪದವೀಧರರು ಮತ್ತು ಡಿಪ್ಲೋಮಾ ಅಭ್ಯರ್ಥಿಗಳಿಗೆ ರೈಲ್ವೆ ನೇಮಕಾತಿ ಮಂಡಳಿ (RRB) ಸಿಹಿ ಸುದ್ದಿ ನೀಡಿದೆ. ಜೂನಿಯರ್ ಇಂಜಿನಿಯರ್ ಸೇರಿದಂತೆ ಒಟ್ಟು 2,569 ತಾಂತ್ರಿಕ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿದ್ದು, ಅಕ್ಟೋಬರ್ 31 ರಿಂದ ಆನ್‌ಲೈನ್ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ.
ವಿವಿಧ ತಾಂತ್ರಿಕ ಹುದ್ದೆಗಳಿಗೆ ಅವಕಾಶ
ಈ ಬಾರಿಯ ನೇಮಕಾತಿಯಲ್ಲಿ, ರೈಲ್ವೆ ಇಲಾಖೆಯು ಜೂನಿಯರ್ ಇಂಜಿನಿಯರ್ (JE), ಡಿಪೋ ಮೆಟೀರಿಯಲ್ ಸೂಪರಿಂಟೆಂಡೆಂಟ್ ಮತ್ತು ಕೆಮಿಕಲ್ ಹಾಗೂ ಮೆಟಲರ್ಜಿಕಲ್ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಇವು ರೈಲ್ವೆಯ ತಾಂತ್ರಿಕ ಕಾರ್ಯಾಚರಣೆಯಲ್ಲಿ ಪ್ರಮುಖ ಪಾತ್ರ ವಹಿಸುವ ಜವಾಬ್ದಾರಿಯುತ ಹುದ್ದೆಗಳಾಗಿವೆ.
ಅರ್ಹತೆ ಮತ್ತು ವಯೋಮಿತಿಯಲ್ಲಿ ವಿಶೇಷ ಸಡಿಲಿಕೆ
ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಎಂಜಿನಿಯರಿಂಗ್ ಪದವಿ ಅಥವಾ ಮೂರು ವರ್ಷಗಳ ಡಿಪ್ಲೋಮಾ ಪೂರ್ಣಗೊಳಿಸಿದ ಅಭ್ಯರ್ಥಿಗಳು ಜೂನಿಯರ್ ಇಂಜಿನಿಯರ್ ಮತ್ತು ಡಿಪೋ ಮೆಟೀರಿಯಲ್ ಸೂಪರಿಂಟೆಂಡೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ರಸಾಯನಶಾಸ್ತ್ರ ಮತ್ತು ಭೌತಶಾಸ್ತ್ರದಲ್ಲಿ ಬಿಎಸ್ಸಿ ಪದವಿ ಪಡೆದವರು ಕೆಮಿಕಲ್ ಮತ್ತು ಮೆಟಲರ್ಜಿಕಲ್ ಸಹಾಯಕ ಹುದ್ದೆಗೆ ಅರ್ಹರಾಗಿರುತ್ತಾರೆ. ಅಭ್ಯರ್ಥಿಗಳಿಗೆ ಕನಿಷ್ಠ 18 ರಿಂದ ಗರಿಷ್ಠ 36 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ. ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಹಿಂದುಳಿದ ವರ್ಗಗಳಿಗೆ 3 ವರ್ಷ ಹಾಗೂ ಅಂಗವಿಕಲರಿಗೆ 10 ವರ್ಷಗಳ ಸಡಿಲಿಕೆ ಇರುತ್ತದೆ. ವಿಶೇಷವಾಗಿ, ಕೋವಿಡ್ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ, ಒಂದು ಬಾರಿಯ ಕ್ರಮವಾಗಿ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ ಹೆಚ್ಚುವರಿಯಾಗಿ 3 ವರ್ಷಗಳ ವಯೋಮಿತಿ ಸಡಿಲಿಕೆ ನೀಡಿರುವುದು ಲಕ್ಷಾಂತರ ಅಭ್ಯರ್ಥಿಗಳಿಗೆ ವರದಾನವಾಗಿದೆ.
ಆಕರ್ಷಕ ವೇತನ ಮತ್ತು ಪಾರದರ್ಶಕ ಆಯ್ಕೆ ಪ್ರಕ್ರಿಯೆ
7ನೇ ವೇತನ ಆಯೋಗದ ಶಿಫಾರಸುಗಳ ಅಡಿಯಲ್ಲಿ, ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹35,400 ಆರಂಭಿಕ ಮೂಲ ವೇತನ ಹಾಗೂ ಇತರೆ ಆಕರ್ಷಕ ಭತ್ಯೆಗಳು ದೊರೆಯಲಿವೆ. ಅಭ್ಯರ್ಥಿಗಳನ್ನು ಎರಡು ಹಂತದ ಕಠಿಣ ಹಾಗೂ ಪಾರದರ್ಶಕವಾದ ಕಂಪ್ಯೂಟರ್ ಆಧಾರಿತ ಪರೀಕ್ಷೆ (CBT) ಮೂಲಕ ಆಯ್ಕೆ ಮಾಡಲಾಗುತ್ತದೆ. ಮೊದಲ ಹಂತದಲ್ಲಿ 90 ನಿಮಿಷಗಳ ಸಾಮಾನ್ಯ ಪರೀಕ್ಷೆ ಮತ್ತು ಎರಡನೇ ಹಂತದಲ್ಲಿ 120 ನಿಮಿಷಗಳ ವಿಸ್ತೃತ ತಾಂತ್ರಿಕ ಪರೀಕ್ಷೆ ಇರುತ್ತದೆ.
ಅರ್ಜಿ ಸಲ್ಲಿಕೆ ಮತ್ತು ಪ್ರಮುಖ ದಿನಾಂಕಗಳು
ಆಸಕ್ತ ಅಭ್ಯರ್ಥಿಗಳು ತಮ್ಮ ಪ್ರಾದೇಶಿಕ ರೈಲ್ವೆ ನೇಮಕಾತಿ ಮಂಡಳಿಯ (RRB) ಅಧಿಕೃತ ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಮಾತ್ರ ಅರ್ಜಿ ಸಲ್ಲಿಸಬೇಕು. ಕರ್ನಾಟಕದ ಅಭ್ಯರ್ಥಿಗಳು ಬೆಂಗಳೂರು ಆರ್‌ಆರ್‌ಬಿ ವೆಬ್‌ಸೈಟ್ www.rrbbnc.gov.in ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಅಕ್ಟೋಬರ್ 31, 2025 ರಿಂದ ಆರಂಭವಾಗಿ, ನವೆಂಬರ್ 30, 2025ಕ್ಕೆ ಕೊನೆಗೊಳ್ಳಲಿದೆ. ಪರೀಕ್ಷಾ ಶುಲ್ಕ ಪಾವತಿಸಲು ಡಿಸೆಂಬರ್ 2, 2025 ಕೊನೆಯ ದಿನ