ನಾನಿರೋದು ಬೀದಿಯಲ್ಲಿ, ನೀನಿರೋದು ಗಾಜಿನ ಮನೆಯಲ್ಲಿ: ಡಿಕೆಶಿಗೆ ಎಚ್‌ಡಿಕೆ ಸವಾಲು

ನೀವೇ ಅಲ್ಲವೇ. ಅದೇನೋ ಬಿಚ್ತೀನಿ ಅಂದ್ಯಲ್ಲಪ್ಪ, ಬಿಚ್ಚು ನೋಡೋಣ, ನಂದು ವಿಜಯೆಂದ್ರದ್ದು. ಆಮೇಲೆ ನಿನ್ನದನ್ನು ಹೇಗೆ ಬಿಚ್ಚುತೀನಿ ಎಂದು ನೋಡುವಿಯಂತೆ. ಏನಿದೆ ನಿಮ್ಮ ಬಳಿ ಬಿಚ್ಚಿ; ಹೀಗೆಂದು ಎಚ್‌ಡಿ ಕುಮಾರಸ್ವಾಮಿ ಅವರು ಡಿ.ಕೆ. ಶಿವಕುಮಾರ್‌ ಅವರಿಗೆ ಸವಾಲು ಹಾಕಿದರು.

Update: 2024-08-04 12:07 GMT

ʼನಿಮ್ಮದೆಲ್ಲ ಬಿಚ್ಚಿಡುತ್ತೇನೆʼ ಎಂದು ಹೇಳಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಗುಡುಗಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು, ನಾನು ನಿಮ್ಮದನ್ನು ಬಿಚ್ಚಲು ಹೋದರೆ ಪುಟಗಟ್ಟಲೆ ಇದೆ ಎಂದು ಎಚ್ಚರಿಕೆ ಕೊಟ್ಟರು.

ಬಿಡದಿಯಲ್ಲಿ ಮೈಸೂರು ಚಲೋ ಎರಡನೇ ದಿನದ ಪಾದಯಾತ್ರೆಗೆ ಚಾಲನೆ ಕೊಟ್ಟ ನಂತರ ಬಹಿರಂಗ ಸಭೆಯಲ್ಲಿ ಮಾತನಾಡಿದ ಅವರು, ಆ ಹೆಣ್ಣುಮಗಳನ್ನು ಕಿಡ್ನಾಪ್ ಮಾಡಿ ಬೆದರಿಸಿ ಅವರಪ್ಪನಿಂದ ಸದಾಶಿವನಗರದಲ್ಲಿ ನಿವೇಶನ ಬರೆಸಿಕೊಂಡಿದ್ದೀರಿ. ಆ ಹೆಣ್ಣುಮಗಳನ್ನು ಕಿಡ್ನ್ಯಾಪ್ ಮಾಡಿ ಬೆದರಿಕೆ ಹಾಕಿದ್ದು ನೀವೇ ಅಲ್ಲವೇ. ಅದೇನೋ ಬಿಚ್ತೀನಿ ಅಂದ್ಯಲ್ಲಪ್ಪ, ಬಿಚ್ಚು ನೋಡೋಣ, ನಂದು ವಿಜಯೆಂದ್ರದ್ದು. ಆಮೇಲೆ ನಿನ್ನದನ್ನು ಹೇಗೆ ಬಿಚ್ಚುತೀನಿ ಎಂದು ನೋಡುವಿಯಂತೆ. ಏನಿದೆ ನಿಮ್ಮ ಬಳಿ ಬಿಚ್ಚಿ, ನಾನಿರೋದು ಬೀದಿಯಲ್ಲಿ, ನೀನಿರೋದು ಗಾಜಿನ ಮನೆಯಲ್ಲಿ ಎಂದು ಡಿಕೆಶಿ ವಿರುದ್ಧ ಹೆಚ್ಡಿಕೆ ವಾಗ್ದಾಳಿ ನಡೆಸಿದರು.

