BSY POCSO Case | ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅರ್ಜಿ ವಿಚಾರಣೆ ಮುಂದೂಡಿಕೆ
ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದುಪಡಿಸುವಂತೆ ಕೋರಿ ಯಡಿಯೂರಪ್ಪ ಸಲ್ಲಿಸಿರುವ ರಿಟ್ ಅರ್ಜಿ ವಿಚಾರಣೆ ಡಿ.12ರ ಮಧ್ಯಾಹ್ನ 3.30ಕ್ಕೆ ಮುಂದೂಡಲಾಗಿದೆ.;
ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣ ರದ್ದುಪಡಿಸುವಂತೆ ಕೋರಿ ಯಡಿಯೂರಪ್ಪ ಸಲ್ಲಿಸಿರುವ ರಿಟ್ ಅರ್ಜಿ ವಿಚಾರಣೆಯನ್ನು ಡಿ.12ರ ಮಧ್ಯಾಹ್ನ 3.30ಕ್ಕೆ ಮುಂದೂಡಲಾಗಿದೆ.
ಪೋಕ್ಸೋ ಪ್ರಕರಣದ ಆರೋಪ ಎದುರಿಸುತ್ತಿರುವ ಬಿ.ಎಸ್ ಯಡಿಯೂರಪ್ಪ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದುಪಡಿಸುವಂತೆ ಕೋರಿ ಯಡಿಯೂರಪ್ಪ ಸಲ್ಲಿಸಿರುವ ರಿಟ್ ಅರ್ಜಿಯನ್ನು, ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ'ಯ ವಿಶೇಷ ನ್ಯಾಯಪೀಠದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಮಂಗಳವಾರ ವಿಚಾರಣೆ ನಡೆಸಿದರು.
ಪೋಕ್ಸೋ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕ ಬಿ.ಎಸ್.ಯಡಿಯೂರಪ್ಪ ವಿರುದ್ಧದ ಪ್ರಕರಣದಲ್ಲಿ ವಿಚಾರಣಾ ಮ್ಯಾಜಿಸ್ಟ್ರೇಟ್ ಮುಂದೆ ಸಂತ್ರಸ್ತೆ ಹಾಗೂ ಫಿರ್ಯಾದುದಾರರು ನೀಡಲಾದ ಹೇಳಿಕೆಯನ್ನು ಲಗತ್ತಿಸಿಲ್ಲ ಮತ್ತು ವೈದ್ಯಕೀಯ ವರದಿಯನ್ನು ಸಲ್ಲಿಸಿಲ್ಲ. ಇದು ಕುರುಡನೊಬ್ಬ ಕತ್ತಲೆಯಲ್ಲಿ ಕಪ್ಪು ಬೆಕ್ಕು ಹುಡುಕಿದಂತಾಗಿದೆ' ಎಂದು ಯಡಿಯೂರಪ್ಪ ಪರ ಹಿರಿಯ ವಕೀಲರು ಹೈಕೋರ್ಟ್‌ಗೆ ಹೇಳಿದ್ದರು.
ವಾದ-ಪ್ರತಿವಾದ ಆಲಿಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ದಿನದ ಕಲಾಪ ಅಂತ್ಯವಾಗುತ್ತಿದ್ದ ಕಾರಣಕ್ಕೆ, 'ಬೇರೆ ಪ್ರಕರಣಗಳಿಗೆ ಅನುವು ಮಾಡಿಕೊಡುವ ಉದ್ದೇಶದಿಂದ ಈ ಪ್ರಕರಣದ ವಿಚಾರಣೆಯನ್ನು ಇದೇ 12ರ ಮಧ್ಯಾಹ್ನ 3.30ಕ್ಕೆ ಮುಂದೂಡಿದರು.
ಏನಿದು ಪ್ರಕರಣ?
ಫೆಬ್ರವರಿ 2 ರಂದು ಯಡಿಯೂರಪ್ಪ ಅವರು ತಮ್ಮ ಬೆಂಗಳೂರು ನಿವಾಸದಲ್ಲಿ ತನ್ನ ಅಪ್ರಾಪ್ತ ವಯಸ್ಸಿನ ಮಗಳನ್ನು ತಮ್ಮ ಖಾಸಗಿ ಕೋಣೆಗೆ ಕರೆದೊಯ್ದು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ 17 ವರ್ಷದ ಯುವತಿಯ ತಾಯಿ ಆರೋಪ ಮಾಡಿದ್ದರು. ಘಟನೆ ನಂತರ ಯಡಿಯೂರಪ್ಪ ವಿರುದ್ಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ಸಹ ದಾಖಲಾಗಿತ್ತು. ಈ ಪ್ರಕರಣವನ್ನು ಸರ್ಕಾರ ಸಿಐಡಿಗೆ ವಹಿಸಿತ್ತು. ಈ ಪ್ರಕರಣ ರದ್ದುಪಡಿಸುವಂತೆ ಕೋರಿ ಯಡಿಯೂರಪ್ಪ ರಾಜ್ಯ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ.