It's Raining in B'lore | ಬೆಂಗಳೂರಿನ ಶಾಲೆ- ಕಾಲೇಜುಗಳಿಗೆ ರಜೆ ಘೋಷಣೆ

ಬೆಂಗಳೂರಿನಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಅ.16ರಂದು ಬೆಂಗಳೂರಿನ ಎಲ್ಲಾ ಶಾಲಾ- ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ಜಗದೀಶ್ ಆದೇಶ ನೀಡಿದ್ದಾರೆ.;

Update: 2024-10-15 10:55 GMT
ಬೆಂಗಳೂರಿನಲ್ಲಿ ಭಾರೀ ಮಳೆಯಾಗುತ್ತಿದೆ.

ಬೆಂಗಳೂರಿನಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಅ.16ರಂದು ಬೆಂಗಳೂರಿನ ಎಲ್ಲಾ ಶಾಲಾ- ಕಾಲೇಜುಗಳಿಗೆ ರಜೆ ನೀಡಿ ನಗರ ಜಿಲ್ಲೆ ಜಿಲ್ಲಾಧಿಕಾರಿ ಜಗದೀಶ್ ಆದೇಶ ನೀಡಿದ್ದಾರೆ. 

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿದ್ದು, ಬೆಂಗಳೂರಿನಲ್ಲಿ ಬೆಳಿಗ್ಗೆಯಿಂದಲೂ ಭಾರೀ ಮಳೆಯಾಗುತ್ತಿದೆ. ರಸ್ತೆ-ಚರಂಡಿಗಳು ತುಂಬಿ ಹರಿಯುತ್ತಿವೆ. ಅಲ್ಲದೇ ವಿವಿಧ ಏರಿಯಾಗಳಲ್ಲಿ ಮರಗಳು ಸಹ ಮುರಿದುಬಿದ್ದು, ಮಳೆ ನಗರದ ಹಲವೆಡೆ ಭಾರೀ ಅನಾಹುತ ಸೃಷ್ಟಿಸಿದೆ.

ಮುಂದಿನ ಮೂರು ದಿನ ಬೆಂಗಳೂರಿನಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಬುಧವಾರ(ಅ.16) ಬೆಂಗಳೂರಿನ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಸೋಮವಾರ ರಾತ್ರಿಯಿಂದ ಬೆಂಗಳೂರಿನಲ್ಲಿ ಸುರಿಯುತ್ತಿರುವ ಮಳೆ ನಿಲ್ಲುವ ಮುನ್ಸೂಚನೆಯೇ ಕಾಣುತ್ತಿಲ್ಲ. ಈ ನಡುವೆ ಸಂಜೆಯೊಳಗೆ ಮತ್ತೆ ಭಾರಿ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೆಂಗಳೂರಿನ ಮೇಲೆ ದಟ್ಟವಾದ ಮಳೆ ಮೋಡಗಳು ಆವರಿಸಿದ್ದು, ಪರಿಣಾಮ ಇಂದು ಸಂಜೆಯೊಳಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ.

Tags:    

Similar News