ನಿರೀಕ್ಷಣಾ ಜಾಮೀನು ವಾಪಾಸ್ ಪಡೆದ ಎಚ್ ಡಿ ರೇವಣ್ಣ
ಶಾಸಕ ಎಚ್ ಡಿ ರೇವಣ್ಣ ಅವರು ಶುಕ್ರವಾರ (ಮೇ 3) ತಮ್ಮ ಅರ್ಜಿ ವಾಪಾಸ್ ಪಡೆದಿದ್ದಾರೆ.;
By : The Federal
Update: 2024-05-03 09:37 GMT
ಬೆಂಗಳೂರು: ಶಾಸಕ ಎಚ್ ಡಿ ರೇವಣ್ಣ ಅವರು ಶುಕ್ರವಾರ ( ಮೇ 3) ತಮ್ಮ ಅರ್ಜಿ ವಾಪಾಸ್ ಪಡೆದಿದ್ದಾರೆ.
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನು ಕೋರಿ ಗುರುವಾರ (ಮೇ 2) ಅರ್ಜಿ ಸಲ್ಲಿಸಿದ್ದರು. ಶುಕ್ರವಾರ ಈ ಬಗ್ಗೆ ವಿಚಾರಣೆ ನಡೆದು, ರೇವಣ್ಣ ಪರ ವಾದ ಮಂಡಿಸಿದ ವಕೀಲರು, ಬಲವಂತದ ಕ್ರಮ ಕೈಗೊಳ್ಳದಂತೆ ಮನವಿ ಮಾಡಿದರು.
ಎಸ್ಐಟಿ ಪರವಾಗಿ ವಾದ ಮಂಡಿಸಿದ ಎಸ್ಪಿಪಿ ಜಗದೀಶ್, ರೇವಣ್ಣ ಪ್ರಕರಣದಲ್ಲಿ ಸೆಕ್ಷನ್ 376 ಸೇರ್ಪಡೆ ಮಾಡಿಲ್ಲ. 376 ಅಲ್ಲದೆ ಬೇರೆ ಯಾವುದು ಜಾಮೀನು ಸಿಗದ ಸೆಕ್ಷನ್ ಹಾಕಲ್ಲ ಎಂದು ತಿಳಿಸಿದರು.
ಈ ಹಿನ್ನೆಲೆಯಲ್ಲಿ ರೇವಣ್ಣ ಪರ ವಕೀಲರು ನಿರೀಕ್ಷಣಾ ಜಾಮೀನು ಅರ್ಜಿ ವಾಪಸ್ ಪಡೆದರು.