Heavy Rain| ರಾಜ್ಯದಲ್ಲಿ ಇನ್ನೂ ಮೂರು ದಿನ ಭಾರೀ ಮಳೆ

ಬೆಂಗಳೂರು ನಗರದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಶನಿವಾರ ಮೋಡಕವಿದ ವಾತಾವರಣ ಇರಲಿದ್ದು, ಸಂಜೆ ವೇಳೆಗೆ ಮಳೆ ಸುರಿಯಲಿದೆ ಎಂದು ಮುನ್ಸೂಚನೆ ನೀಡಿದೆ.;

Update: 2025-05-31 05:19 GMT

ಮಂಗಳೂರು ಮಳೆ

ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ಜೋರಾಗಿದ್ದು, ಇನ್ನು ಮೂರು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. 

6 ಜಿಲ್ಲೆಗಳಿಗೆ ರೆಡ್ ಅಲರ್ಟ್​

ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು ಸೇರಿ 6 ಜಿಲ್ಲೆಗಳಿಗೆ ರೆಡ್‌ ಅಲರ್ಟ್ ಘೋಷಣೆ ಮಾಡಲಾಗಿದೆ. ಇನ್ನು ಬಾಗಲಕೋಟೆ, ಯಾದಗಿರಿ, ಹಾವೇರಿ, ಗದಗ, ಹಾಸನದಲ್ಲಿ ಯಲ್ಲೋ ಅಲರ್ಟ್ ಇದ್ದರೆ, ಬೆಳಗಾವಿ, ಕಲಬುರಗಿ, ವಿಜಯಪುರ, ಬೀದ‌ರ್​ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಮುಂದುವರಿದಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಉಲ್ಲಾಳ ಬಳಿ ಶುಕ್ರವಾರ ಸಂಭವಿಸಿದ ಭೂಕುಸಿತದಿಂದಾಗಿ ಒಂದೇ ದಿನ ನಾಲ್ವರು ಮೃತಪಟ್ಟಿದ್ದಾರೆ. ಗುಡ್ಡ ಕುಸಿದ ಸಾಧ್ಯತೆ ಹೆಚ್ಚಿರುವ ಹಿನ್ನೆಲೆ ಜನರು ಎಚ್ಚರವಾಗಿರಬೇಕೆಂದು ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ-ಕಾಲೇಜಿಗೆ ರಜೆ

ಗುಡುಗು, ಮಿಂಚು ಮತ್ತು ಜೋರಾದ ಗಾಳಿಯೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಜಿಲ್ಲಾಡಳಿತವು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದು, ತಗ್ಗು ಪ್ರದೇಶಗಳಲ್ಲಿ ವಾಸಿಸುವವರಿಗೆ ಎಚ್ಚರಿಕೆ ನೀಡಲಾಗಿದೆ. ಶಾಲೆ-ಕಾಲೇಜು ಮತ್ತು ಅಂಗನವಾಡಿಗಳಿಗೆ ರಜೆ ಘೋಷಿಸಲಾಗಿದೆ ಎಂದು ಸ್ಥಳೀಯ ಆಡಳಿತ ತಿಳಿಸಿದೆ.

ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್ ನೀಡಿದೆ. ಈ ಪ್ರದೇಶಗಳಲ್ಲಿ ಗುಡುಗು ಮತ್ತು ಜೋರಾದ ಗಾಳಿಯೊಂದಿಗೆ ಮಳೆ ಮುಂದುವರಿಯಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.

ಬೆಂಗಳೂರಿನಲ್ಲಿ ಮಳೆ ಸಾಧ್ಯತೆ 

ಬೆಂಗಳೂರು ನಗರದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಶನಿವಾರ  ಮೋಡಕವಿದ ವಾತಾವರಣ ಇರಲಿದ್ದು, ಸಂಜೆ ವೇಳೆಗೆ ಮಳೆ ಸುರಿಯಲಿದೆ ಎಂದು ಹೇಳಿದೆ.

ಭೂಕುಸಿತಕ್ಕೆ ಅವೈಜ್ಞಾನಿಕ ಕಾಮಗಾರಿಯೇ ಕಾರಣ 

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ ಭೂ ಕುಸಿದು ಒಂದೇ ಕುಟುಂಬದ ಮೂರು ಜನರು ಮೃತಪಟ್ಟಿದ್ದು,  ಈ ಈ ಘಟನೆಗೆ ಗುಡ್ಡದ ಮೇಲೆ ನಡೆಸಿರುವ ಅವೈಜ್ಞಾನಿಕ ರಸ್ತೆ ನಿರ್ಮಾಣ ಕಾಮಗಾರಿಯೇ ಕಾರಣವೆಂಬ ಆರೋಪ ಕೇಳಿಬಂದಿದ್ದು, ಈ ಕುರಿತಾಗಿ ಕೊಣಾಜೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ದೂರು ಸಹ ನೀಡಿರುವ ತೇಜು ಕುಮಾರ್ ಅವರು,​ ಮಂನಾಡಿ ಗ್ರಾಮ ಪಂಚಾಯಿತಿ ಪಿಡಿಓ ಚೈತ್ರಾ, ಕೆಆರ್​ಡಿಐಎಲ್ ಅಧಿಕಾರಿಗಳು ಮತ್ತು ಜಿಲ್ಲಾ ಪಂಚಾಯಿತಿ ಎಂಜಿನಿಯರ್​​​ಗಳು ಕಾರಣ ಎಂದು ಆರೋಪಿಸಿದ್ದಾರೆ.  ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್ 105 ಮತ್ತು 106 ಪ್ರಕಾರ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

Tags:    

Similar News