ದರ್ಶನ್‌ ಜಾಮೀನು ರದ್ದು ಅರ್ಜಿ ವಿಚಾರಣೆ: ಗುರುವಾರಕ್ಕೆ ಮುಂದೂಡಿಕೆ

ದರ್ಶನ್ ಅವರ ಜಾಮೀನು ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್​ ಗುರುವಾರಕ್ಕೆ ಮುಂದೂಡಿಕೆ ಮಾಡಿದೆ.;

Update: 2025-07-22 11:06 GMT

ನಟ ದರ್ಶನ್‌

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಜಾಮೀನು ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್​ ಗುರುವಾರಕ್ಕೆ ಮುಂದೂಡಿಕೆ ಮಾಡಿದೆ. 

ವಕೀಲ ಕಪಿಲ್ ಸಿಬಲ್ ಬದಲಿಗೆ ಸಿದ್ದಾರ್ಥ್ ದವೆ ವಾದ ಮಂಡಿಸಲು ಕೋರ್ಟ್​ಗೆ ಹಾಜರಿದ್ದರು. ವಿಚಾರಣೆ ಆರಂಭವಾಗುತ್ತಿದ್ದಂತೆಯೇ, ಸಿದ್ದಾರ್ಥ್ ದವೆ ಅವರು ವಾದ ಮಾಡಲು ಕಾಲಾವಕಾಶ ಕೇಳಿದ್ದಾರೆ. ಹೀಗಾಗಿ ಗುರುವಾರದವರೆಗೆ ಕೋರ್ಟ್​​, ಸಮಯ ನೀಡಿದೆ. ಈಗಾಗಲೇ ಸರ್ಕಾರಿ ಪರ ವಕೀಲರ ವಾದ ಮುಗಿದಿದ್ದು, ದರ್ಶನ್ ಪರ ಖ್ಯಾತ ವಕೀಲ ಕಪಿಲ್ ಸಿಬಲ್ ವಾದ ಮಂಡಿಸಬೇಕಿತ್ತು.

ಸುಪ್ರೀಂ ಕೋರ್ಟ್​ನಲ್ಲಿ ಕಳೆದ ವಾರ ನಡೆದ ವಿಚಾರಣೆ ವೇಳೆ, ಹೈಕೋರ್ಟ್‌ ತೀರ್ಪಿನ ಬಗ್ಗೆ ಬೇಸರ ವ್ಯಕ್ತಪಡಿಸಿತ್ತು. ನಮಗೆ ಪೊಲೀಸರು ನೀಡಿರುವ ಸಾಕ್ಷ್ಯಗಳು ತೃಪ್ತಿ ತಂದಿವೆ. ಆದರೆ ಜಾಮೀನು​ ನೀಡಲು ಹೈಕೋರ್ಟ್ ನೀಡಿರುವ ಕಾರಣಗಳು ಸಮಂಜಸವಾಗಿಲ್ಲ. ಹೈಕೋರ್ಟ್ ಆದೇಶದಲ್ಲಿ ಚಡಪಡಿಕೆ ಎದ್ದು ಕಾಣುತ್ತಿದೆ. ಬೇಲ್​ ನೀಡಲು ಯಾವುದಾದರೂ ಒಂದು ಅಂಶ ಸಿಗಲಿ ಎನ್ನುವ ಚಡಪಡಿಕೆ ಕಾಣುತ್ತಿದೆ. ಈ ವಿಷಯದಲ್ಲಿ ಹೈಕೋರ್ಟ್ ತನ್ನ ವಿವೇಚನೆ ಸೂಕ್ತವಾಗಿ ಬಳಸಿಲ್ಲ. ಆದ್ದರಿಂದ ನಟ ದರ್ಶನ್​ ಅವರ ​ ಜಾಮೀನಿನ ವಿಷಯದಲ್ಲಿ ನಾವೇಕೆ ಮಧ್ಯಪ್ರವೇಶ ಮಾಡಬಾರದೆಂದು ಎಂದು ಸುಪ್ರೀಂ ಕೋರ್ಟ್ ಹೇಳಿತ್ತು. 

ದರ್ಶನ್ ಮತ್ತು ಇತರ ಆರೋಪಿಗಳಿಗೆ ಯಾವುದೇ ಗಂಭೀರ ಅಪರಾಧ ಇತಿಹಾಸವಿಲ್ಲ ಎಂಬ ಅಂಶವನ್ನೂ ನ್ಯಾಯಮೂರ್ತಿಗಳು ಜಾಮೀನು ನೀಡಲು ಪರಿಗಣಿಸಿದ್ದರು. ಜಾಮೀನು ಪಡೆದಿರುವ ಆರೋಪಿಗಳು ತಲಾ 1 ಲಕ್ಷ ರೂಪಾಯಿ ವೈಯಕ್ತಿಕ ಬಾಂಡ್ ಮತ್ತು ಇಬ್ಬರು ಶ್ಯೂರಿಟಿಗಳನ್ನು ನೀಡಿ ಜಾಮೀನು ಕೊಟ್ಟಿತ್ತು. 

Tags:    

Similar News