ಕರ್ನಾಟಕದಲ್ಲಿ ಭಾರಿ ಮಳೆ ಮುನ್ಸೂಚನೆ: ಗುರುವಾರ ದಿನವಿಡೀ ಮಳೆ ಸಾಧ್ಯತೆ

ಚಿತ್ರದುರ್ಗ, ಬಳ್ಳಾರಿ, ವಿಜಯನಗರ, ಬೀದರ್, ರಾಯಚೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಗುಲ್ಬರ್ಗಾ (ಕಲಬುರಗಿ) ಮತ್ತು ಯಾದಗಿರಿ ಜಿಲ್ಲೆಗಳಿಗೆ ಭಾರಿ ಮಳೆಯ ಅಲರ್ಟ್ ನೀಡಲಾಗಿದೆ.;

Update: 2025-05-15 05:29 GMT

ಬಿಸಿಲಿನ ಬೇಗೆಯಿಂದ ತತ್ತರಿಸಿದ್ದ ಕರ್ನಾಟಕದ ಜನತೆಗೆ ಮಳೆರಾಯ ತಂಪೆರೆದಿದ್ದಾನೆ. ಆದರೆ, ಕಳೆದ ಕೆಲವು ದಿನಗಳಿಂದ ಸುರಿದ ಭಾರೀ ಮಳೆಯಿಂದಾಗಿ ಬೆಂಗಳೂರು ಸೇರಿದಂತೆ ಹಲವೆಡೆ ಅವಾಂತರಗಳು ಸೃಷ್ಟಿಯಾಗಿವೆ. ಇದೀಗ ಹವಾಮಾನ ಇಲಾಖೆಯು ಮುಂದಿನ ಮೂರು ಗಂಟೆಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದೆ.

ಚಿತ್ರದುರ್ಗ, ಬಳ್ಳಾರಿ, ವಿಜಯನಗರ, ಬೀದರ್, ರಾಯಚೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಗುಲ್ಬರ್ಗಾ (ಕಲಬುರಗಿ) ಮತ್ತು ಯಾದಗಿರಿ ಜಿಲ್ಲೆಗಳಿಗೆ ಭಾರಿ ಮಳೆಯ ಅಲರ್ಟ್ ನೀಡಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಈ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.

ರಾಜ್ಯದ ಹವಾಮಾನದಲ್ಲಿ ಗಮನಾರ್ಹ ಬದಲಾವಣೆ ಕಂಡುಬಂದಿದ್ದು, ಕರಾವಳಿ ಕರ್ನಾಟಕವನ್ನು ಹೊರತುಪಡಿಸಿ ಉಳಿದೆಲ್ಲಾ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಉತ್ತರ ಕರ್ನಾಟಕದ ಇತರ ಭಾಗಗಳಲ್ಲೂ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಈ ಬಾರಿ ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ತೀವ್ರವಾಗಿದ್ದು, ವಾಡಿಕೆಗಿಂತ ಶೇ 38 ರಷ್ಟು ಹೆಚ್ಚು ಮಳೆಯಾಗಿದೆ. ಮೇ 1 ರಿಂದ ಮೇ 14 ರವರೆಗೆ ದಾಖಲಾದ ಮಾಹಿತಿಯ ಪ್ರಕಾರ, ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಗರಿಷ್ಠ ಪ್ರಮಾಣದ ಮಳೆ ಸುರಿದಿದೆ.

Tags:    

Similar News