ಎಸ್‌ಎಸ್‌ಎಲ್‌ಸಿ, ಪಿಯುಸಿ ಪಾಸ್ ಆಗಿದೆಯೇ? ; 946 ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ಅರ್ಜಿ ಆಹ್ವಾನ
ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದೊಳಗೆ 19 ವರ್ಷ ಪೂರ್ಣಗೊಂಡಿರಬೇಕು. 35 ವರ್ಷ ಮೀರಿರಬಾರದು. ಅರ್ಜಿ ಸಲ್ಲಿಸುವ ವಿಕಲಚೇತನರಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ಇರಲಿದೆ.
ಸಾಂದರ್ಭಿಕ ಚಿತ್ರ
ತುಮಕೂರು ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ 946 ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜ.9ರಂದು ಕೊನೆಯ ದಿನವಾಗಿದೆ.
ಚಿಕ್ಕನಾಯಕನಹಳ್ಳಿ, ಗುಬ್ಬಿ, ಕೊರಟಗೆರೆ, ಕುಣಿಗಲ್, ಮಧುಗಿರಿ, ಪಾವಗಡ, ಶಿರಾ, ತಿಪಟೂರು, ತುಮಕೂರು ಗ್ರಾಮಾಂತರ, ನಗರ ಹಾಗೂ ತುರುವೆಕೆರೆ ವ್ಯಾಪ್ತಿಯಲ್ಲಿ 117 ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗಳು ಹಾಗೂ 829 ಅಂಗನವಾಡಿ ಸಹಾಯಕಿಯರ ಹುದ್ದೆಗಳು ಖಾಲಿ ಇವೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಹತೆಗಳೇನು ?
ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದೊಳಗೆ 19 ವರ್ಷ ಪೂರ್ಣಗೊಂಡಿರಬೇಕು. 35 ವರ್ಷ ಮೀರಿರಬಾರದು. ಅರ್ಜಿ ಸಲ್ಲಿಸುವ ವಿಕಲಚೇತನರಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ಇರುತ್ತದೆ. ಅಭ್ಯರ್ಥಿಯು ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಕನಿಷ್ಠ ಪಿಯುಸಿ ತೇರ್ಗಡೆ ಹೊಂದಿರಬೇಕು. ಎಸ್‌ಎಸ್‌ಎಲ್‌ಯಲ್ಲಿ ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಓದಿರಬೇಕು.
ಸಹಾಯಕಿ ಹುದ್ದೆಗೆ ಎಸ್‌ಎಸ್‌ಎಲ್‌ಸಿ ಕಡ್ಡಾಯ
ಅಂಗನವಾಡಿ ಕಾರ್ಯಕರ್ತೆಯರ ನೇಮಕಾತಿ ಸಂದರ್ಭದಲ್ಲಿ ಅಂಗನವಾಡಿ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಡಿಪ್ಲೊಮಾ ನ್ಯೂಟ್ರಿಷಿಯನ್, ಹೋಂ ಸೈನ್ಸ್ ಸರ್ಟಿಫಿಕೇಟ್ ಕೋರ್ಸ್, ಒಂದು ವರ್ಷದ ನರ್ಸರಿ ಅಥವಾ ಪೂರ್ವ ಪ್ರಾಥಮಿಕ ತರಬೇತಿ ಪಡೆದು ಪ್ರಮಾಣ ಪತ್ರ ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು ಹಾಗೂ ಈ ಅಭ್ಯರ್ಥಿಗಳಿಗೆ ಬೋನನ್ 5 ಅಂಕಗಳನ್ನು ನೀಡಲಾಗುವುದು. ಅಭ್ಯರ್ಥಿಯು ಅಂಗನವಾಡಿ ಸಹಾಯಕಿ ಹುದ್ದೆಗೆ ಕನಿಷ್ಠ ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ತರಗತಿಯಲ್ಲಿ ಉತ್ತೀರ್ಣವಾಗಿರಬೇಕು.
ಅಂಗನವಾಡಿ ಸಹಾಯಕಿಯರು ಯಾವುದೇ ಭಾಷಾ ಮಾಧ್ಯಮದಲ್ಲಿ ವ್ಯಾಸಂಗ ಮಾಡಿದ್ದರೂ ಹಾಗೂ ಯಾವುದೇ ರಾಜ್ಯದಲ್ಲಿ ವ್ಯಾಸಂಗ ಮಾಡಿದ್ದರೂ ಸಹಾ ಅವರು ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ವ್ಯಾಸಂಗ ಮಾಡಿರಬೇಕು ಹಾಗೂ ಮಾತೃಭಾಷೆ ಕನ್ನಡವಲ್ಲದೇ ಇರುವ ಅಭ್ಯರ್ಥಿಗಳಿಗೆ ಆಯ್ಕೆ ಸಮಿತಿಯು ಆಯ್ಕೆ ಸಮಯದಲ್ಲಿ ಸಂದರ್ಶನ ಏರ್ಪಡಿಸಿ ಹಾಗೂ ಅವಶ್ಯವಿದ್ದಲ್ಲಿ ಕನ್ನಡ ಭಾಷೆಯ ಜ್ಞಾನದ ಕುರಿತಂತೆ ಓದಿಸಿ, ಬರೆಸಿ ಅವರ ಕನ್ನಡ ಭಾಷಾ ಜ್ಞಾನವನ್ನು ಪರೀಕ್ಷಿಸಿ ಅವರನ್ನು ಆಯ್ಕೆ ಮಾಡುವ ಬಗ್ಗೆ ಸಮಿತಿಯವರು ನಿರ್ಧರಿಸಲಾಗುವುದು.
ಯಾವ ದಾಖಲೆಗಳು ಬೇಕು?
ಎಸ್‌ಎಸ್‌ಎಲ್‌ಸಿ, ಪಿಯುಸಿ ಅಂಕಪಟ್ಟಿ, ವಾಸಸ್ಥಳ ದೃಢೀಕರಣ ಪತ್ರ, ಸ್ಥಳೀಯ ವಿಳಾಸವಿರುವ ಆಧಾರ್ ಕಾರ್ಡ್, ರೇಷನ್ ಕಾರ್ಡ್, ಮತದಾರರ ಗುರುತಿನ ಚೀಟಿ ಹೊಂದಿರಬೇಕು. ತಾಂಡಾ ಹಾಗೂ ಬುಡಕಟ್ಟು ಜನರಿರುವ ಹಾಡಿಗಳಿಗೆ ಸೇರಿದವರಾಗಿದ್ದರೆ ಸಂಬಂಧಿಸಿದ ವಾಸ್ತವ್ಯ ಪ್ರಮಾಣ ಪತ್ರ ಸಲ್ಲಿಸುವುದು ಅಗತ್ಯ.
ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಸಲ್ಲಿಸುವವರು ಅಂಗವಿಕಲರಾಗಿದ್ದಲ್ಲಿ ದೈಹಿಕ ಅಂಗವಿಕಲತೆ ಶೇ.40 ಮೀರದಂತೆ ಇರುವವರು ಅರ್ಜಿ ಸಲ್ಲಿಸಬಹುದು. ಅಂಗವಿಕಲತೆ ಪ್ರಮಾಣ ಪತ್ರ ಲಗತ್ತಿಸುವುದು. ನೇಮಕಾತಿ ಪ್ರಕ್ರಿಯೆಯಲ್ಲಿ ನಿಗಧಿಪಡಿಸಿದ ವಿದ್ಯಾರ್ಹತೆಯಲ್ಲಿ ಗಳಿಸಿದ ಅಂಕಗಳಿಗೆ ಅಂಗವಿಕಲರಿಗೆ 5 ಬೋನಸ್ ಅಂಕಗಳನ್ನು ನೀಡಲಾಗುತ್ತದೆ. ಅಂಗವಿಕಲ ಅಭ್ಯರ್ಥಿಗಳು ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಸಲ್ಲಿಸಲು ಕನಿಷ್ಠ 19 ವರ್ಷದಿಂದ ಗರಿಷ್ಠ 45 ವರ್ಷದ ವಯೋಮಿತಿ ಇರತಕ್ಕದ್ದು.
ಯಾರೆಗೆಲ್ಲಾ ಬೋನಸ್ ಅಂಕ?
ಅಭ್ಯರ್ಥಿಯು ವಿಚ್ಚೇದಿತರಾಗಿದ್ದಲ್ಲಿ ವಿಚ್ಛೇದನಾ ಪ್ರಮಾಣ ಪತ್ರ ಲಗತ್ತಿಸಬೇಕು. ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ ನಡೆಸಲಾದ ಮಾಜಿ ದೇವದಾಸಿಯರ ಸಮೀಕ್ಷೆಯ ಪಟ್ಟಿಯಲ್ಲಿರುವ ಮಾಜಿ ದೇವದಾಸಿಯರ ಮಕ್ಕಳು ಅರ್ಜಿ ಸಲ್ಲಿಸಿದಲ್ಲಿ ಈ ಬಗ್ಗೆ ಮಹಿಳಾ ಅಭಿವೃದ್ಧಿ ನಿಗಮದ ಅಧಿಕಾರಿಗಳಿಂದ ಪಡೆದ ಪ್ರಮಾಣ ಪತ್ರ ಸಲ್ಲಿಸಬೇಕು. ಅಭ್ಯರ್ಥಿಯು ಯೋಜನಾ ನಿರಾಶ್ರಿತರಾಗಿದ್ದಲ್ಲಿ ತಹಶೀಲ್ದಾರರಿಂದ ಪಡೆದ ಪ್ರಮಾಣ ಪತ್ರ ಸಲ್ಲಿಸಬೇಕು. ಅಂತವರಿಗೆ 5 ಬೋನಸ್ ಅಂಕ ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ನಿರ್ದೇಶಕರು ಪತ್ರಿಕಾ ಪಕ್ರಟಣೆಯಲ್ಲಿ ತಿಳಿಸಿದ್ದಾರೆ.