ರಾಜ್ಯದಲ್ಲಿ ಐದು ದಿನ ಭಾರೀ ಮಳೆ; ಕೆಲ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಕೊಡಗು ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ, ಪದವಿಪೂರ್ವ ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ವೆಂಕಟೇಶ್ ರಾಜಾ ಆದೇಶ ಹೊರಡಿಸಿದ್ದಾರೆ.;

Update: 2025-07-18 04:59 GMT
ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ. 

ಬಂಗಾಳಕೊಲ್ಲಿ ಹಾಗೂ ಅರಬ್ಬಿ ಸಮುದ್ರ ಭಾಗದಲ್ಲಿ ವಾಯುಭಾರ ಕುಸಿತ ಪರಿಣಾಮ ರಾಜ್ಯದಲ್ಲಿ 5 ದಿನ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಕರಾವಳಿ, ಒಳನಾಡು ಸೇರಿ 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಶುಕ್ರವಾರ ಮತ್ತು ಶನಿವಾರ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯದ ವಿವಿಧ ಜಿಲ್ಲೆಗಳ ಶಾಲಾ-ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ.

ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ

ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದ್ದು, ಭೂಕುಸಿತದ ಎಚ್ಚರಿಕೆಯನ್ನು ನೀಡಲಾಗಿದೆ. ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಮಳೆಯೊಂದಿಗೆ ಗಂಟೆಗೆ 30-40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಮೀನುಗಾರರು ಸಮುದ್ರಕ್ಕೆ ಇಳಿಯುವ ಕುರಿತು ಎಚ್ಚರದಿಂದಿರಬೇಕು ಎಂದು ಎಚ್ಚರಿಕೆ ನೀಡಿದೆ. 

ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆ ಕೊಡಗು ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ, ಪದವಿಪೂರ್ವ ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ವೆಂಕಟೇಶ್ ರಾಜಾ ಆದೇಶ ಹೊರಡಿಸಿದ್ದಾರೆ.

ಉತ್ತರ ಕನ್ನಡದಲ್ಲೂ ಭಾರೀ ಮಳೆ

ಉತ್ತರ ಕನ್ನಡದ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ ಹಾಗೂ ಭಟ್ಕಳ ತಾಲೂಕಿನಲ್ಲಿ ಭಾರೀ ಮಳೆಯಾಗುತ್ತಿದ್ದು, ಶುಕ್ರವಾರ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. 

Tags:    

Similar News