Health Alert | ಬೆಂಗಳೂರು ತರಕಾರಿಗಳಲ್ಲಿ ವಿಷಕಾರಿ ಅಂಶ: ಅಧ್ಯಯನಕ್ಕೆ ಸಮಿತಿ

10 ತರಕಾರಿಗಳ 400 ಮಾದರಿಗಳನ್ನು ಸಂಗ್ರಹಿಸಿ ಅಧ್ಯಯನ ಮಾಡಿದ್ದು ಅದರಲ್ಲಿ ಕಬ್ಬಿಣ, ಕ್ಯಾಡ್ಮಿಯಮ್, ಸೀಸ ಮತ್ತು ನಿಕಲ್ ಅಂಶಗಳು ಆಹಾರ ಮತ್ತು ಕೃಷಿ ಸಂಸ್ಥೆಯು ಸೂಚಿಸಿದ ಮಿತಿಗಳಿಗಿಂತ ಹೆಚ್ಚಾಗಿರುವುದು ಕಂಡು ಬಂದಿದೆ

Update: 2024-10-24 11:34 GMT
ತರಕಾರಿ
Click the Play button to listen to article

ಬೆಂಗಳೂರಿನಲ್ಲಿ ಮಾರಾಟವಾಗುತ್ತಿರುವ ತರಕಾರಿಯಲ್ಲಿ ವಿಷಕಾರಿ ಲೋಹದ ಅಂಶಗಳು ಪತ್ತೆಯಾಗಿವೆ. ಈ ಬಗ್ಗೆ ಹೆಚ್ಚಿನ ಅಧ್ಯಯನ ಮಾಡಲು ಉನ್ನತ ಮಟ್ಟದ ಸಮಿತಿಯನ್ನು ರಚಿಸುವಂತೆ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (ಸಿಪಿಸಿಬಿ) ಪ್ರಸ್ತಾಪಿಸಿದೆ.

ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ ದಕ್ಷಿಣ ಪೀಠದ ಪರಿಸರ ನಿರ್ವಹಣಾ ನೀತಿ ಸಂಶೋಧನಾ ಸಂಸ್ಥೆ (ಇಎಂಪಿಆರ್‌ಐ) ನಡೆಸಿದ ಅಧ್ಯಯನದಲ್ಲಿ ತರಕಾರಿಗಳಲ್ಲಿ ವಿಷಕಾರಿ ಲೋಹದ ಅಂಶಗಳು ಪತ್ತೆಯಾಗಿದ್ದವು. 10 ತರಕಾರಿಗಳ 400 ಮಾದರಿಗಳನ್ನು ಸಂಗ್ರಹಿಸಿ ಅಧ್ಯಯನ ಮಾಡಿದ್ದು ಇದರಲ್ಲಿ ಕಬ್ಬಿಣ, ಕ್ಯಾಡ್ಮಿಯಮ್, ಸೀಸ ಮತ್ತು ನಿಕಲ್ ಅಂಶಗಳು ಆಹಾರ ಮತ್ತು ಕೃಷಿ ಸಂಸ್ಥೆಯು ಸೂಚಿಸಿದ ಮಿತಿಗಳಿಗಿಂತ ಹೆಚ್ಚಾಗಿರುವುದು ಕಂಡು ಬಂದಿತ್ತು.

ತರಕಾರಿಗಳಲ್ಲಿ ಭಾರಿ ಲೋಹದ ಅಂಶಗಳು ಮತ್ತು ಕೀಟನಾಶಕಗಳಿಗೆ ಸಂಬಂಧಪಟ್ಟಂತೆ ಹೆಚ್ಚಿನ ವಿವರಗಳನ್ನು ಖಚಿತಪಡಿಸಿಕೊಳ್ಳಲು ಸಮಗ್ರ ಅಧ್ಯಯನ ಮಾಡುವ ಅಗತ್ಯವಿದೆ ಎಂದು ಸಿಪಿಸಿಬಿ ಐದು ಸದಸ್ಯರ ಸಮಿತಿ ಪ್ರಸ್ತಾಪಿಸಿದೆ.

ಸಿಪಿಸಿಬಿ ಲ್ಯಾಬ್‌ಗಳು ಎಫ್‌ಎಸ್‌ಎಸ್‌ಎಐನಿಂದ ಮಾನ್ಯತೆ ಪಡೆಯದ ಕಾರಣ, ಸಮಿತಿಯು ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟಗಳ ಸಂಘ (ಎಫ್‌ಎಸ್‌ಎಸ್‌ಎಐ) ಮತ್ತು ಭೋಪಾಲ್‌ನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೋಲ್ ಸೈನ್ಸ್‌ನ ಸದಸ್ಯರನ್ನು ಒಳಗೊಂಡಿರಬೇಕು ಮತ್ತು ಬೆಂಗಳೂರಿನ ಸಿಪಿಸಿಬಿ ಪ್ರಾದೇಶಿಕ ನಿರ್ದೇಶಕರನ್ನು ಒಳಗೊಂಡಿರಬೇಕು ಎಂದು ಹೇಳಿದೆ. 

ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (ಸಿಪಿಸಿಬಿ)ಯ ಪ್ರಯೋಗಾಲಯಗಳು ಎಫ್‌ಎಸ್‌ಎಸ್‌ಎಐನಿಂದ ಮಾನ್ಯತೆ ಪಡೆಯದ ಕಾರಣ, ಸಮಿತಿಯು ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟಗಳ ಸಂಘ (ಎಫ್‌ಎಸ್‌ಎಸ್‌ಎಐ) ಮತ್ತು ಭೋಪಾಲ್‌ನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೋಲ್ ಸೈನ್ಸ್‌ನ ಸದಸ್ಯರನ್ನು ಒಳಗೊಂಡಿರಬೇಕು ಬೆಂಗಳೂರಿನ ಸಿಪಿಸಿಬಿ ಪ್ರಾದೇಶಿಕ ನಿರ್ದೇಶಕರು, ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಮತ್ತು ಬೆಂಗಳೂರು ಕೃಷಿ ವಿಜ್ಞಾನ ವಿಶ್ವವಿದ್ಯಾಲಯದಿಂದ ಒಬ್ಬರು ಸದಸ್ಯರು ಸಮಿತಿಯಲ್ಲಿ ಇರಬೇಕು ಎಂದು ಶಿಫಾರಸ್ಸು ಮಾಡಿದೆ.

Tags:    

Similar News