ರಾಜ್ಯಾದ್ಯಂತ ಮತ್ತೆ ಮಳೆ!
ಇತ್ತೀಚೆಗಷ್ಟೇ ಚೆನ್ನೈಗೆ ಅಪ್ಪಳಿಸಿದ ಫೆಂಜಲ್ ಚಂಡಮಾರುತದಿಂದಾಗಿ ಬೆಂಗಳೂರಿನಲ್ಲಿ ಕಳೆದ ಕೆಲದಿನಗಳಿಂದ ಸುರಿಯುತ್ತಿದ್ದ ಮಳೆ ಕೊಂಚ ವಿರಾಮ ನೀಡಿದ್ದು, ಗುರುವಾರ ಮತ್ತೆ ಬೆಂಗಳೂರಿನಲ್ಲಿ ಬೆಳಗ್ಗೆಯಿಂದಲೇ ತುಂತುರು ಮಳೆ ಶುರುವಾಗಿದೆ.;
ಇತ್ತೀಚೆಗಷ್ಟೇ ಚೆನ್ನೈಗೆ ಅಪ್ಪಳಿಸಿದ ಫೆಂಜಲ್ ಚಂಡಮಾರುತದಿಂದಾಗಿ ಬೆಂಗಳೂರಿನಲ್ಲಿ ಕಳೆದ ಕೆಲದಿನಗಳಿಂದ ಸುರಿಯುತ್ತಿದ್ದ ಮಳೆ ಕೊಂಚ ವಿರಾಮ ನೀಡಿದ್ದು, ಗುರುವಾರ ಮತ್ತೆ ಬೆಂಗಳೂರಿನಲ್ಲಿ ಬೆಳಗ್ಗೆಯಿಂದಲೇ ತುಂತುರು ಮಳೆ ಶುರುವಾಗಿದೆ. ಡಿಸೆಂಬರ್ 18ರವರೆಗೂ ಮಳೆ ಮುಂದುವರೆಯಲಿರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಗುರುವಾರ ಬೆಳಗಿನಿಂದಲೇ ಅಲ್ಲಲ್ಲಿ ಚದುರಿದಂತೆ ಮಳೆಯಾಗುತ್ತಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲೂ ಬೆಳಗಿನಿಂದಲೇ ಮಳೆ ಶುರುವಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿತ್ರದುರ್ಗ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಶಿವಮೊಗ್ಗ, ವಿಜಯನಗರದಲ್ಲಿ ಸಾಧಾರಣ ಮಳೆಯಾಗಲಿದೆ. ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆಯಲ್ಲಿ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬಂಗಾಲಕೊಲ್ಲಿಯಲ್ಲಿ ಮತ್ತೊಂದು ಚಂಡಮಾರುತ ರೂಪುಗೊಳ್ಳುತ್ತಿದ್ದು, ಅದರ ಪರಿಣಾಮ ಈಗಾಗಲೇ ಬೆಂಗಳೂರಿನಲ್ಲಿ ಎರಡು ದಿನಗಳ ಕಾಲ ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಡಿ.13 ಮತ್ತು 14ರಂದು ಕರಾವಳಿ ಮತ್ತು ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಉತ್ತರ ಒಳನಾಡಿನಲ್ಲಿಒಣ ಹವೆ ಇರಲಿದೆ. ಉಡುಪಿ ಮತ್ತು ದಕ್ಷಿಣ ಕನ್ನಡ, ಹಾಸನ, ಕೊಡಗು, ಮೈಸೂರು, ಚಾಮರಾಜನಗರ ಮತ್ತು ಮಂಡ್ಯ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕೆಲವು ಕಡೆಗಳಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ.
ಕರಾವಳಿ ಜಿಲ್ಲೆಗಳಲ್ಲಿ ಹಗುರ ಮಳೆ
ಕರಾವಳಿ ಜಿಲ್ಲೆಗಳಲ್ಲಿ ಗುರುವಾರದಿಂದ 3 ದಿನಗಳ ಕಾಲ ಕರಾವಳಿ ಜಿಲ್ಲೆಗಳಲ್ಲಿ ಮಳೆ ಜೋರಾಗಲಿದೆ. ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ನಾಳೆ (ಡಿಸೆಂಬರ್ 13) ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.