ಮುಂದಿನ 24 ಗಂಟೆ ಬೆಂಗಳೂರು ಸೇರಿ ರಾಜ್ಯದ ಹಲವು ಕಡೆ ಭಾರಿ ಮಳೆ
ಆಗಸ್ಟ್ ಮತ್ತು ಸೆಪ್ಟೆಂಬರ್‌ನಲ್ಲಿ ದೇಶದಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಒಂದು ವೇಳೆ ನಿರೀಕ್ಷೆಗೂ ಮೀರಿ ಮಳೆ ಬಂದರೆ ಅವಾಂತರಗಳೂ ಸಂಭವಿಸುವ ಸಾಧ್ಯತೆಗಳಿವೆ.
ರಾಜ್ಯದಲ್ಲಿ ಮುಂದಿನ 24 ಗಂಟೆ ಬೆಂಗಳೂರು ಸೇರಿದಂತೆ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಬಗ್ಗೆ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಲಾಗಿದೆ.
ಅದರಲ್ಲೂ ಮಲೆನಾಡು & ಕರಾವಳಿ ಪ್ರದೇಶ ಸೇರಿದಂತೆ ಬೆಂಗಳೂರಿನಲ್ಲೂ ಮಳೆ ಆರ್ಭಟ ಮುಂದುವರೆಯಲಿದೆ. ಬೆಂಗಳೂರಿನಲ್ಲಿ ಸಂಜೆ ಸಮಯದಲ್ಲಿ ಭಾರಿ ಮಳೆ ಬೀಳುವ ಮುನ್ನೆಚ್ಚರಿಕೆ ನೀಡಲಾಗಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಮಳೆಯ ಮುನ್ನೆಚ್ಚರಿಕೆ ನೀಡಲಾಗಿದೆ. ಇನ್ನುಳಿದಂತೆ ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕೊಡಗು, ಹಾಸನ ಜಿಲ್ಲೆಗಳಲ್ಲಿ ಇಂದು ಕೂಡ ಮಳೆ ಆರ್ಭಟಿಸಲಿದೆ. ಬೆಳಗಾವಿಯ ಹಲವು ಕಡೆ ಮಳೆರಾಯನ ಅಬ್ಬರ ಇರಲಿದೆ. ಅದರಲ್ಲೂ ಬೆಂಗಳೂರಿನಲ್ಲಿ ಸಂಜೆ ನಂತರ ಭಾರಿ ಮಳೆ ಎಚ್ಚರಿಕೆ ನೀಡಲಾಗಿದ್ದು, ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ.
ಆಗಸ್ಟ್ ಮತ್ತು ಸೆಪ್ಟೆಂಬರ್‌ನಲ್ಲಿ ದೇಶದಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಒಂದು ವೇಳೆ ನಿರೀಕ್ಷೆಗೂ ಮೀರಿ ಮಳೆ ಬಂದರೆ ಅವಾಂತರಗಳೂ ಸಂಭವಿಸುವ ಸಾಧ್ಯತೆಗಳಿವೆ. ಹೀಗಾಗಿ ಜನರು ಎಚ್ಚರಿಕೆಯಿಂದ ಇರುವಂತೆ ಹವಾಮಾನ ಇಲಾಖೆ ಮುನ್ಸೂಚನೆ ತಿಳಿಸಿದೆ.