ರಾಜ್ಯಾದ್ಯಂತ ಮೇ 6 ರಿಂದ ಭಾರಿ ಮಳೆ, 12 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್
ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿಕ್ಕಬಳ್ಳಾಪುರ, ಕೋಲಾರ, ಚಿಕ್ಕಮಗಳೂರು, ದಾವಣಗೆರೆ ಹಾಗೂ ವಿಜಯನಗರ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ.;
ರಾಜ್ಯಾದ್ಯಂತ ಮೇ 6 ರಿಂದ ಭಾರಿ ಮಳೆಯಾಗಲಿದ್ದು, ರಾಜಧಾನಿ ಬೆಂಗಳೂರು ಸೇರಿದಂತೆ 12 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ಭಾನುವಾರ(ಮೇ 4) ಕೂಡ ಚಿತ್ರದುರ್ಗ, ಚಿಕ್ಕಮಗಳೂರು, ಹಾಸನ ಹಾಗೂ ತುಮಕೂರಿನಲ್ಲಿ ಮಳೆಯಾಗಲಿದ್ದು ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿಕ್ಕಬಳ್ಳಾಪುರ, ಕೋಲಾರ, ಚಿಕ್ಕಮಗಳೂರು, ದಾವಣಗೆರೆ ಹಾಗೂ ವಿಜಯನಗರ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದ್ದು, ಮೇ 6 ರಿಂದ ಭಾರಿ ಮಳೆಯಾಗಲಿದೆ.
ವಿಜಯನಗರ, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ದಾವಣಗೆರೆ, ಬೀದರ್, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಭಾನುವಾರ(ಮೇ 4) ಸಾಧರಣ ಮಳೆಯಾಗಲಿದೆ.
ಮುಂಗಾರು ಆರಂಭಕ್ಕೂ ಮುನ್ನವೇ ರಾಜ್ಯಾದ್ಯಂತ ವ್ಯಾಪಕ ಮಳೆಯಾಗುತ್ತಿದ್ದು ಶಿವಮೊಗ್ಗ, ಚಿಕ್ಕಮಗಳೂರು, ತುಮಕೂರು ಸೇರಿದಂತೆ ರಾಜಧಾನಿ ಬೆಂಗಳೂರಿನಲ್ಲಿ ಇತ್ತೀಚೆಗೆ ಗುಡುಗು ಸಹಿತ ಮಳೆಯಾಗಿತ್ತು. ಬೆಂಗಳೂರಿನ ಕತ್ರಿಗುಪ್ಪೆಯ ಬಳಿ ಆಟೋ ಮೇಲೆ ಮರಬಿದ್ದು ಚಾಲಕ ಮೃತಪಟ್ಟ ಘಟನೆ ನಡೆದಿತ್ತು. ಸುರಿಯುವ ಮಳೆಯಲ್ಲಿ ವಾಹನ ಸವಾರರು ಹಾಗೂ ಸಾರ್ವಜನಿಕರು ಪರದಾಡುವಂತಾಗಿತ್ತು.
ಕಲಬುರಗಿಯಲ್ಲಿ 41.8 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ, ಎಚ್ಎಎಲ್ನಲ್ಲಿ 33.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಬೆಂಗಳೂರು ನಗರದಲ್ಲಿ 33.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 34.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಬೀದರ್ನಲ್ಲಿ41.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 41.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 38.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ.