ರಾಜ್ಯದ 23 ಜಿಲ್ಲೆಗಳಲ್ಲಿ ಆ.​ 27ರವರೆಗೂ ಭಾರೀ ಮಳೆ

ಕರ್ನಾಟಕದಾದ್ಯಂತ ಆಗಸ್ಟ್ 27ರವರೆಗೂ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯಾಗಲಿದೆ.;

Update: 2024-08-21 07:06 GMT
ರಾಜ್ಯದ 23 ಜಿಲ್ಲೆಗಳಲ್ಲಿ ಆ.​ 27ರವರೆಗೂ ಭಾರೀ ಮಳೆ
ಕರ್ನಾಟಕದಾದ್ಯಂತ ಆಗಸ್ಟ್ 27ರವರೆಗೂ ಮಳೆ ಮುಂದುವರೆಯಲಿದೆ.

ರಾಜ್ಯಾದ್ಯಂತ ಆ.27ರವರೆಗೂ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ದಕ್ಷಿಣಕನ್ನಡ, ಉತ್ತರಕನ್ನಡ, ಉಡುಪಿ, ಬೆಳಗಾವಿ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ಮೈಸೂರು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬುಧವಾರ ವ್ಯಾಪಕವಾಗಿ ಸಾಧಾರಣ ಮಳೆಯಾಗಲಿದ್ದು, ಕರಾವಳಿ ಮತ್ತು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತೆ ಮಲೆನಾಡು ಜಿಲ್ಲೆಗಳಿಗೆ ಚದುರಿದಂತೆ ವ್ಯಾಪಕ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಒಳನಾಡು ಜಿಲ್ಲೆಗಳಿಗೆ ಆ.25 ರವರೆಗೆ ವ್ಯಾಪಕವಾಗಿ ಸಾಧಾರಣ ಮಳೆ, ನಂತರ ಮಳೆ ತೀವ್ರತೆ ಕಡಿಮೆಯಾಗುವ ಸಾಧ್ಯತೆಯಿದೆ ಹಾಗೂ ಆ.24 ರವರೆಗೆ ಅಲ್ಲಲ್ಲಿ ಭಾರಿ ಮಳೆ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗುತ್ತಿದೆ. ಇಂದು ಕೂಡ ಮೋಡ ಕವಿದ ವಾತಾವರಣವಿದೆ. ಇನ್ನು ವಿಜಯನಗರ, ತುಮಕೂರು, ರಾಮನಗರ, ಮಂಡ್ಯ, ಹಾಸನ, ಹಾವೇರಿ, ಧಾರವಾಡ, ಬೀದರ್‌ನಲ್ಲಿ ಸಾಧಾರಣ ಮಳೆಯಾಗಲಿದೆ.

Tags:    

Similar News