ನಾನು ಬಿಚ್ಚೋಕ್ಕೆ ಹೋದ್ರೆ ನಿಮ್ಮದು ಪುಟಗಟ್ಟಲೆ ಇದೆ. ಅಜ್ಜಯ್ಯನ ಬಗ್ಗೆ ಈ ಡಿ.ಕೆ.ಶಿವಕುಮಾರ್ ಗೆ ಭಕ್ತಿ ಗೌರವ ಇದ್ದರೆ ಪ್ರಮಾಣ ಮಾಡಲಿ. ಅಜ್ಜಯ್ಯನ ಬಗ್ಗೆ ನನಗೆ ಗೌರವ, ಭಕ್ತಿ ಎರಡೂ ಇದೆ. ನಾನು ಪ್ರಾಮಾಣಿಕವಾಗಿ ಬೆಳೆದು ಬಂದಿದೇನೆ ಎಂದು ಅವರ ಮೇಲೆ ಪ್ರಮಾಣ ಮಾಡಿ. ನಾನೂ ಪ್ರಮಾಣ ಮಾಡುತ್ತೇನೆ ಎಂದು ಹೆಚ್ಡಿಕೆ ಡಿಸಿಎಂ ಡಿಕೆಶಿಗೆ ನೇರ ಸವಾಲು ಹಾಕಿದರು.

ಈ ಡಿಕೆಶಿಗೆ ಅಜ್ಜಯ್ಯನ ಶಾಪವೂ ಆರಂಭವಾಗಿದೆ. ಎಷ್ಟು ಮನೆಗಳನ್ನು ಒಡೆದು ನೀವು ಬೆಳೆಡಿದ್ದೀರಿ ಎಂದು ನನಗೆ ಗೊತ್ತಿದೆ. ನಾನು ಏನೂ ಮಾಡಿಯೇ ಇಲ್ಲ, ಸ್ವಚ್ಚವಾಗಿದ್ದೇನೆ ಎಂದು ಅಜ್ಜಯನ ಮುಂದೆ ನಿಂತು ಪ್ರಮಾಣ ಮಾಡಲಿ ಎಂದು ಹೇಳಿದರು ಕುಮಾರಸ್ವಾಮಿ ಅವರು.

ನಾನು ಯಾರಿಗೂ ದ್ರೋಹ ಮಾಡಲಿಲ್ಲ. ಮಾಡುವುದೂ ಇಲ್ಲ. ಜನರ ಆಶೀರ್ವಾದವೇ ನನ್ನ ಬಲ, ಅದೇ ನನ್ನ ಬೆಳೆಸಿದೆ. ನಾನು ಯಡಿಯೂರಪ್ಪ ಅವರಿಗೂ ದ್ರೋಹ ಮಾಡಲಿಲ್ಲ. ಆ ಸಂದರ್ಭದಲ್ಲಿ ಅನಿವಾರ್ಯ ಕಾರಣಗಳಿಂದ ಅಧಿಕಾರ ಹಂಚಿಕೆ ಆಗಲಿಲ್ಲ. ನಾನು ಯಡಿಯೂರಪ್ಪ ಅವರಿಗೆ ಯಾವತ್ತೂ ದ್ರೋಹ ಮಾಡಿಲ್ಲ. ಬಿಜೆಪಿ‌-ಜೆಡಿಎಸ್ ಮೈತ್ರಿ ಕಾಂಗ್ರೆಸ್ ನಿದ್ದೆಗೆಡಿಸಿದೆ. ಅದಕೆ ಶಿವಕುಮಾರ್ ನಮ್ಮ ಮೈತ್ರಿ ಬಗ್ಗೆ ಹೊಟ್ಟೆ ಉರಿ ಅನುಭವಿಸುತ್ತಿದ್ದಾರೆ ಎಂದು ಸಚಿವರು ಆಕ್ರೋಶ ವ್ಯಕ್ತಪಡಿಸಿದರು.

ನನಗೆ ಮತ್ತೆ ಅಧಿಕಾರಕ್ಕೆ ಬರುವ ಆಸೆ ಇಲ್ಲ. ಈಗಾಗಲೇ ನಾನು ಎರಡು ಸಲ ಸಿಎಂ ಆಗಿದ್ದೇನೆ. ಆದರೆ ರಾಜ್ಯಕ್ಕೆ ಒಳ್ಳೇಯದಾಗಬೇಕು. ನಾನು ಅಧಿಕಾರ ಕೇಳಿ ನಿಮ್ಮ ಬಳಿ ಬಂದಿರಲಿಲ್ಲ. ನೀವೇ ಗೋಗರೆದು ಸಿಎಂ ಮಾಡಿದಿರಿ ಶಿವಕುಮಾರ್. ನೀವು ಮರೆತು ಹೋಗಿದ್ದೀರಿ, ಒಮ್ಮೆ ನೆನಪುವಾಡಿಕೊಳ್ಳಿ ಎಂದು ಕುಮಾರಸ್ವಾಮಿ ಅವರು ಡಿಕೆಶಿಗೆ ಟಾಂಗ್ ಕೊಟ್ಟರು.

