ರಾಜ್ಯದಲ್ಲಿ ಐದು ದಿನ ಭಾರೀ ಮಳೆ; ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ
ಸೆಪ್ಟೆಂಬರ್ 1ರಂದು ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ಸೆಪ್ಟೆಂಬರ್ 2 ಮತ್ತು 3ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ತಿಳಿಸಿದೆ.;
ರಾಜ್ಯದಲ್ಲಿ ಮುಂದಿನ ಐದು ದಿನ ಭಾರೀ ಮಳೆಯಾಗಲಿದೆ.
ರಾಜ್ಯದ ಕರಾವಳಿ ಭಾಗಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಸೆಪ್ಟೆಂಬರ್ 1ರಂದು ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ಸೆಪ್ಟೆಂಬರ್ 2 ಮತ್ತು 3ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ತಿಳಿಸಿದೆ. ಹೀಗಾಗಿ ಈ ಜಿಲ್ಲೆಗಳಿಗೆ ಸೆಪ್ಟೆಂಬರ್ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಕೆಲವೆಡೆ ಮಾತ್ರ ಹಗುರದಿಂದ ಸಾಧಾರಣ ಮಳೆಯಾಗಬಹುದು. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ನಿರಂತರ ಗಾಳಿಯಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದೂ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಬೆಂಗಳೂರು ನಗರದಲ್ಲಿ ಮುಂದಿನ ಐದು ದಿನಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೂಡ ಮುಂದಿನ ಐದು ದಿನಗಳ ಕಾಲ ಮಳೆ ಮುನ್ಸೂಚನೆ ನೀಡಲಾಗಿದೆ.