ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದುವರಿದ ಭಾರೀ ಮಳೆ

ಬೆಳಗಾವಿ, ಬೈಲಹೊಂಗಲ, ಕಿತ್ತೂರು, ಖಾನಾಪುರ, ರಾಮದುರ್ಗ ಮತ್ತು ಸವದತ್ತಿ ತಾಲೂಕಿನಲ್ಲಿ ಶಾಲೆಗಳ ಜತೆಗೆ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.;

Update: 2025-08-19 04:20 GMT

ಸಾಂದರ್ಭಿಕ ಚಿತ್ರ

ರಾಜ್ಯದಲ್ಲಿ ವಾಯುಭಾರ ಕುಸಿತದಿಂದ ಭಾರಿ ಮಳೆಯಾಗುತ್ತಿದೆ. ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡಕ್ಕೆ ಆರೆಂಜ್ ಅಲರ್ಟ್ ನೀಡಲಾಗಿದೆ.

ಆ.19 ಮತ್ತು 20ರಂದು ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌, ದಕ್ಷಿಣ ಕನ್ನಡಕ್ಕೆ ಆರೆಂಜ್‌ ಅಲರ್ಟ್‌ ನೀಡಲಾಗಿದೆ. ಆ. 21ರಂದು ಕರಾವಳಿಯ ಎಲ್ಲಾ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ನೀಡಲಾಗಿದೆ. ನಿತ್ಯ ಸುರಿಯುತ್ತಿರುವ ಮಳೆಗೆ ಬೆಂಗಳೂರಿಗರು ಕೂಡ ಬೆಚ್ಚಿಬಿದ್ದಿದ್ದಾರೆ. ನಿತ್ಯ ಕೆಲಸ-ಕಾರ್ಯಕಗಳಿಗೆ ತೆರಳುವವರು ಟ್ರಾಫಿಕ್ ಸಮಸ್ಯೆಯಿಂದ ಪರದಾಡುವಂತಾಗಿದೆ. ಇಂದು ಕೂಡ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಮೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಜಾರಿಯಾಗಿದೆ. ಆರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ರಾಮನಗರ, ತುಮಕೂರು ಸೇರಿದಂತೆ ಉಳಿದ ಎಲ್ಲಾ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಗಾಳಿಯ ವೇಗ ಗಂಟೆಗೆ 40-50 ಕಿ.ಮೀ ಇರಲಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಈ ಕುರಿತು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಶಾಲೆಗಳಿಗೆ ರಜೆ 

ಉಡುಪಿ ಜಿಲ್ಲೆಯಲ್ಲಿ ಮಂಗಳವಾರ ಶಾಲಾ-ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ. ಹವಾಮಾನ ಇಲಾಖೆ ಇನ್ನೂ ಮೂರು ದಿನಗಳ ಕಾಲ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. 6 ಕ್ಕೂ ಹೆಚ್ಚು ಜಿಲ್ಲೆಗಳ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿತ್ತು. ಇಂದು (ಆಗಸ್ಟ್ 19) ಕೂಡ ಬೆಳಗಾವಿ, ಕೊಡಗು, ಹಾಸನ, ಬೀದರ್, ಉತ್ತರ ಕನ್ನಡ, ಧಾರವಾಡ, ಚಿಕ್ಕಮಗಳೂರು, ಉಡುಪಿ ಸೇರಿದಂತೆ ಒಟ್ಟು 8 ಜಿಲ್ಲೆಗಳ ಶಾಲಾ-ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ.

ಉಡುಪಿ ಜಿಲ್ಲೆಯ ಉಡುಪಿಯ ಸರಕಾರಿ, ಅನುದಾನಿತ ಹಾಗೂ ಖಾಸಗಿ ಅಂಗನವಾಡಿ, ಪ್ರಾಥಮಿಕ, ಪ್ರೌಢ, ಪ. ಪೂ.ಕಾಲೇಜು ಹಾಗೂ ಐ ಟಿ ಐ ಗಳಿಗೆ ಇಂದು (ಆ.19) ರಂದು ರಜೆ ಘೋಷಿಸಿದೆ.

ಬೆಳಗಾವಿ ಭಾಗದಲ್ಲೂ ಭಾರೀ ಮಳೆಯಾಗುತ್ತಿದ್ದು, ಪ್ರವಾಹದ ಸ್ಥಿತಿ ನಿರ್ಮಾಣವಾಗಿದೆ. ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಬೆಳಗಾವಿ, ಬೈಲಹೊಂಗಲ, ಕಿತ್ತೂರ, ಖಾನಾಪುರ, ರಾಮದುರ್ಗ, ಸವದತ್ತಿ, ಚಿಕ್ಕೋಡಿ, ಹುಕ್ಕೇರಿ ತಾಲೂಕಿನ ಎಲ್ಲ ಅಂಗನವಾಡಿ ಕೇಂದ್ರ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಬೆಳಗಾವಿ, ಬೈಲಹೊಂಗಲ, ಕಿತ್ತೂರು, ಖಾನಾಪುರ, ರಾಮದುರ್ಗ ಮತ್ತು ಸವದತ್ತಿ ತಾಲೂಕಿನಲ್ಲಿ ಶಾಲೆಗಳ ಜತೆಗೆ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಕೊಡಗು ಜಿಲ್ಲೆಯಲ್ಲಿ ವರುಣನ ಆರ್ಭಟ ಜೋರಾಗಿದ್ದು, ಇಂದು ಕೊಡಗು ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜಿಲ್ಲೆಯ ಅಂಗನವಾಡಿ, ಶಾಲೆ, ಪಿ.ಯು ಕಾಲೇಜುಗಳಿಗೆ ರಜೆ ನೀಡಲಾಗಿದೆ. ಕೊಡಗು ಜಿಲ್ಲೆಯಾದ್ಯಂತ ಜೋರು ಗಾಳಿ ಸಮೇತ ಧಾರಾಕಾರ ಮಳೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ವೆಂಕಟರಾಜ್ ರಜೆ ಘೋಷಣೆ ಮಾಡಿದ್ದಾರೆ. ಈಗಾಗಲೇ ಕೊಡಗು ಜಿಲ್ಲೆಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ನೀಡಿದೆ.

Tags:    

Similar News