Heavy Rain| ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಭಾರೀ ಮಳೆ ಸಾಧ್ಯತೆ: ಹವಾಮಾನ ಇಲಾಖೆ

ರಾಜ್ಯದಲ್ಲಿ ಒಂದು ವಾರಗಳ ಕಾಲ ಮಳೆ ಮುಂದುವರಿಯಲಿದೆ. ಮೇ ಮೊದಲ ವಾರದಲ್ಲಿ ಮಳೆ ಇನ್ನಷ್ಟು ಚುರುಕು ಪಡೆದುಕೊಳ್ಳಲಿದ್ದು, ಧಾರಾಕಾರ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.;

Update: 2025-04-28 06:07 GMT

ಮಳೆ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಬೆಂಗಳೂರು ಸೇರಿದಂತೆ ರಾಜ್ಯದ  22ಕ್ಕೂ ಅಧಿಕ ಜಿಲ್ಲೆಗಳಲ್ಲಿ ಸೋಮವಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಮತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ನರಗುಂದ, ಗದಗ, ಹಾವೇರಿ, ಯಲ್ಲಾಪುರ, ಉಪ್ಪಿನಂಗಡಿ, ಕಾರ್ಕಳ, ಧರ್ಮಸ್ಥಳ, ಮುಲ್ಕಿ, ಖಜೂರಿ, ಶಿಗ್ಗಾಂವ್, ತಿಪಟೂರು, ಎನ್​ಆರ್​ಪುರ, ನಾಪೋಕ್ಲು, ಚಿಕ್ಕಮಗಳೂರಿನಲ್ಲಿ ಮಳೆಯಾಗಿದೆ. ಮಂಗಳವಾರದಿಂದ ಶುಕ್ರವಾರದವರೆಗೆ ಬಿರುಗಾಳಿ ಮತ್ತು ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ.

ಒಂದು ವಾರ ಮಳೆ

ರಾಜ್ಯದಲ್ಲಿ ಒಂದು ವಾರಗಳ ಕಾಲ ಮಳೆ ಮುಂದುವರಿಯಲಿದೆ. ಮೇ ಮೊದಲ ವಾರದಲ್ಲಿ ಮಳೆ ಇನ್ನಷ್ಟು ಚುರುಕು ಪಡೆದುಕೊಳ್ಳಲಿದ್ದು, ಧಾರಾಕಾರ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. 

26 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌:

ರಾಜ್ಯದಲ್ಲಿ ಭಾರೀ ಮಳೆ ಮುಂದುವರಿಯುವ ಹಿನ್ನೆಲೆಯಲ್ಲಿ ಕೆಲವು ಜಿಲ್ಲೆಗಳಿಗೆ ಐಎಂಡಿ ಯೆಲ್ಲೋ ಅಲರ್ಟ್‌ ನೀಡಿದೆ. ಏಪ್ರಿಲ್‌ 30ಕ್ಕೆ ಕರ್ನಾಟಕದ ವಿವಿಧ ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, 26 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

Tags:    

Similar News