ಡಾ.ಮಂಜುನಾಥ್ ಅವರು ಡಾಕ್ಟರ್ ಕೆಲಸ ಮಾತ್ರ ಮಾಡ್ತಿಲ್ಲ. ಅವರಲ್ಲೂ ರಾಜಕೀಯದ ರಕ್ತ ಹರಿಯುತ್ತಿದೆ. ಅವರ ಬಗ್ಗೆಯೂ ಶಿವಕುಮಾರ್ ಮಾತಾಡಿದ್ದಾರೆ. ಅವರ ಹತಾಶೆ, ನಿರಾಶೆ ನನಗೆ ಅರ್ಥ ಆಗುತ್ತದೆ ಎಂದು ಕುಮಾರಸ್ವಾಮಿ ಅವರು ತಿರುಗೇಟು ಕೊಟ್ಟರು.

ರಾಜಕೀಯ ನಿವೃತ್ತಿಯ ಸವಾಲು

ದಲಿತರಿಗೆ ಸೇರಬೇಕಾದ 68 ಎಕರೆ ಜಮೀನು ಡಿಸಿಎಂ ಲಪಟಾಯಿಸಿದ್ದಾರೆ. ದಲಿತರಿಗೆ ಸಿಗಬೇಕಾದ ನಿವೇಶನಗಳನ್ನು ಡಿಕೆ ಶಿವಕುಮಾರ್ ಹೊಡೆದುಕೊಂಡಿದ್ದಾರೆ. ಅಸಲಿ ಸೊಸೈಟಿಯನ್ನು ನಕಲಿ ಮಾಡಿ ದಲಿತರ ಭೂಮಿ ಲಪಟಾಯಿಸಿದ್ದಾರೆ. ಇವರ ಬಳಿ ‌ನಾನು ಹೇಳಿಸಿಕೊಳ್ಳುವ ಅಗತ್ಯ ಇಲ್ಲ ಎಂದು ಡಿಕೆಶಿಗೆ ಚಳಿ ಬಿಡಿಸಿದರು ಕೇಂದ್ರ ಸಚಿವ ಕುಮಾರಸ್ವಾಮಿ ಅವರು.

ನಾನು ಸಿನಿಮಾ ವಿತರಕನಾಗಿದ್ದಾಗ ಭೂಮಿ‌ ಖರೀದಿಸಿದೆ. ಕೇತಗಾನಹಳ್ಳಿಯಲ್ಲಿ ನಾನು ಚಲನಚಿತ್ರ ಪ್ರದರ್ಶಕನಾಗಿದ್ದಾಗ ಚುನಾವಣೆಗೆ ನಿಲ್ಲುವ 15 ವರ್ಷಗಳ ಹಿಂದೆ 45 ಎಕರೆ ಜಮೀನು ತಗೊಂಡಿದ್ದೇನೆ. ಇದನ್ನು ನಾನು ಎಲ್ಲೂ ಮುಚ್ಚಿಟ್ಟಿಲ್ಲ. ಯಾರಿಗೂ ಮೋಸ ಮಾಡಲಿಲ್ಲ ನಾನು. ನಾನು ವಂಚನೆ ಮಾಡಿ ಭೂಮಿ ಖರೀದಿಸಿದ್ದಿದ್ರೆ ರಾಜಕೀಯ ನಿವೃತ್ತಿ ಹೊಂದುತ್ತೇನೆ ಎಂದು ಕೇಂದ್ರ ಸಚಿವರು ಸವಾಲು ಹಾಕಿದರು.

ಡಿಕೆಶಿ ಪ್ರಶ್ನೆಗಳಿಗೆ ಉತ್ತರಿಸುತ್ತೇನೆ; ಏಕವಚನ ನನಗೂ ಬರುತ್ತದೆ

ಡಿಸಿಎಂ ಡಿಕೆ ಶಿವಕುಮಾರ್ ಅವರು ಏ‌ನು ಪ್ರಶ್ನೆಗಳನ್ನು ಹಾಕಿದಾರೋ ಅದಕ್ಕೆ ಉತ್ತರ ಕೊಡಲು ಇಲ್ಲಿದ್ದೇನೆ. ನನ್ನ ಬಗ್ಗೆ, ವಿಜಯೇಂದ್ರ ಬಗ್ಗೆ ಡಿಸಿಎಂ ಏಕವಚನದಲ್ಲಿ ಮಾತಾಡಿದ್ದಾರೆ. ನಾವೂ ಹಳ್ಳಿಯ ಮಕ್ಕಳೇ ,ನಿಮಗಿಂತಲೂ  ಇದ್ದರು.

Tags:    

Similar News